ಜಿಲ್ಲಾ ಕಸಾಪ ಚುನಾವಣೆ: ಹಾಲಿ ಅಧ್ಯಕ್ಷ ಬಿ.ಎಸ್. ವಿನಯ್ ನಾಮಪತ್ರ ತಿರಸ್ಕೃತ

ಎರಡು ಕಡೆ ಸದಸ್ಯತ್ವ ಪಡೆದಿದ್ದು ಅಸಿಂಧುತ್ವಕ್ಕೆ ಕಾರಣ

Team Udayavani, Apr 9, 2021, 9:47 PM IST

ಜಿಲ್ಲಾ ಕಸಾಪ ಚುನಾವಣೆ: ಹಾಲಿ ಅಧ್ಯಕ್ಷ ಬಿ.ಎಸ್. ವಿನಯ್ ನಾಮಪತ್ರ ತಿರಸ್ಕೃತ

ಚಾಮರಾಜನಗರ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಹಾಲಿ ಅಧ್ಯಕ್ಷ ಬಿ.ಎಸ್. ವಿನಯ್ ಅವರ ನಾಮಪತ್ರ ತಿರಸ್ಕೃತ ಗೊಂಡಿದೆ.

ವಿನಯ್ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ತಮಿಳುನಾಡಿನ ಗಡಿನಾಡು ಘಟಕ ಹಾಗೂ ಚಾಮರಾಜನಗರ ಜಿಲ್ಲಾ ಕಸಾಪ ಘಟಕ ಎರಡೂ ಕಡೆ ಸದಸ್ಯತ್ವ ಹೊಂದಿರುವುದು ಪ್ರಜಾಪ್ರತಿನಿಧಿ ಕಾಯ್ದೆಯಲ್ಲಿನ ನಿಯಮಕ್ಕೆ ವಿರುದ್ಧವಾಗಿರುವುದರಿಂದ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಇದಲ್ಲದೇ ಕಸಾಪ ತಮಿಳುನಾಡು ಗಡಿನಾಡು ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರವನ್ನೂ ಇದೇ ಕಾರಣದ ಮೇಲೆ ತಿರಸ್ಕರಿಸಲಾಗಿದೆ.

ಚಾ.ನಗರ ಜಿಲ್ಲಾ ಕಸಾಪದಲ್ಲಿ ಹಾಲಿ ಅಧ್ಯಕ್ಷರಾಗಿದ್ದ ಬಿ.ಎಸ್. ವಿನಯ್ ಅವರು ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ್ದರು. ಏ. 8ರಂದು ನಾಮಪತ್ರ ಪರಿಶೀಲನೆ ಇತ್ತು. ಈ ಸಂದರ್ಭದಲ್ಲಿ ಇನ್ನೋರ್ವ ಅಭ್ಯರ್ಥಿ ನಾಗೇಶ್‌ಸೋಸ್ಲೆ ಅವರು ತಕರಾರು ಅರ್ಜಿ ಸಲ್ಲಿಸಿದ್ದರು. ಕಸಾಪ ತಮಿಳುನಾಡಿನ ಗಡಿನಾಡು ಘಟಕ ಅಧ್ಯಕ್ಷ ಸ್ಥಾನದ ಚುನಾವಣೆಗೂ ವಿನಯ್ ಬೆಂಗಳೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡು ಮತದಾರರ ಪಟ್ಟಿಯಲ್ಲಿ ಅವರ ಹೆಸರಿದೆ ಎಂದು ದೂರು ಸಲ್ಲಿಸಲಾಗಿತ್ತು. ಅವರಲ್ಲದೇ ಇನ್ನಿತರ ಅಭ್ಯರ್ಥಿಗಳಾದ ಸಿ.ಎಂ. ನರಸಿಂಹಮೂರ್ತಿ, ಸ್ನೇಹಾ, ರವಿಕುಮಾರ್, ಶೈಲಕುಮಾರ್ ಸಹ ತಕರಾರು ಅರ್ಜಿ ಸಲ್ಲಿಸಿ, ವಿನಯ್ ನಾಮಪತ್ರ ತಿರಸ್ಕರಿಸಿ ಕಾನೂನು ಕ್ರಮ ಕೈಗೊಳ್ಳಲು ಬೆಂಗಳೂರು ಮತ್ತು ಚಾಮರಾಜನಗರ ಚುನಾವಣಾಧಿಕಾರಿಯವರಿಗೆ ಕೋರಿದ್ದರು.

ಇದನ್ನೂ ಓದಿ :‘ಕೊರೊನಾ ಕರ್ಫ್ಯೂ’ ಅಪಹಾಸ್ಯ ಮಾಡಿದವರಿಗೆ ತಿರುಗೇಟು ನೀಡಿದ ಸಚಿವ ಕೆ.ಸುಧಾಕರ್

ಚಾ.ನಗರ ಜಿಲ್ಲಾ ಕಸಾಪ ಸದಸ್ಯರಾಗಿ ಬಿ.ಎಸ್. ವಿನಯ್ ಕೇರಾಫ್ ಮಹದೇವಸ್ವಾಮಿ, ಹೆಗ್ಗೊಠಾರ, ಚಾ.ನಗರ ತಾಲೂಕು ವಿಳಾಸದಲ್ಲಿ ಮತದಾರರ ಪಟ್ಟಿಯಲ್ಲಿದ್ದಾರೆ. ತಮಿಳುನಾಡಿನ ಗಡಿನಾಡು ಘಟಕದ ಮತದಾರರ ಪಟ್ಟಿಯಲ್ಲಿ ಬಿ.ಎಸ್. ವಿನಯ್, ನೀಲಗಿರಿ ಮೋಟಾರ್‌ಸ್, ತಾಳವಾಡಿ, ಈರೋಡು ಜಿಲ್ಲೆ ಎಂಬ ವಿಳಾಸ ನೀಡಿದ್ದಾರೆ. ಹೀಗೆ ಏಕಕಾಲದಲ್ಲಿ ಎರಡೂ ಕಡೆ ಸದಸ್ಯತ್ವ ಹೊಂದಿರುವುದರಿಂದ ಯಾವುದೇ ಅಧ್ಯಕ್ಷ ಸ್ಥಾನಕ್ಕೂ ಸ್ಪರ್ಧಿಸಲು ಅರ್ಹತೆ ಹೊಂದಿರುವುದಿಲ್ಲ ಎಂದು ಬೆಂಗಳೂರಿನ ಕೇಂದ್ರ ಚುನಾವಣಾಧಿಕಾರಿ, ಶುಕ್ರವಾರ ಮಧ್ಯಾಹ್ನ ಮೊದಲಿಗೆ ಗಡಿನಾಡು ಘಟಕದ ನಾಮಪತ್ರ ತಿರಸ್ಕರಿಸಿದರು. ಇದೇ ಮಾನದಂಡದ ಮೇಲೆ ಚಾ.ನಗರ ಜಿಲ್ಲಾ ಸಹಾಯಕ ಚುನಾವಣಾಧಿಕಾರಿ ಚಾ.ನಗರ ಜಿಲ್ಲಾ ಕಸಾಪ ಅಧ್ಯಕ್ಷ ಸ್ಥಾನದ ನಾಮಪತ್ರ ತಿರಸ್ಕರಿಸಿದರು.

ಬಿ.ಎಸ್. ವಿನಯ್ ಅವರು ಚಾಮರಾಜನಗರ ಜಿಲ್ಲಾ ಕಸಾಪ ಚುನಾವಣೆಯ ಪ್ರಬಲ ಅಭ್ಯರ್ಥಿಯಾಗಿದ್ದರು.
ಮಲೆಯೂರು ಗುರುಸ್ವಾಮಿ ನಾಮಪತ್ರ ವಾಪಸ್: ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಸಾಹಿತಿ ಪ್ರೊ. ಮಲೆಯೂರು ಗುರುಸ್ವಾಮಿಯವರು ಶುಕ್ರವಾರ ತಮ್ಮ ನಾಮಪತ್ರ ವಾಪಸ್ ಪಡೆದರು.

ಹೊಸಬರಿಗೆ ಅವಕಾಶ ನೀಡೋಣ ಎಂಬ ಕಾರಣಕ್ಕೆ ನಾಮಪತ್ರ ವಾಪಸ್ ಪಡೆಯಲು ಕಾರಣ. ಅವಿರೋಧ ಆಯ್ಕೆಯಾಗುತ್ತೀರಿ ಎಂಬ ಹಿರಿಯ ಸದಸ್ಯರ ಒತ್ತಾಯಕ್ಕೆ ಮಣಿದು ನಾಮಪತ್ರ ಸಲ್ಲಿಸಿದ್ದೆ. ಆದರೆ ಈಗ ಅಂಥ ಪರಿಸ್ಥಿತಿ ಕಾಣುತ್ತಿಲ್ಲ. ಎರಡು ಮೂರು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಬೇಸರವಾಗಿದೆ ಹಾಗಾಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ಮ.ಗು. ಮಾಧ್ಯಮಗಳಿಗೆ ತಿಳಿಸಿದರು.

ನಾಮಪತ್ರ ವಾಪಸ್ ಪಡೆಯಲು ಏ. 12 ಕೊನೆಯ ದಿನಾಂಕವಾಗಿದೆ. ಪ್ರಸ್ತುತ ಸಿ.ಎಂ. ನರಸಿಂಹಮೂರ್ತಿ, ಶೈಲಕುಮಾರ್, ನಾಗೇಶಸೋಸ್ಲೆ, ನಿರಂಜನಕುಮಾರ್, ಸ್ನೇಹಲಕ್ಷ್ಮಿ, ಮಾದಾಪುರ ರವಿಕುಮಾರ್, ಶಿವಾಲಂಕಾರಯ್ಯ ಅವರ ನಾಮಪತ್ರಗಳು ಅಂಗೀಕೃತವಾಗಿವೆ. ಇವರಲ್ಲಿ ಕಣದಲ್ಲಿ ಯಾರ್ಯಾರು ಉಳಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
ಮೇ. 9ರಂದು ರಾಜ್ಯ ಹಾಗೂ ಜಿಲ್ಲಾ ಘಟಕಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಯಲಿದೆ.

ಟಾಪ್ ನ್ಯೂಸ್

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.