ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ ಲಸಿಕೆ ನೀಡಿ: ಕುಮಾರಸ್ವಾಮಿ ಆಗ್ರಹ
Team Udayavani, Apr 24, 2021, 3:33 PM IST
ಬೆಂಗಳೂರು: ಮೇ ತಿಂಗಳ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ತೆಗೆದುಕೊಂಡಿರುವ ತೀರ್ಮಾನದಂತೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆರುವರೆ ಕೋಟಿ ಜನತೆಗೂ ಉಚಿತವಾಗಿ ಲಸಿಕೆಯನ್ನು ನೀಡುವ ಮೂಲಕ ನೆರವಿಗೆ ಧಾವಿಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈಗಾಗಲೇ ಜಾರ್ಖಂಡ್, ಗೋವಾ, ಛತ್ತೀಸ್ಘಡ, ಉತ್ತರ ಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಮತ್ತು ಸಿಕ್ಕಿಂನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಲಾಗಿದೆ. ಈಗ ಕರ್ನಾಟಕ ರಾಜ್ಯದಲ್ಲಿಯೂ ಸಹ ಇದೇ ಕ್ರಮ ಅನುಸರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ನನ್ನ ಕೋರಿಕೆ. ಈಗಿನ ಸಂದರ್ಭದಲ್ಲಿ ಜನರು ಹಣ ಕೊಟ್ಟು ಲಸಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಸರಕಾರವೇ ಮುಂದೆ ಬಂದು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವ ತೀರ್ಮಾನವನ್ನು ಪ್ರಕಟಿಸಬೇಕೆಂಬುದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ
ಸುಮಾರು ಒಂದು ಕೋಟಿ ಡೋಸ್ ಲಸಿಕೆ ಕೊಳ್ಳಲು 400 ಕೋಟಿ ರೂ ಮೀಸಲಿಡಲಾಗಿದೆ. ಸರಿಸುಮಾರು 2.50 ಲಕ್ಷ ಕೋಟಿ ರೂ. ಬಜೆಟ್ ಮಂಡನೆ ಮಾಡುವ ಸರಕಾರಕ್ಕೆ ಕನಿಷ್ಠ ಪಕ್ಷ 2 ಸಾವಿರ ಕೋಟಿ ರೂ. ಹಣವನ್ನು ಲಸಿಕೆ ಖರೀದಿ ಮಾಡಲು ಮೀಸಲಿಡುವುದರಿಂದ ಬೊಕ್ಕಸಕ್ಕೆ ಭಾರೀ ಹೊರೆಯಾಗದು. ಬಡವ-ಬಲ್ಲಿದನೆಂಬ ತಾರತಮ್ಯ ತೋರದೆ ರಾಜ್ಯದ ಎಲ್ಲಾ ಜನತೆಗೆ ಉಚಿತವಾಗಿ ಲಸಿಕೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಎಚ್ ಡಿಕೆ ಆಗ್ರಹಿಸಿದ್ದಾರೆ.
ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವಂತೆ ಒಂದುವರೆ ತಿಂಗಳ ಹಿಂದೆಯೇ ಸರ್ಕಾರಕ್ಕೆ ಸಲಹೆ ನೀಡಿದ್ದೆ. ಪಲ್ಸ್ ಪೋಲಿಯೋ ಲಸಿಕೆ ನೀಡಿದ ಮಾದರಿಯಲ್ಲಿ ಎಲ್ಲರಿಗೂ ಉಚಿತವಾಗಿ ಕೊರೋನಾ ಲಸಿಕೆ ನೀಡುವ ನಿರ್ಧಾರ ಕೈಗೊಂಡರೆ ಅದು ಅಭಿನಂದನಾರ್ಹ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ