ಕೋವಿಡ್ ಹೆಸರಲ್ಲಿ ಸರ್ಕಾರ ಜನರ ಹತ್ಯೆ ಮಾಡಲು ಹೊರಟಿದೆ : ಶಾಸಕ ಕೆ.ಸುರೇಶ್‌ಗೌಡ ಕಿಡಿ

ಸೋಂಕಿತರಿಗೆ ಅವಧಿ ಮೀರಿದ ಔಷಧಿ ನೀಡಲು ಅನುಮತಿ ಆರೋಪ

Team Udayavani, Apr 23, 2021, 8:58 PM IST

suresh-gowda

ಮಂಡ್ಯ: ಕೋವಿಡ್ ಸೋಂಕಿತ ರೋಗಿಗಳಿಗೆ ಅವಧಿ ಮೀರಿದ ಔಷಧಿ ನೀಡಲು ಅನುಮತಿ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ಕೆ.ಸುರೇಶ್‌ಗೌಡ ಕೊರೊನಾ ಹೆಸರಿನಲ್ಲಿ ಸರ್ಕಾರ ಜನರ ಹತ್ಯೆ ಮಾಡಲು ಹೊರಟಿದೆ ಎಂದು ಆರೋಪಿಸಿದರು.

ನಾಗಮಂಗಲ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ಕೋವಿಡ್ ನಿಯಂತ್ರಿಸುವ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳ ತುರ್ತುಸಭೆ ನಡೆಸಿದ ಶಾಸಕರು, ಕೋವಿಡ್ ನಿಯಂತ್ರಿಸುವ ನೆಪದಲ್ಲಿ ಸರ್ಕಾರ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದು ಕೊರೋನಾ ಸೋಂಕಿತ ರೋಗಿಗಳಿಗೆ ಅವಧಿ ಮುಗಿದಿರುವ ಔಷಧಿಗಳನ್ನು ನೀಡುವಂತೆ ಅನುಮತಿ ನೀಡಿರುವುದು ಖಂಡನೀಯ ಎಂದರು.

ರೆಮ್ಡಿಸಿವಿರ್ ಇಂಜೆಕ್ಷನ್‌ನ ಅವಧಿಯು ಜನವರಿಗೆ ಮುಗಿದು ಹೋಗಿದ್ದರೂ ಸಹ ಸೋಂಕಿತ ರೋಗಿಗಳಿಗೆ ಇದೇ ಇಂಜೆಕ್ಷನ್ ಉಪಯೋಗಿಸುವಂತೆ ಸರ್ಕಾರ ಆದೇಶ ನೀಡಿರುವುದು ನನಗೆ ಗಾಬರಿ ಹುಟ್ಟಿಸಿದೆ. ಅವಧಿ ಮುಗಿದಿರುವ ಔಷಧಿಯನ್ನು ರೋಗಿಗಳಿಗೆ ನೀಡುತ್ತಿರುವುದರಿಂದಲೇ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಸರ್ಕಾರ ಈ ರೀತಿಯಾದ ನಿರ್ಲಕ್ಷ್ಯ ಧೋರಣೆಯನ್ನು ಬಿಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ :ಅಕ್ರಮವಾಗಿ ರೆಮ್ ಡಿಸಿವಿಯರ್ ಇಂಜೆಕ್ಷನ್‌ ಮಾರಾಟ : ಸ್ಟಾಫ್ ನರ್ಸ್ ಸೇರಿ ಮೂವರ ಬಂಧನ

ಸರ್ಕಾರ ಆದೇಶ ನೀಡಿದಾಕ್ಷಣಕ್ಕೆ ಔಷಧಿಯ ಗುಣಮಟ್ಟ ಹೆಚ್ಚಾಗಲು ಸಾಧ್ಯವಿಲ್ಲ. ಹಾಗಾಗಿ ನನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ರೋಗಿಗಳಿಗೆ ಇಂಥ ಅವಧಿ ಮೀರಿದ ಇಂಜೆಕ್ಷನ್ ಬಳಸದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವಧಿ ಮುಗಿದಿರುವ ಯಾವುದೇ ಔಷಧಿ ಅಥವಾ ಇಂಜೆಕ್ಷನ್ ವಿಷಕ್ಕೆ ಸಮಾನ. ಅವುಗಳನ್ನು ರೋಗಿಗಳಿಗೆ ನೀಡುವುದಾದರೂ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಶಾಸಕರು, ರಾಜ್ಯ ಸರ್ಕಾರ ಹೊರಡಿಸಿರುವ ಈ ಆದೇಶವನ್ನು ಈ ಕೂಡಲೇ ಹಿಂಪಡೆಯಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟದ ಜತೆಗೆ ರಾಜ್ಯಪಾಲರು ಮತ್ತು ರಾಷ್ಟçಪತಿಗಳಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ತಹಶೀಲ್ದಾರ್ ಕುಂಞ ಅಹಮ್ಮದ್, ತಾಪಂ ಇಒ ಸತೀಶ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ರಮೇಶ್, ವೃತ್ತ ನಿರೀಕ್ಷಕ ಸುಧಾಕರ್, ಪುರಸಭೆ ಮುಖ್ಯಾಧಿಕಾರಿ ಮಹದೇವಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಗದೀಶ್, ಬೆಳ್ಳೂರು ಪಪಂ ಮುಖ್ಯಾಧಿಕಾರಿ ಮಂಜುನಾಥ್ ಸೇರಿದಂತೆ ಮತ್ತಿತರರಿದ್ದರು.

ಟಾಪ್ ನ್ಯೂಸ್

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.