ಕೈಗಾರಿಕಾ ವಲಯದ ದಿಕ್ಕು ತಪ್ಪಿಸಿದ ಕೋವಿಡ್

ಕಚ್ಚಾ ಸಾಮಗ್ರಿ ಬೆಲೆ ಹೆಚ್ಚಳದ ಬರೆ ­ಉತ್ಪದನಾ ಪ್ರಮಾಣದಲ್ಲೂ ಕುಸಿತ

Team Udayavani, Apr 26, 2021, 7:32 PM IST

jgyutyuty

ವರದಿ : ಕೇಶವ ಆದಿ

ಬೆಳಗಾವಿ: ಕೋವಿಡ್ದ ಮೊದಲ ಅಲೆಯ ಹೊಡೆತದಿಂದ ಹೊರಬಂದು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದ ಕೈಗಾರಿಕಾ ವಲಯ ಎರಡನೇ ಅಲೆಯ ಸುಳಿಗೆ ಸಿಲುಕಿ ಮತ್ತಷ್ಟು ಸಂಕಷ್ಟ ಅನುಭವಿಸಬೇಕಾಗಿದೆ. ರಾಜ್ಯದಲ್ಲಿ ಕೋವಿಡ್ ಹಾವಳಿ ತೀವ್ರ ಆತಂಕ ಸೃಷ್ಟಿ ಮಾಡಿರುವ ಬೆನ್ನಲ್ಲೇ ಕೈಗಾರಿಕೋದ್ಯಮಿಗಳು ಮರಳಿ ಸರಕಾರದ ಸಹಾಯ ಹಸ್ತದ ಕಡೆ ಮುಖ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದಕ್ಕೆ ಗಡಿ ಜಿಲ್ಲೆ ಬೆಳಗಾವಿ ಸಹ ಹೊರತಾಗಿಲ್ಲ.

ಬೆಂಗಳೂರು ನಂತರ ಸರಕಾರಕ್ಕೆ ಅತೀ ಹೆಚ್ಚಿನ ತೆರಿಗೆ ತುಂಬುತ್ತಿರುವ ಬೆಳಗಾವಿ ಕೈಗಾರಿಕೋದ್ಯಮಿಗಳು ಕೋವಿಡ್ ಹೊಡೆತದಿಂದ ನಲುಗಿದ್ದಾರೆ. ಕೈಯಲ್ಲಿ ಸಾಕಷ್ಟು ಬೇಡಿಕೆಗಳಿದ್ದರೂ ಅದನ್ನು ಪೂರ್ಣಗೊಳಿಸಲಾರದ ಸ್ಥಿತಿಯಲ್ಲಿದ್ದಾರೆ. ಪರಿಣಾಮ ಉದ್ಯಮ ಮತ್ತೆ ಕೋಟಿಗಟ್ಟಲೇ ನಷ್ಟ ಅನುಭವಿಸುವಂತಾಗಿದೆ. ಒಂದು ರೀತಿಯಲ್ಲಿ ಕೈಗಾರಿಕೆಗಳಿಗೆ ಸಹ ಕೋವಿಡ್ ಸೋಂಕು ತಗುಲಿದೆ. ಕಳೆದ ವರ್ಷ ಕೋವಿಡ್ ಹಾವಳಿಯಿಂದ ಲಾಕ್‌ಡೌನ್‌ ಜಾರಿಯಾದಾಗ ದೊಡ್ಡ ಹೊಡೆತ ಬಿದ್ದಿದ್ದು ಕೈಗಾರಿಕಾ ಕ್ಷೇತ್ರಕ್ಕೆ. ಇದರಿಂದ ಸಣ್ಣ ಕೈಗಾರಿಕೆಗಳು ತತ್ತರಿಸಿ ಹೋದವು. ಅಪಾರ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಿ ಆರಂಭಿಸಿದ ಕೈಗಾರಿಕೆಗಳು ಮೇಲೇಳಲು ಹರಸಾಹಸ ಪಡಬೇಕಾಯಿತು. ಈಗಾಗಲೇ ಮಲಗಿರುವ ಆಟೋಮೊಬೈಲ್‌ ಕ್ಷೇತ್ರ ಮೇಲೇಳಲು ಆಗುತ್ತಿಲ್ಲ. ಬೇಡಿಕೆ ಬಹಳ ಪ್ರಮಾಣದಲ್ಲಿ ಕುಸಿದಿತ್ತು. ಸರಕಾರ ಆಗ ಕೆಲವು ಪರಿಹಾರ ಕ್ರಮಗಳನ್ನು ಪ್ರಕಟಿಸಿದರೂ ಅದಾವುದೂ ಕೈಗಾರಿಕೆಗಳ ನೆರವಿಗೆ ಬರಲಿಲ್ಲ.

ಲಾಕ್‌ಡೌನ್‌ ತೆರವಾದ ನಂತರ ನಿಧಾನವಾಗಿ ಕಣ್ಣು ಬಿಡುತ್ತಿದ್ದ ಕೈಗಾರಿಕೆಗಳಿಗೆ ಮೊದಲಿನಂತೆ ಬೇಡಿಕೆಗಳು ಬರಲಾರಂಭಿಸಿದವು. ಕೋವಿಡ್ ಹೆದರಿಕೆಯ ನಡುವೆಯೂ ಉದ್ಯಮಿಗಳು ನೆಮ್ಮದಿಯ ಉಸಿರು ಬಿಟ್ಟಿದ್ದರು. ಆದರೆ ಈಗ ಮತ್ತೆ ಬಂದಿರುವ ಕೋವಿಡ್ ಎರಡನೇ ಅಲೆ ಉದ್ಯಮಿಗಳ ದಿಕು Rತಪ್ಪಿಸಿದೆ. ಚಿಂತೆ ಹುಟ್ಟಿಸಿದ ಬೆಲೆ ಏರಿಕೆ: ಕೋವಿಡ್ ಭೀತಿಯ ನಡುವೆ ಕೈಗಾರಿಕೆಗಳ ಉತ್ಪಾದನೆಗೆ ಬೇಕಾಗುವ ಕಚ್ಚಾ ವಸ್ತುಗಳ ಬೆಲೆ ಎರಡು ಪಟ್ಟಾಗಿರುವುದು ಸಣ್ಣ-ಮಧ್ಯಮ ಕೈಗಾರಿಕೆಗಳ ಚಿಂತೆ ಹೆಚ್ಚಿಸಿದೆ.

ಗ್ರಾಹಕರ ಜತೆ ಹಳೆಯ ದರಕ್ಕೆ ಉತ್ಪಾದನೆ ಮಾಡಿಕೊಡುವ ಒಪ್ಪಂದ ಮಾಡಿಕೊಂಡಿರುವ ಕೈಗಾರಿಕೆಗಳು ಎರಡು ಪಟ್ಟು ದರ ನೀಡಿ ಕಚ್ಚಾ ವಸ್ತುಗಳನ್ನು ಖರೀದಿಸಬೇಕು. ಹೊಸ ದರಕ್ಕೆ ಖರೀದಿಸಲು ಗ್ರಾಹಕರು ಒಪ್ಪುತ್ತಿಲ್ಲ. ಹೀಗಾಗಿ ಯಾವುದೇ ಲಾಭದಾಸೆ ಮಾಡದೇ ಕೈಗಾರಿಕೆಗಳ ಉಳಿವಿಗಾಗಿ ಉತ್ಪಾದನೆ ಮಾಡಿ ಮಾರಾಟ ಮಾಡಬೇಕಿದೆ ಎಂಬುದು ಉದ್ಯಮಿಗಳ ನೋವು.

ಕೈಗಾರಿಕಾ ವಲಯದಲ್ಲಿ ಈಗ ಶೇಕಡಾ 60 ಉದ್ಯಮಿಗಳು ಕೋವಿಡ್ ಕಾರಣದಿಂದ ತೀವ್ರ ನಷ್ಟದಲ್ಲಿದ್ದಾರೆ. ಕಳೆದ ವರ್ಷ ಎಂಟು ತಿಂಗಳು ಹಾನಿ ಅನುಭವಿಸಿದ್ದಾರೆ. ಅವರಲ್ಲಿ ಬ್ಯಾಂಕ್‌ನ ಬಡ್ಡಿ ತುಂಬಲು ಹಣ ಇಲ್ಲ. ಎಲ್ಲರೂ ಒಳ್ಳೆಯ ದಿನಕ್ಕಾಗಿ ಕಾಯುತ್ತಿದ್ದಾರೆ. ಈಗ ಮತ್ತೆ ಪರೋಕ್ಷವಾಗಿ ಲಾಕ್‌ಡೌನ್‌ ಮಾಡಲಾಗಿದೆ. ಇದರಿಂದ ಏನು ಮಾಡಬೇಕೋ ತಿಳಿಯುತ್ತಿಲ್ಲ ಎಂಬುದು ಕೈಗಾರಿಕಾ ಸಂಘದ ಪದಾಧಿಕಾರಿಗಳ ಅನಿಸಿಕೆ.

ಉತ್ಪಾದನಾ ಪ್ರಮಾಣ ಕುಸಿತ: ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಕೈಯಲ್ಲಿ ಈಗ ಸಾಕಷ್ಟು ಬೇಡಿಕೆಗಳಿವೆ. ಆದರೆ ಕಚ್ಚಾವಸ್ತುಗಳ ಅಭಾವ ಎದುರಾಗಿದೆ. ಬೆಲೆ ಏರಿಕೆಯ ಮೇಲೆ ನಿಯಂತ್ರಣವೇ ಇಲ್ಲ. ಇಬ್ಬರು ದೊಡ್ಡ ಉದ್ಯಮಿಗಳ ಹಿಡಿತದಲ್ಲಿ ಇಡೀ ವ್ಯವಸ್ಥೆ ಇದೆ. ಕಚ್ಚಾ ವಸ್ತುಗಳ ಕೃತಕ ಅಭಾವ ಸೃಷ್ಟಿಸಿ ಬೆಲೆ ಎರಡು ಪಟ್ಟು ಹೆಚ್ಚು ಮಾಡುತ್ತಿದ್ದಾರೆ. ಇದರ ಪರಿಣಾಮ ನೇರವಾಗಿ ಸಣ್ಣ ಕೈಗಾರಿಕೆಗಳ ಮೇಲಾಗುತ್ತಿದೆ ಎನ್ನುತ್ತಾರೆ ಉದ್ಯಮಿ ಬಸವರಾಜ ಜವಳಿ. ಕಳೆದ ವರ್ಷ ಲಾಕ್‌ಡೌನ್‌ ಜಾರಿಯಾದರೂ ಕೈಗಾರಿಕೆಗಳಿಗೆ ಸರಕಾರಕ್ಕೆ ತೆರಿಗೆ ಕಟ್ಟುವುದು, ಹೆಸ್ಕಾಂಗೆ ವಿದ್ಯುತ್‌ ಬಿಲ್‌ ತುಂಬುವುದು, ಬ್ಯಾಂಕ್‌ಗಳಿಗೆ ಬಡ್ಡಿ ಮತ್ತು ಅಸಲು ತುಂಬುವುದು ತಪ್ಪಲಿಲ್ಲ. ಬಡ್ಡಿ ತುಂಬುವುದನ್ನು ಮೂರು ತಿಂಗಳು ಮುಂದೂಡಿದರೂ ಅದನ್ನು ಮನ್ನಾ ಮಾಡಲಿಲ್ಲ. ಲಾಕ್‌ಡೌನ್‌ ಮುಗಿಯುತ್ತಿದ್ದಂತೆ ಬ್ಯಾಂಕ್‌ದವರು ಸಾಲ ಮರುಪಾವತಿಗೆ ಒತ್ತಡ ಹಾಕುತ್ತಲೇ ಇದ್ದಾರೆ.

ಇದು ಉದ್ಯಮಿಗಳನ್ನು ಮತ್ತಷ್ಟು ಕಷ್ಟಕ್ಕೆ ಸಿಲುಕಿಸಿದೆ ಎಂಬುದು ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಸದಸ್ಯರ ಅಸಮಾಧಾನ. ಬೆಲೆ ಏರಿಕೆ ನಿಯಂತ್ರಣ, ಆರ್ಥಿಕ ನೆರವು ಸೇರಿದಂತೆ ಕೈಗಾರಿಕೆಗಳ ನೆರವಿಗೆ ಸಾಕಷ್ಟು ಕಾನೂನುಗಳಿದ್ದರೂ ಆದಾವುದೂ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಬರುತ್ತಿಲ್ಲ. ಇದರ ಪರಿಣಾಮ ಸಣ್ಣ ಉದ್ಯಮಿಗಳ ಮೇಲಾಗುತ್ತಿದೆ. ಕೋವಿಡ್ ಸಂಕಷ್ಟದ ಸಮಯದಲ್ಲೂ ಪ್ಯಾಕೇಜ್‌ ಮೂಲಕ ತಮ್ಮ ನೆರವಿಗೆ ಬರುತ್ತಿಲ್ಲ ಎಂಬ ನೋವು ಸಣ್ಣ ಉದ್ಯಮಿಗಳನ್ನು ಕಾಡುತ್ತಿದೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.