ಬೆಂಗಳೂರು ವಿಮಾನ ನಿಲ್ದಾಣಕ್ಕೂ ತಟ್ಟಿದ ಮುಷ್ಕರದ ಬಿಸಿ


Team Udayavani, Apr 8, 2021, 11:01 AM IST

ಬೆಂಗಳೂರು ವಿಮಾನ ನಿಲ್ದಾಣಕ್ಕೂ ತಟ್ಟಿದ ಮುಷ್ಕರದ ಬಿಸಿ

ದೇವನಹಳ್ಳಿ: ಕೆಎಸ್‌ಆರ್‌ಟಿಸಿ, ಬಿಎಂಟಿಸಿ ನೌಕರರು ಬಸ್‌ಗಳ ಸಂಚಾರ ಸ್ಥಗಿತಗೊಳಿಸಿ, ನಡೆಸುತ್ತಿರುವ ಮುಷ್ಕರದಿಂದ ಜಿಲ್ಲಾದ್ಯಂತ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಬಸ್‌ ಸಿಗದೇ ಪರದಾಡಿದರು. ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತಿತರರ ಸ್ಥಳಗಳಿಗೆ ಹೋಗಬೇಕಿದ್ದ ಪ್ರಯಾಣಿಕರು ಖಾಸಗಿ ಬಸ್‌ಗಾಗಿ ನಿಲ್ದಾಣ ದಲ್ಲಿಯೇ ಕಾಯುತ್ತಿದ್ದರು. ಆಗೊಮ್ಮೆ ಈಗೊಮ್ಮೆ ಬರುತ್ತಿದ್ದ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರು ನೂಕು ನುಗ್ಗಲಿನಲ್ಲೇ ಪ್ರಯಾಣ ಬೆಳೆಸುವಂತಾಗಿತ್ತು.

ವಿಮಾನ ನಿಲ್ದಾಣಕ್ಕೆ ತಟ್ಟಿದ ಬಿಸಿ: ಸಾರಿಗೆ ನೌಕರರ ಮುಷ್ಕರ ಬಿಸಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ತಟ್ಟಿತ್ತು. ರಾತ್ರಿ ಪಾಳಿಯಲ್ಲಿ ಬಂದಿದ್ದ ವಾಯುವಜ್ರ ಬಸ್‌ಗಳು ಡಿಪೋಗಳತ್ತ ಮುಖಮಾಡಿದ್ದವು. ವಿಮಾನ ನಿಲ್ದಾಣದಲ್ಲಿ

ಬಿಎಂಟಿಸಿ ಬಸ್‌ ನಿಲ್ದಾಣಗಳು ಇಲ್ಲದೆ ನಿಲ್ದಾಣ ಖಾಲಿ ಆಗಿತ್ತು. ಪ್ರಯಾಣಿಕರು ಟ್ಯಾಕ್ಸಿಗಳ ಮೊರೆ ಹೋಗುವಂತೆ ಆಯಿತು. ಬೆಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಇಡೀ ದಿನ ಒಂದೇ ಒಂದು ಬಸ್‌ ಬಂದಿಲ್ಲ. ಟ್ಯಾಕ್ಸಿಗಳಲ್ಲಿ ದುಪ್ಪಟ್ಟು ಹಣಕೊಟ್ಟು ಹೋಗಬೇಕಾದ ಪರಿಸ್ಥಿತಿ ವಿಮಾನ ಪ್ರಯಾಣಿಕರದ್ದಾಗಿತ್ತು. ವಿಮಾನ ನಿಲ್ದಾಣದಿಂದ ದಿನಕ್ಕೆ 300 ಟ್ರಿಪ್‌ ಹೋಗುತ್ತಿದ್ದ ಬಸ್‌ ಗಳು, ಮುಷ್ಕರ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಿದ್ದವು.

ಬಸ್‌ ನಿಲ್ದಾಣಕ್ಕೆ ಆರ್‌ಟಿಒ ಭೇಟಿ: ಸಾರಿಗೆ ನೌಕರರಮುಷ್ಕರದ ಹಿನ್ನೆಲೆಯಲ್ಲಿ ಪಟ್ಟಣದ ಬಸ್‌ ನಿಲ್ದಾಣದಿಂದ ಖಾಸಗಿ ಬಸ್‌ ಸಂಚಾರ ಮಾಡುತ್ತಿದ್ದರಿಂದ ಎಆರ್‌ಟಿಒ ಉಮೇಶ್‌ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಅವರು, ಸಾರಿಗೆ ನೌಕರರ ಮುಷ್ಕರ ಇರುವುದರಿಂದ ಖಾಸಗಿ ಬಸ್‌ ಗಳಲ್ಲಿ ಹೆಚ್ಚು ಹಣ ತೆಗೆದುಕೊಳ್ಳಬಾರದು. ಪ್ರಯಾಣಿಕರಿಂದ ದೂರು ಬಂದರೆ ತಕ್ಷಣ ನಿಮ್ಮ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಬಾರದು. 60ಕ್ಕೂ ಹೆಚ್ಚು ಖಾಸಗಿ ಬಸ್‌ಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ ಎಂದು ಹೇಳಿದರು. ಪ್ರಯಾಣಿಕರಿಗೆ ತೊಂದರೆ ಯಾಗದಂತೆ ಆರ್‌ ಟಿಒ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕಾಂ ಹೂಡಿದ್ದರು.

ನಮ್ಮ ಬೇಡಿಕೆ ಈಡೇರುವ ತನಕ, ರಾಜ್ಯ ಸಂಘದಿಂದ ಆದೇಶ ಬರುವ ತನಕ ಬಸ್‌ ಓಡಿಸುವುದಿಲ್ಲ. ಸರ್ಕಾರಿ ನೌಕರರೆಂದು ನಮ್ಮನ್ನೂ ಪರಿಗಣಿಸಬೇಕು. ನಮ್ಮ ಹಲವು ಬೇಡಿಕೆ ಸರ್ಕಾರ ಶೀಘ್ರವೇ ಈಡೇರಿಸುವಂತೆ ಆಗಬೇಕು.

  • ಮಂಜುನಾಥ್‌, ಬಿಎಂಟಿಸಿ ಬಸ್‌ ಚಾಲಕ

ಬೆಂಗಳೂರಿನ ಮಾರುಕಟ್ಟೆಗೆ ತಾವು ಬೆಳೆದ ಹೂ, ತರಕಾರಿ ನಿತ್ಯ ತೆಗೆದು ಕೊಂಡು ಹೋಗುತ್ತಿದ್ದೆವು. ರಸ್ತೆ ಸಾರಿಗೆ ಸಂಸ್ಥೆ ಬಸ್‌ ಇಲ್ಲದೆ ಪರದಾಡುವಂತೆ ಆಗಿದೆ. ಕೃಷಿ ಉತ್ಪನ್ನ ನಿಗದಿತ ಸಮಯಕ್ಕೆ ತಲುಪಿಸಲು ಆಗುತ್ತಿಲ್ಲ.

  • ಮುನಿಶಾಮಪ್ಪ, ರೈತ

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.