ದೇಶದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ : ರಾಜ್ಯಪಾಲರ ಜೊತೆ ಪ್ರಧಾನಿ-ಉಪರಾಷ್ಟ್ರಪತಿ ಸಭೆ

Team Udayavani, Apr 12, 2021, 7:39 PM IST

hdfhf

ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಎರಡನೆ ಅಲೆ ಹಿನ್ನೆಲೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಜಂಟಿಯಾಗಿ ವಿವಿಧ ರಾಜ್ಯಗಳ ರಾಜ್ಯಪಾಲರ ಜತೆ ಸಭೆ ನಡೆಸಲು ಮುಂದಾಗಿದ್ದಾರೆ.

ಪ್ರಧಾನಿ ಕಚೇರಿ ನೀಡಿರುವ ವರದಿಗಳ ಪ್ರಕಾರ ಏಪ್ರಿಲ್ 14 ರಂದು ಈ ಸಭೆ ನಡೆಯಲಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ ವರ್ಚುವಲ್ ಸಭೆಯಲ್ಲಿ ವಿವಿಧ ರಾಜ್ಯಗಳ ರಾಜ್ಯಪಾಲರು ಪಾಲ್ಗೊಳ್ಳಲಿದ್ದಾರೆ.

ದೇಶದಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಅಲೆಯ ವಿರುದ್ಧ ಏನೆಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಕೋವಿಡ್ ಲಸಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ವರದಿಗಳು ತಿಳಿಸಿವೆ.

ಇತ್ತೀಚಿಗಷ್ಟೆ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದರು. ಇದೀಗ ರಾಜ್ಯಪಾಲರ ಜತೆ ಸಭೆ ನಡೆಸಲು ಮುಂದಾಗಿದ್ದಾರೆ.

ದೇಶದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳ :

ಇನ್ನು ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 1,52,879 ಕೋವಿಡ್ ಪ್ರಕರಗಳು ಪತ್ತೆಯಾಗಿವೆ. ಕರ್ನಾಟಕದಲ್ಲಿ ಪತ್ತೆಯಾದ ಪ್ರಕರಣಗಳ ಸಂಖ್ಯೆ 9579. ಇನ್ನುಳಿದಂತೆ ಮಹಾರಾಷ್ಟ್ರ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳು ಕಂಡು ಬಂದಿವೆ.

ಟಾಪ್ ನ್ಯೂಸ್

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.