ಪ್ರತಿ ತಾಲೂಕಿಗೆ 25 ಲಕ Ò “ನೀರನುದಾನ’


Team Udayavani, Apr 11, 2021, 5:58 PM IST

11-19

ಸಂದೀಪ ಜಿ.ಎನ್‌. ಶೇಡ್ಗಾರ್‌

ಚಿಕ್ಕಮಗಳೂರು: ಬೇಸಿಗೆ ಕಾಲ ಆರಂಭವಾಗಿದ್ದು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಸಮರ್ಥವಾಗಿ ನಿಭಾಯಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಕುಡಿಯುವ ನೀರಿನ ನಿರ್ವಹಣೆಗಾಗಿ ಪ್ರತಿ ತಾಲೂಕಿಗೆ 25 ಲಕ್ಷ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ.

2017-18ರಲ್ಲಿ ಬರಗಾಲಕ್ಕೆ ತುತ್ತಾಗಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯಿಂದ ಜಿಲ್ಲೆ ನಲುಗಿ ಹೋಗಿತ್ತು. ಬರ ಪರಿಸ್ಥಿತಿಯನ್ನು ಜಿಲ್ಲಾಡಳಿತ ಸಮರ್ಥವಾಗಿ ಎದುರಿಸಿತ್ತು. ಅಂತಹ ಪರಿಸ್ಥಿತಿ ಮತ್ತೆ ಜಿಲ್ಲೆಯಲ್ಲಿ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಬಹುತೇಕ ಕುಡಿಯುವ ನೀರಿನ ಸಮಸ್ಯೆ ಎದುರಾಗ ಬಹುದಾದ ಸಮಸ್ಯಾತ್ಮಕ ಗ್ರಾಮಗಳನ್ನು ಜಿಲ್ಲಾಡಳಿತ ಗುರುತಿಸಿದೆ.

ಚಿಕ್ಕಮಗಳೂರು ತಾಲೂಕಿನ ಲಕ್ಯಾ ಮತ್ತು ಕಸಬಾ ಹೋಬಳಿ (ಚಿಕ್ಕಮಗಳೂರು), ಕಡೂರು ತಾಲೂಕಿನ ಸಖರಾಯಪಟ್ಟಣ, ಸಿಂಗಟಗೆರೆ ಹಾಗೂ ಪಂಚನಹಳ್ಳಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳು, ಮೂಡಿಗೆರೆ ತಾಲೂಕಿನ ಬಾಳೂರು, ತರೀಕೆರೆ ತಾಲೂಕಿನ ಕೆಲವು ಗ್ರಾಮಗಳು, ಅಜ್ಜಂಪುರ ತಾಲೂಕಿನ ಶಿವನಿ, ಕೂಡ್ಲರು ವ್ಯಾಪ್ತಿಯ ಗ್ರಾಮಗಳು, ಶೃಂಗೇರಿ ತಾಲೂಕಿನ ಕಿಗ್ಗಾ ಹಾಗೂ ನರಸಿಂಹರಾಜಪುರ ತಾಲೂಕಿನ ಕಸಬಾ (ಬಾಳೆಹೊನ್ನೂರು) ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಈಗಾಗಲೇ ಗುರುತಿಸಿದೆ.

ಝರಿ ಪ್ರದೇಶದಿಂದ ಬರುವ ನೀರಿನ ಲಭ್ಯತೆ ಕಡಿಮೆಯಾಗುವುದರಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹಾಗೂ ಚಿಕ್ಕಮಗಳೂರು ಹಾಗೂ ಖಾಂಡ್ಯ, ತರೀಕೆರೆ ತಾಲೂಕಿನ ಲಿಂಗದಹಳ್ಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯನ್ನು ಗುರುತಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡುವ ದೃಷ್ಟಿಯಿಂದ ಜಿಲ್ಲಾಡಳಿತ ಸಕಲ ಸಿದ್ಧತೆಗಳಿಗೆ ಮುಂದಾಗಿದೆ.

ಕುಡಿಯುವ ನೀರಿಗೆ ಕ್ರಿಯಾಯೋಜನೆ: ಬೇಸಿಗೆಯ ಝಳ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಈ ವರ್ಷ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕೈಗೊಂಡಿರುವ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆ ಅ ಧಿಕಾರಿಗಳು ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಸಲ್ಲಿಸಲು ಮುಂದಾಗಿದ್ದಾರೆ. ಮುಂಚಿತವಾಗಿಯೇ ಪ್ರತೀ ತಾಲೂಕಿಗೆ ಕುಡಿಯುವ ನೀರಿನ ನಿರ್ವಹಣೆಗೆ 25 ಲಕ್ಷ ರೂ. ನೀಡಲಾಗಿದೆ.

265 ಗ್ರಾಮಗಳಲ್ಲಿ ಸಮಸ್ಯೆ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ ಗ್ರಾಮಗಳನ್ನು ಗುರುತಿಸಿ ಅವುಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳು ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ 24 ಗ್ರಾಪಂನ 64ಜನವಸತಿ ಪ್ರದೇಶ, ಕಡೂರು ತಾಲೂಕಿನ 21 ಗ್ರಾಪಂನ 37ಜನವಸತಿ ಪ್ರದೇಶ, ಕೊಪ್ಪ ತಾಲೂಕಿನ 7 ಗ್ರಾಪಂನ 7 ಜನವಸತಿ ಪ್ರದೇಶ, ಮೂಡಿಗೆರೆ ತಾಲೂಕಿನ 19 ಗ್ರಾಪಂನ 27 ಜನವಸತಿ ಪ್ರದೇಶ, ನರಸಿಂಹರಾಜಪುರ ತಾಲೂಕಿನ 13 ಗ್ರಾಪಂನ 67 ಜನವಸತಿ ಪ್ರದೇಶ, ಶೃಂಗೇರಿ ತಾಲೂಕಿನ 7 ಗ್ರಾಪಂನ 13 ಜನವಸತಿ ಪ್ರದೇಶ ಹಾಗೂ ತರೀಕೆರೆ ತಾಲೂಕಿನ 21 ಗ್ರಾಪಂನ 50 ಜನವಸತಿ ಪ್ರದೇಶ ಸೇರಿದಂತೆ 265 ಜನವಸತಿ ಪ್ರದೇಶವನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳು ಎಂದು ಗುರುತಿಸಲಾಗಿದೆ.

ಅನುದಾನಕ್ಕಾಗಿ ಪತ್ರ ವ್ಯವಹಾರ: ಎರಡು ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು ಕುಡಿಯುವ ನೀರಿನ ಸಮಸ್ಯೆ ಅಷ್ಟಾಗಿ ಉಲ½ಣಿಸಿರಲಿಲ್ಲ. ಈ ವರ್ಷವೂ ಕುಡಿಯುವ ನೀರಿನ ಸಮಸ್ಯೆ ಇದುವರೆಗೂ ಉಲ½ಣಿಸಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಏನಾದರೂ ಎದುರಾದರೆ ಅದನ್ನು ಸಮರ್ಥವಾಗಿ ಎದುರಿಸುವ ಉದ್ದೇಶದಿಂದ ಅನುದಾನ ನೀಡುವಂತೆ ಸರ್ಕಾರದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ.

ಟ್ಯಾಂಕರ್‌ ಸೌಲಭ್ಯಕ್ಕೆ ಸಿದ್ಧತೆ: 2018ರಲ್ಲಿ ಜಿಲ್ಲೆಯ 85 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲಣವಾದ ಹಿನ್ನೆಲೆಯಲ್ಲಿ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದುಕೊಳ್ಳಲಾಗಿತ್ತು. ಈ ವರ್ಷವೂ ಅಗತ್ಯ ಬಿದ್ದಲ್ಲಿ ಟ್ಯಾಂಕರ್‌ ಮತ್ತು ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆದುಕೊಳ್ಳುವ ಚಿಂತನೆ ನಡೆಸಿದ್ದು ಸಿದ್ಧತೆ ಮಾಡಿಕೊಳ್ಳುತ್ತಿದೆ.

ಟಾಸ್ಕ್ಫೋರ್ಸ್‌ ಸಮಿತಿ: ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಮರ್ಥವಾಗಿ ನಿರ್ವಹಿಸಲು ಆರ್‌ಡಿಪಿಆರ್‌ ಮತ್ತು ಜಿಲ್ಲಾ ಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ಫೋರ್ಸ್‌ ಸಮಿತಿ ರಚಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಆರ್‌ಡಿಪಿಆರ್‌ ಟಾಸ್ಕ್ಫೋರ್ಸ್‌ ಸಮಿತಿಯಲ್ಲಿ ತಾಪಂ ಸಿಇಒ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದರೆ, ಜಿಲ್ಲಾ ಧಿಕಾರಿಗಳ ನೇತೃತ್ವದ ಟಾಸ್ಕ್ಫೋರ್ಸ್‌ ಸಮಿತಿಯಲ್ಲಿ ಜಿಪಂ ಸಿಇಒ, ತಹಶೀಲ್ದಾರ್‌ ನೇತೃತ್ವದಲ್ಲಿ ಕಾರ್ಯ ನಿರ್ವಹಿಸಲಿದೆ. ಆಯಾ ಗ್ರಾಪಂ ಅಭಿವೃದ್ಧಿ ಅ ಧಿಕಾರಿಗಳಿಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಸಮರ್ಥವಾಗಿ ನಿರ್ವಹಿಸಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.