ತಂದೆ ಹೊಲದಲ್ಲಿ ; ಮಗ ಚಿನ್ನದ ಬೇಟೆಯಲ್ಲಿ : 14 ಚಿನ್ನದ ಪದಕಕ್ಕೆ ಕೊರಳೊಡ್ಡಿದ ರೈತನ ಮಗ

ರೈತನ ಮಗ ತೋಟಗಾರಿಕೆ ವಿವಿಯ ಚಿನ್ನದ ಹುಡುಗ | ಸಾಲ ಮಾಡಿ ಕಲಿತ ಪದವಿಗೆ ಸಿಕ್ತು 14 ಚಿನ್ನ | ತಾಯಿ-ಅಜ್ಜನೊಂದಿಗೆ ಚಿನ್ನ ಹಂಚಿಕೊಂಡ ಯುವ ರೈತ

Team Udayavani, Apr 6, 2021, 8:47 PM IST

gnyjyr

ಬಾಗಲಕೋಟೆ : ಪುಟ್ಟ ಹಳ್ಳಿಯಲ್ಲಿ ಅಪ್ಪ ಹೊಲದಲ್ಲಿ ಹಸು ನೋಡಿಕೊಳ್ಳುತ್ತ ಕೃಷಿಯಲ್ಲಿ ತೊಡಗಿದ್ದರೆ, ಇತ್ತ ಮಗ ವಿಶ್ವ ವಿದ್ಯಾಲಯದಲ್ಲಿ ಚಿನ್ನದ ಪದಕಗಳಿಗೆ ಕೊರಳೊಡುತ್ತಿದ್ದ. ಈ ಅದ್ಭುತ ಘಳಿಗೆಯನ್ನು ಕಣ್ತುಂಬಿಕೊಳ್ಳುತ್ತಿದ್ದ ತಾಯಿ-ಅಜ್ಜ ಆನಂದಬಾಷ್ಪ ಸುರಿಸಿದರು.

ಹೌದು, ಇಂತಹ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯದ 10ನೇ ಘಟಿಕೋತ್ಸವದ ಪದವಿ ಪ್ರದಾನ ಸಮಾರಂಭ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕುನೂರ ಎಂಬ ಪುಟ್ಟ ಹಳ್ಳಿಯ ರೈತ ವೆಂಕಟೇಶ ಮತ್ತು ತಾಯಿ ವಸಂತ ಅವರ ದ್ವಿತೀಯ ಪುತ್ರ ಪ್ರಶಾಂತ ವಿ, ತೋಟಗಾರಿಕೆ ವಿವಿಯ 2020-2021ನೇ ಸಾಲಿನ ಚಿನ್ನದ ಹುಡುಗನಾಗಿ ಹೊರ ಹೊಮ್ಮಿದ್ದಾನೆ.

ಅಪ್ಪ ಹೊಲದಲ್ಲಿ-ಪುತ್ರ ಚಿನ್ನದ ಬೇಟೆಯಲ್ಲಿ :

ಸಾಲ-ಸೋಲ ಮಾಡಿ, ಮಕ್ಕಳಿಗೆ ಶಿಕ್ಷಣ ಕೊಡಿಸುವ ತಂದೆ-ತಾಯಿ, ಆ ಮಕ್ಕಳು ಉನ್ನತ ಸಾಧನೆ ಮಾಡಿದಾಗ ಸ್ವತಃ ಹಾಜರಾಗಿ ಸಂಭ್ರಮಿಸುವುದು ಪರಂಪರೆ. ಆದರೆ, ಈ ಯುವ ರೈತನೂ ಎನ್ನಿಸಿಕೊಂಡಿರುವ ಪ್ರಶಾಂತ ಅವರ ತಂದೆ, ಮಂಗಳವಾರದ ಪದವಿ ಪ್ರದಾನ ಸಮಾರಂಭಕ್ಕೆ ಬಂದಿರಲಿಲ್ಲ. ಕಾರಣ, ಹೊಲದಲ್ಲಿ ಹಸು ಸಾಕಿದ್ದು ಅವುಗಳ ಉಸ್ತುವಾರಿ ಜತೆಗೆ ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಪದವಿ ಪಡೆಯಲು ಪ್ರಶಾಂತನ ಜತೆಗೆ ತಾಯಿ ವಸಂತ ಹಾಗೂ ಅಜ್ಜ ಚನ್ನೇಗೌಡ ಅವರೊಂದಿಗೆ ಬಂದಿದ್ದ. ಈ ಸಂಭ್ರಮದಲ್ಲಿ ತಂದೆ ಅನಿವಾರ್ಯವಾಗಿ ಭಾಗಿಯಾಗಲು ಆಗದೆ ಕೊರಗಿದ್ದರೂ, ತನ್ನ ಹೆತ್ತ ತಾಯಿ-ಪ್ರೀತಿಯಿಂದ ನೋಡಿಕೊಳ್ಳುವ ಅಜ್ಜನ ಕೊರಳಿಗೆ ತಾನು ಪಡೆದ 14 ಚಿನ್ನದ ಪದಕಗಳ ಗೊಂಚಲು ಹಾಕುವ ಮೂಲಕ ಪ್ರಶಾಂತ ಸಂತಸ ಹಂಚಿಕೊಂಡ.

ಅಪ್ಪಟ ಕೃಷಿಕರು:

ತೋಟಗಾರಿಕೆ ವಿವಿಯ ಮೈಸೂರಿನ ತೋಟಗಾರಿಕೆ ಕಾಲೇಜಿನಲ್ಲಿ ಬಿಎಸ್ಸಿ ಅಂತಿಮ ವರ್ಷದಲ್ಲಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಇಡೀ ವಿಶ್ವ ವಿದ್ಯಾಲಯಕ್ಕೆ ಮೊದಲ ರ್‍ಯಾಂಕ್ ಪಡೆದ ಪ್ರಶಾಂತ, ಒಟ್ಟು 14 ಚಿನ್ನದ ಪದಕ ಬಾಚಿಕೊಂಡರು. ಪ್ರಶಾಂತ ಅವರ ತಾಯಿ-ತಂದೆ ಇಬ್ಬರೂ ಅಪ್ಪಟ ಕೃಷಿಕರು ಎಂಬುದು ವಿಶೇಷ.

ತೋಟಗಾರಿಕೆ ವಿವಿಯ ಪ್ರತಿ ಬಾರಿಯ ಘಟಿಕೋತ್ಸವದಲ್ಲಿ ಅತಿಹೆಚ್ಚು ಚಿನ್ನದ ಪದಕ ಪಡೆಯುತ್ತಿದ್ದ ವಿದ್ಯಾರ್ಥಿಗಳಲ್ಲಿ ಬಾಲಕಿಯರೇ ಈ ವರೆಗೆ ಮುಂದಿದ್ದರು. ಅದರಲ್ಲೂ ಶಿಕ್ಷಕರ ಮಕ್ಕಳು, ಖಾಸಗಿ ಕಂಪನಿಗಳ ನೌಕರರ ಮಕ್ಕಳು ಹೆಚ್ಚು ಚಿನ್ನದ ಪದಕ ಪಡೆಯುತ್ತಿದ್ದರು. ಈ ಬಾರಿ ಅಪ್ಪಟ ಕೃಷಿ ಕುಟುಂಬದ ಪ್ರಶಾಂತ 14 ಚಿನ್ನದ ಪದಕ ಬಾಚಿಕೊಂಡಿದ್ದು ವಿಶೇಷ.

ಪ್ರಶಾಂತ ಅವರ ತಂದೆ ವೆಂಕಟೇಶ ಮತ್ತು ತಾಯಿ ವಸಂತ ಅವರು, ಕುನೂರಿನಲ್ಲಿ 2 ಎಕರೆ ಭೂಮಿ ಇದೆ. ಅದರಲ್ಲಿ ರೇಷ್ಮೆ ಕೃಷಿ ಮಾಡುತ್ತಿದ್ದು, ಜತೆಗೆ ಹೈನುಗಾರಿಕೆಯೂ ಅವರ ಉಪ ಕಸಬು. ಇಬ್ಬರು ಮಕ್ಕಳೂ ತಂದೆಗೆ ಕೃಷಿ ಜತೆಗೆ ಸಹಕಾರ ನೀಡುವ ಜತೆಗೆ ತೋಟಗಾರಿಕೆ ಪದವಿ ಅಧ್ಯಯನದಲ್ಲೇ ತೊಡಗಿದ್ದಾರೆ. ಮೊದಲ ಮಗ ಪ್ರಶಾಂತ, 14 ಚಿನ್ನದ ಪದಕ ಪಡೆದಿದ್ದು ಕಂಡು ತಾಯಿ ವಸಂತ, ಆನಂದದ ಕಣ್ಣೀರು ಹಾಕಿ, ಮಗನಿಗೆ ಮುತ್ತಿಕ್ಕಿ ಸಂಭ್ರಮಿಸಿದರು.

ಸಾಲ ಮಾಡಿ ಶಾಲೆ ಕಲಿತ ಹುಡುಗ :

ಪ್ರಶಾಂತ, 1 ರಿಂದ 6ನೇ ತರಗತಿ ವರೆಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತಿದ್ದು, ಬಳಿಕ ಪಿಯುಸಿ ವರೆಗೆ ಕನಕಪುರದಲ್ಲಿ ಕರಿಯಪ್ಪ ಅವರು ಸ್ಥಾಪಿಸಿದ ಗ್ರಾಮ ವಿದ್ಯಾ ಪ್ರಚಾರಕ ಸಂಘದ ಶಾಲೆ-ಕಾಲೇಜಿನಲ್ಲಿ ಅಧ್ಯಯನ ಮಾಡಿದ್ದಾರೆ. ಎಸ್ಸೆಸ್ಸೆಲ್ಸಿಯಲ್ಲಿ 91.84 ಅಂಕ ಪಡೆದಿದ್ದರೆ, ಪಿಯುಸಿಯಲ್ಲಿ ಶೇ.93.84 ಅಂಕ ಪಡೆದಿದ್ದಾರೆ.

ಪ್ರಶಾಂತ ತನ್ನ ಪದವಿ ವ್ಯಾಸಂಗಕ್ಕಾಗಿ ರಾಮನಗರ ಜಿಲ್ಲೆಯ ಬೇಕುಪ್ಪೆ ಶಾಖೆಯ ಯೂನಿಯನ್ ಬ್ಯಾಂಕ್‌ನಲ್ಲಿ ಒಟ್ಟು 2.40 ಲಕ್ಷ ರೂ. ಸಾಲ ಮಾಡಿದ್ದಾರೆ. ಮುಂದೆ ಕೃಷಿ ವಿಜ್ಞಾನಿಯಾಗಿ, ಶಿಕ್ಷಣಕ್ಕಾಗಿ ಮಾಡಿದ ಸಾಲ ತೀರಿಸುವ ಗುರಿಯೂ ಹೊಂದಿದ್ದಾರೆ. ಸಧ್ಯ ಬೆಂಗಳೂರಿನ ಜಿಕೆವಿಕೆಯಲ್ಲಿ ಅನುವಂಶೀಯ ಸಸ್ಯ ತಳಿ ಅಭಿವೃದ್ಧಿ ವಿಷಯದಲ್ಲಿ ಎಂಎಸ್ಸಿ ಪದವಿ ಅಧ್ಯಯನ ಮಾಡುತ್ತಿದ್ದಾರೆ.

ರೈತರು ಪಾರಂಪರಿಕ ಒಂದೇ ಕೃಷಿ ಮಾಡುತ್ತಿದ್ದು, ಇದರಿಂದ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಕೃಷಿಯಲ್ಲಿ ಬಹುಪದ್ಧತಿ ಮಾಡಬೇಕು. ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಕೃಷಿ ವಿಜ್ಞಾನಿ ಆಗಬೇಕು ಎಂಬುದು ನನ್ನ ಗುರಿ. ನಾನು ಚಿಕ್ಕಂದಿನಿಂದಲೂ ಹೊಲದಲ್ಲಿ ಗಿಡ-ಮರ-ಬೆಳೆಗಳೊಂದಿಗೆ ಬೆಳೆದವನು. ಹೀಗಾಗಿ ಬಿಎಸ್ಸಿ ತೋಟಗಾರಿಕೆ ಪದವಿಯಲ್ಲಿ ಅತಿಹೆಚ್ಚು ಚಿನ್ನದ ಪದಕ ಪಡೆಯಲು, ವಿವಿಗೆ ರ್‍ಯಾಂಕ್ ಪಡೆಯಲು ಅನುಕೂಲವಾಯಿತು. (ಪ್ರಶಾಂತ ವಿ, 14 ಚಿನ್ನದ ಪದಕ ಪಡೆದ ವಿದ್ಯಾರ್ಥಿ )

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.