ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಮುಂದೂಡಿಕೆ
Team Udayavani, Apr 20, 2021, 10:50 PM IST
ಮಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ದೃಷ್ಟಿಯಿಂದ ರಾಜ್ಯ ಸರಕಾರ ಜಾರಿಗೊಸಿದ ನಿಯಮಗಳ ಹಿನ್ನಲೆಯಲ್ಲಿ ನಾಳೆಯಿಂದ (ಎ. 21) ರಿಂದ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷೆಗಳನ್ನು ಮುಂದೂಡಿ ವಿಶ್ವವಿದ್ಯಾನಿಲಯ ಆದೇಶ ಹೊರಡಿಸಿದೆ.
ಈಗಾಗಲೇ ಎರಡು ಪರೀಕ್ಷೆಗಳು ಮುಂದೂಡಿಕೆಯಾಗಿದ್ದು ನಾಳೆಯಿಂದ ನಡೆಯುವ ಪರೀಕ್ಷೆಗಳನ್ನೂ ರದ್ದು ಮಾಡಿದೆ.
ಮುಂದಿನ ದಿನಗಳಲ್ಲಿ ಪರೀಕ್ಷಾ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ವಿಶ್ವವಿದ್ಯಾನಿಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ :ಮೋದಿ ಭಾಷಣ ‘ನಿಮ್ಮ ತಲೆ ಮೇಲೆ ನಿಮ್ಮ ಕೈ’ ಎಂಬ ಸಂದೇಶ ನೀಡಿದೆ: ಸಿದ್ದರಾಮಯ್ಯ ಟೀಕೆ