ವಿಟ್ಲ: ಪಿಕಪ್ ಮತ್ತು ಕಾರಿನ ನಡುವೆ ಭೀಕರ ಅಪಘಾತ; ಪವಾಡಸದೃಶ ರೀತಿ ಪಾರಾದ ಕಾರು ಚಾಲಕ
Team Udayavani, Apr 11, 2021, 9:28 AM IST
ವಿಟ್ಲ: ಪಿಕಪ್ ವಾಹನ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರು ಚಾಲಕ ಪವಾಡಸದೃಶವಾಗಿ ಪಾರಾದ ಘಟನೆ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಅಕ್ಷಯ ಸಭಾಭವನದ ಮುಂಭಾಗ ರವಿವಾರ ಮುಂಜಾನೆ ನಡೆದಿದೆ.
ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರಿನ ಚಾಲಕ ಕಂಠಪೂರ್ತಿ ಕುಡಿದು ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ವಿಟ್ಲ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಪಿಕಪ್ ಗೆ ಢಿಕ್ಕಿ ಹೊಡೆದಿದೆ. ಕಾರು ಭಾಗಶಃ ಜಖಂ ಗೊಂಡಿದ್ದರೂ ಚಾಲಕ ಪಾರಾಗಿದ್ದಾರೆ.
ಇದನ್ನೂ ಓದಿ:ಶೋಫಿಯಾನ್ ನಲ್ಲಿ ಎನ್ ಕೌಂಟರ್: ಮೂವರು ಉಗ್ರರ ಹತ್ಯೆಗೈದ ಭದ್ರತಾ ಪಡೆಗಳು
ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲೂ ತೆಲಂಗಾಣ ಮಾದರಿ ಕ್ರಮ : ಖಾಯಂ ನೌಕರರಿಗೂ “ವಜಾ’ ಶಿಕ್ಷೆ?