ನಿಯಮ ಪಾಲಿಸದವರಿಗೆ ದಂಡ: ಶಾಸಕ


Team Udayavani, Apr 27, 2021, 4:07 PM IST

ನಿಯಮ ಪಾಲಿಸದವರಿಗೆ ದಂಡ: ಶಾಸಕ

ಸಕಲೇಶಪುರ: ಮಾಸ್ಕ್ ಹಾಕದವರಿಗೆ, ಸಾಮಾಜಿಕ ಅಂತರ ಕಾಪಾಡದವರಿಗೆ, ಕೋವಿಡ್‌ ನಿಯಮ ಉಲ್ಲಂಘಿ ಸುವವರಿಗೆಕಡ್ಡಾಯವಾಗಿ ದಂಡ ವಿಧಿಸಲು ಪುರಸಭಾಮುಖ್ಯಾಧಿಕಾರಿಗಳು ಹಾಗೂ ಪಂಚಾಯ್ತಿ ಅಭಿವೃದ್ಧಿಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಎಚ್‌.ಕೆ. ಕುಮಾರಸ್ವಾಮಿ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತ್ರೈಮಾಸಿಕ ಸಭೆ ಹಾಗೂ ಕೋವಿಡ್‌ ನಿಯಂತ್ರಣ ಸಮಿತಿ ಸಭೆಯಲ್ಲಿ ಮಾತನಾಡಿದರು.

ಅಡ್ಡಪರಿಣಾಮವಿಲ್ಲ: ತಾಲೂಕಿನಲ್ಲಿಯೂ ಕೋವಿಡ್‌ ಪ್ರಕರಣ ಹೆಚ್ಚಾಗುತ್ತಿರುವುದು ಆತಂಕಕಾರಿ. ಸರ್ಕಾರದ ನಿಯಮಗಳನ್ನು ಸಾರ್ವಜನಿಕರು ಪಾಲನೆ ಮಾಡದಿರುವುದೇಕೋವಿಡ್‌ ಹೆಚ್ಚಳಕ್ಕೆ ಕಾರಣವಾಗಿದೆ. ಸರ್ಕಾರ ವಿಧಿಸುವ ಕೋವಿಡ್‌ ನಿಯಮಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು. ಈ ನಿಟ್ಟಿನಲ್ಲಿ ಕಡ್ಡಾಯವಾಗಿ ಪ್ರತಿಯೋರ್ವರು ಮಾಸ್ಕ್ ಧರಿಸಬೇಕು ಹಾಗೂಮನೆಯಿಂದ ಹೊರ ಬರುವುದನ್ನು ಆದಷ್ಟು ಕಡಿಮೆಮಾಡಬೇಕು. 45 ವರ್ಷ ದಾಟಿದ ಎಲ್ಲಾ ನಾಗರಿಕರೂಮೊದಲಿಗೆ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಬೇಕು. ಲಸಿಕೆ ಹಾಕಿಸಿಕೊಳ್ಳುವುದರಿಂದ ಯಾವುದೇ ಅಡ್ಡಪರಿಣಾಮ ಉಂಟಾಗುವುದಿಲ್ಲ ಎಂದು ಹೇಳಿದರು.

ತಾಲೂಕಿನಲ್ಲೇ ಚಿಕಿತ್ಸೆ ನೀಡಿ: ಟಿಎಚ್‌ಒ ಮಹೇಶ್‌ ಅವರಿಂದ ಕೋವಿಡ್‌ ಪ್ರಕರಣಗಳ ಕುರಿತು ವರದಿ ಪಡೆದ ನಂತರ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಉತ್ತಮ ಚಿಕಿತ್ಸೆ ದೊರೆಯುವುದು ಅನುಮಾನ. ಈ ಹಿನ್ನೆಲೆ ಯಾವುದೇ ಕೋವಿಡ್‌ ರೋಗಿಗಳನ್ನು ಜಿಲ್ಲಾಸ್ಪತ್ರೆಗೆ ಕಳುಹಿಸದೇ ತಾಲೂಕಿನಲ್ಲಿಯೇ ಚಿಕಿತ್ಸೆ ನೀಡುವಂತೆ ಸೂಚಿಸಿದರು.

ಕೋವಿಡ್‌ ಬಗ್ಗೆ ಜಾಗೃತಿ ಮೂಡಿಸಿ: ಇದೇ ವೇಳೆ ಶಾಸಕರು ಗ್ರಾಮ ಮಟ್ಟದ ಕೊರೊನಾ ಕಾರ್ಯಪಡೆಯ ಸಭೆಯನ್ನು ಪ್ರತಿ ವಾರ ತಪ್ಪದೇ ಮಾಡಿ ಸಾರ್ವಜನಿಕರಿಗೆ ಕೋವಿಡ್‌ ಬಗ್ಗೆಜಾಗೃತಿ ಮೂಡಿಸುವಂತೆ ಸೂಚಿಸಿದರು. ತಾಲೂಕು ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್‌ ಮಾತನಾಡಿ, ಗ್ರಾಪಂಗಳ ವ್ಯಾಪ್ತಿಯಲ್ಲಿ ಕೋವಿಡ್‌ ಹರಡದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಪಟ್ಟಣಕ್ಕೆ ಸೀಮಿತಗೊಳ್ಳುತ್ತಿದ್ದ ಲಾಕ್‌ ಡೌನ್‌ ಈ ಬಾರಿ ಗ್ರಾಮಾಂತರ ಪ್ರದೇಶಗಳಲ್ಲೂ ಕಠಿಣವಾಗಿ ಜಾರಿಗೆ ತರಲಾಗಿದೆ. ಪಿಡಿಒ, ಗ್ರಾಪಂ ಸಿಬ್ಬಂದಿ ಈ ನಿಟ್ಟಿನಲ್ಲಿಬಹಳ ಶ್ರಮಿಸುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆಕಂಡು ಬಂದಲ್ಲಿ ಅಂತಹ ಕಡೆ ತಾತ್ಕಾಲಿಕವಾಗಿ ಟ್ಯಾಂಕರ್‌ಮೂಲಕ ನೀರು ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ತಹಶೀಲ್ದಾರ್‌ ಜೈಕುಮಾರ್‌, ಡಿವೈಎಸ್‌ಪಿ ಗೋಪಿ ಮತ್ತಿತರ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.