ಆಸ್ಪತ್ರೆ ಅವ್ಯವಸ್ಥೆ: ಸದಸ್ಯರು ಕೆಂಡಾಮಂಡಲ


Team Udayavani, Apr 6, 2021, 3:45 PM IST

ಆಸ್ಪತ್ರೆ ಅವ್ಯವಸ್ಥೆ: ಸದಸ್ಯರು ಕೆಂಡಾಮಂಡಲ

ಕುಣಿಗಲ್‌: ಸಾರ್ವಜನಿಕ ಆಸ್ಪತ್ರೆಯಲ್ಲಿ ಕುಡಿಯುವ ನೀರು, ಕುರ್ಚಿ, ಸ್ವಚ್ಛತೆ ಹಾಗೂ ಉತ್ತಮ ವಾತಾವರ ಣವಿಲ್ಲ, ಶವ ಪರೀಕ್ಷಾ ಕೊಠಡಿ ಗಬ್ಬೆದ್ದು ನಾರುತ್ತಿದೆ. ಆಸ್ಪತ್ರೆಯೋ ಅಥವಾ ದನಗಳ ದೊಡ್ಡಿಯೋ ಎಂದು ತಾಪಂ ಸದಸ್ಯರು ವೈದ್ಯಾಧಿಕಾರಿಯನ್ನು ತರಾಟೆತೆಗೆದುಕೊಂಡ ಪ್ರಸಂಗ ತಾಪಂ ಸಾಮಾನ್ಯ ಸಭೆಯಲ್ಲಿ ಸೋಮವಾರ ನಡೆಯಿತು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಅಧ್ಯಕ್ಷೆ ನಾಗಮ್ಮಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರ್ಕಾರಿ ಆಸ್ಪತ್ರೆ ಆವ್ಯವಸ್ಥೆ ಹಾಗೂ ಆಡಳಿತ ವೈಖರಿ ಬಗ್ಗೆಸದಸ್ಯರಾದ ಹರೀಶ್‌ನಾಯ್ಕ, ಬಲರಾಮ, ದಿನೇಶ್‌ ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ನೂರು ಹಾಸಿಗೆಯುಳ್ಳ ಆಸ್ಪತ್ರೆ ಇದೆ. ಹತ್ತಾರು ಮಂದಿ ವೈದ್ಯರು, ಸಿಬ್ಬಂದಿ ಇದ್ದಾರೆ. ಆದರೆ, ರೋಗಿಗಳಿಗೆ ಕುಡಿಯಲು ನೀರಿನ ವ್ಯವಸ್ಥೆ ಇಲ್ಲ. ಶವ ಪರೀಕ್ಷಾ ಕೊಠಡಿ ಬಳಿ ವಿವಿಧ ಅವಘಡದಲ್ಲಿ ಮೃತಪಟ್ಟ ಸಂಬಂಧಿಕರು ಕೂರಲು ಕುರ್ಚಿಯಿಲ್ಲ. ಭಿಕ್ಷಕರಂತೆ ಕೂರುವಂತೆ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಗಣೇಶ್‌ ಬಾಬು ಅವರನ್ನು ತರಾಟೆ ತೆಗೆದುಕೊಂಡರು.

ಕ್ರಮ ಕೈಗೊಳ್ಳಿ: ಪ್ರಧಾನ ಮಂತ್ರಿ ಜನ ಔಷದ ಕೇಂದ್ರದಲ್ಲಿ ಕಡಿಮೆ ದರದಲ್ಲಿ ಮಾತ್ರೆ, ಔಷಧಸಿಗುತ್ತಿದೆ. ಆದರೆ, ವೈದ್ಯರು ಖಾಸಗಿ ಮೆಡಿಕಲ್‌ಗೆಚೀಟಿ ಬರೆದುಕೊಡುತ್ತಿದ್ದಾರೆ. ಅಲ್ಲದೆ, ಅಮೃತೂರುಆಸ್ಪತ್ರೆಯ ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲದೆರೋಗಿಗಳು ಪರದಾಡುವಂತಾಗಿದೆ. ಇದರ ಬಗ್ಗೆ ಟಿಎಚ್‌ಒ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ತಾಲೂಕು ವೈದ್ಯಾಧಿಕಾರಿ ಡಾ.ಜಗದೀಶ್‌ ಮಾತನಾಡಿ, ತಾಲೂಕಿನಲ್ಲಿ 44 ಮಂದಿ ಕೋವಿಡ್ ಸೋಂಕಿತರಿದ್ದಾರೆ. ಅವರನ್ನು ಹೋಂ ಕ್ವಾರಂಟೈನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ಮನೆಯಿಂದ ಹೊರ ಬರಬೇಡಿ, ಸ್ಯಾನಿಟೈಸರ್‌ ಹಾಗೂ ಮಾಸ್ಕ್ಹಾಕಿಕೊಳ್ಳಿ ಎಂದು ಹೇಳುವ ವೈದ್ಯಾಧಿಕಾರಿಗಳನ್ನುಬೈಯುತ್ತಾರೆ. ಏನು ಮಾಡುವುದು ಎಂದುತಿಳಿಸಿದರು. ರೋಗಿಗಳು ಬೈಯುತ್ತಾರೆ ಎಂದು ಅಸಹಾಯಕತೆ ತೋರಿಸಬೇಡಿ ನಿಮ್ಮ ಕರ್ತವ್ಯಪ್ರಾಮಾಣಿಕವಾಗಿ ಇರಲಿ ಎಂದು ಸದಸ್ಯ ದಿನೇಶ್‌ ತಿಳಿಸಿದರು.

ಮಕ್ಕಳಿಗೆ ಕೋವಿಡ್: ಪಟ್ಟಣದ ಜ್ಞಾನಭಾರತಿ, ತಾಲೂಕಿನ ಅರಮನೆ ಹೊನ್ನಮಾಚನಹಳ್ಳಿ,ನೀಲಸಂದ್ರ ಸೇರಿದಂತೆ ನಾಲ್ಕು ಶಾಲೆಗಳಲ್ಲಿ ನಾಲ್ಕುಮಂದಿ ಮಕ್ಕಳಲ್ಲಿ ಕೋವಿಡ್ ಕಾಣಿಸಿಕೊಂಡಿದ್ದು, ಆ ಮಕ್ಕಳಿಗೆ ಚಿಕಿತ್ಸೆ ಕೊಡಿಸಿ ಶಾಲೆಗೆ ರಜಾ ನೀಡಲಾಗಿದೆ ಎಂದು ಬಿಇಒ ತಿಮ್ಮರಾಜು ತಿಳಿಸಿದರು.

149 ವಿದ್ಯಾರ್ಥಿ ವೇತನ ಇಲ್ಲ: ತಾಲೂಕಿನ ವಿವಿಧಸರ್ಕಾರಿ ಶಾಲೆಯಲ್ಲಿ ಓದುತಿರುವ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಏಕೆ ನೀಡಿಲ್ಲ ಎಂದು ಅಧ್ಯಕ್ಷೆ ನಾಗಮ್ಮ ಬಿಇಒಅವರನ್ನು ಪ್ರಶ್ನಿಸಿದರು. 2019-20 ಹಾಗೂ 2020- 21 ನೇ ಸಾಲಿನಲ್ಲಿ ಪ.ಜಾತಿಯ 108 ವಿದ್ಯಾರ್ಥಿಗಳಿಗೆಹಾಗೂ ಪಂಗಡ 11 ವಿದ್ಯಾರ್ಥಿಗಳಿಗೆ ಹಾಗೂ ಇತರೆ 33 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 149ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ದಾಖಲೆಗಳನ್ನು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳಇಲಾಖೆಗೆ ಕಳಿಸಲಾಗಿದೆ ಎಂದು ಉತ್ತರಿಸಿದರು. ಈ ಸಂಬಂಧ ಏನು ಕ್ರಮ ಕೈಗೊಂಡಿದ್ದೀರಿ ಎಂದು ಅಧ್ಯಕ್ಷರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಕಾಳಮ್ಮ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ವಿಸ್ತರಣಾಧಿಕಾರಿ ಪಾರ್ವತವ್ವ ಅವರನ್ನು ಪ್ರಶ್ನಿಸಿದರು. ಆಧಾರ್‌ ಲಿಂಕ್‌ ಆಗದ ಕಾರಣ ವೇತನಕ್ಕೆ ತೊಂದರೆ ಉಂಟಾಗಿದೆ ಎಂದರು.

ತಾಪಂ ಇಒ ಜೋಸೆಫ್‌, ಸ್ಥಾಯಿ ಸಮಿತಿ ಅಧ್ಯಕ್ಷ ಜಿಯಾಉಲ್ಲಾ ಇದ್ದರು.

ಶಾಲೆ ಮಕ್ಕಳಿಂದಲೇಶೌಚಾಲಯ ಸ್ವಚ್ಛತೆ :

ತಾಲೂಕಿನ ವಿವಿಧ ಸರ್ಕಾರಿ ಶಾಲೆಗಳ ಶೌಚಾಲಯ ಮಕ್ಕಳಿಂದ ಸ್ವಚ್ಛತೆ ಮಾಡಿಸಲಾಗುತ್ತಿದೆ ಎಂದು ತಾಪಂ ಅಧ್ಯಕ್ಷೆ ನಾಗಮ್ಮ ಗಂಭೀರ ಆರೋಪ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದಬಿಇಒ ತಿಮ್ಮರಾಜು, ಗ್ರಾಮೀಣ ಭಾಗದಶಾಲೆಗಳ ಶೌಚಾಲಯ ಸ್ವಚ್ಛ ಮಾಡಲು ಯಾರುಸಿಗುತ್ತಿಲ್ಲ. ಹಾಗಾಗಿ ಮಕ್ಕಳ ಸಚಿವ ಸಂಪುಟ ಮಾಡಿ ಆ ಮೂಲಕ ಶೌಚಾಲಯ ಸ್ವತ್ಛಗೊಳಿಸಿ ಅವರಲ್ಲಿ ಸ್ವಚ್ಛತಾ ಅರಿವು ಮೂಡಿಸಲಾಗುತ್ತಿದೆಎಂದು ತಿಳಿಸಿದರು.  ಅಡುಗೆಯವರು ಅಥವಾ ಶಾಲಾ ಸಿಬ್ಬಂದಿಗಳಿಂದ ಸ್ವಚ್ಛತೆ ಮಾಡಿಸಿ ಎಂದು ಅಧ್ಯಕ್ಷರು ತಾಕೀತು ಮಾಡಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.