ರಾಜ್ಯದಲ್ಲಿಂದು 9579 ಮಂದಿಗೆ ಕೋವಿಡ್ : 52 ಬಲಿ
Team Udayavani, Apr 12, 2021, 5:55 PM IST
ಬೆಂಗಳೂರು : ರಾಜ್ಯದಲ್ಲಿಂದು ಕೋವಿಡ್ ಪ್ರಕರಣಗಳ ಸ್ಫೋಟವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 9579 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.
ಇಂದು ಸಂಜೆ ಕರ್ನಾಟಕ ಸರ್ಕಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ದಿನಾಂಕ 11.04.2021, 00:00 ರಿಂದ 23:59 ಅವಧಿಯಲ್ಲಿ 9579 ಹೊಸ ಕೇಸ್ಗಳ ದೃಢಪಟ್ಟಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10,74,869ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ 52 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12941 ಏರಿಕೆಯಾಗಿದೆ.
ಇನ್ನುಳಿದಂತೆ ರಾಜ್ಯದಲ್ಲಿ ಇಂದು 2767 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 985924ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯ ರಾಜಧಾನಿ ಕೋವಿಡ್ ಪ್ರಕರಣಗಳ ಸಂಖ್ಯೆ ಎಂದಿನಂತೆ ಹೆಚ್ಚುತ್ತಾ ಸಾಗಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ 24 ಗಂಟೆಯಲ್ಲಿ 6387 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
IPL 2024; ಲಕ್ನೋ, ಹೈದ್ರಾಬಾದ್ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ
ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ
ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ