ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ಅಗ್ನಿ ಅವಘಡ
Team Udayavani, Apr 19, 2021, 10:34 AM IST
ಬಜಪೆ: ಇಲ್ಲಿನ ಬಜಪೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಇಂದು ಬೆಳಗ್ಗೆ 9.15ರ ಸುಮಾರಿಗೆ ಘಟನೆ ನಡೆದಿದ್ದು, ಎಸಿ ಸ್ಪೋಟ ಇದಕ್ಕೆ ಕಾರಣ ಎನ್ನಲಾಗಿದೆ.
ಇದನ್ನೂ ಓದಿ:ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ರೈತ ಸಾವು:ಕರಕಲಾಗಿ ಬೇರ್ಪಟ್ಟ ರುಂಡ!
ಮೂರು ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸುತ್ತಿದೆ.
ಕಾರ್ಯಾಚರಣೆಗ ಅನುಕೂಲ ಕಲ್ಪಿಸಲು ಚರ್ಚ್ ಬಳಿಯ ರಸ್ತೆಯನ್ನು ಬಂದ್ ಮಾಡಿ, ಪೊಲೀಸ್ ಠಾಣೆ ಹತ್ತಿರ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: ಕಂಬಳದ ಪಯಣ ಕೊನೆಗೊಳಿಸಿ ಕಾಲನ ಕರೆಗೆ ಓಗೊಟ್ಟ ‘ಬೋಳಂತೂರು ಕಾಟಿ’