ಹಳ್ಳಿಗರಲ್ಲಿ ಕೋವಿಡ್ ಜಾಗೃತಿ ಮೂಡಿಸಿ: ಬಸವರಾಜ


Team Udayavani, Apr 27, 2021, 4:42 PM IST

ಹಳ್ಳಿಗರಲ್ಲಿ ಕೋವಿಡ್ ಜಾಗೃತಿ ಮೂಡಿಸಿ: ಬಸವರಾಜ

ಯಾದಗಿರಿ: ಕೋವಿಡ್ ಎರಡನೇ ಅಲೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆ ಗ್ರಾಮೀಣ ಪ್ರದೇಶದಲ್ಲಿ ಲಸಿಕೆಹಾಕಿಸಿಕೊಳ್ಳಲು ಅರಿವು ಮೂಡಿಸಿ, ಸಾರ್ವಜನಿಕರುಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರಕಾಪಾಡುವಂತೆ ಜನರಲ್ಲಿ ಅರಿವು ಮೂಡಿಸಬೇಕುಎಂದು ತಾಪಂ ಕಾರ್ಯನಿರ್ವಾಹಕ ಅಧಿ ಕಾರಿ ಬಸವರಾಜ ಶರಬೈ ಸೂಚಿಸಿದರು.

ಯಾದಗಿರಿ ತಾಪಂ ಕಾರ್ಯಾಲಯದ ಸಾಮರ್ಥ್ಯಸೌಧ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್‌-19ಮುಂಜಾಗ್ರತಾ ಕ್ರಮ, ಕುಡಿವ ನೀರು ಪೂರೈಕೆ, ನರೇಗಾಯೋಜನೆಯಡಿ ಜಲಶಕ್ತಿ ಅಭಿಯಾನ, ದುಡಿಯೋಣ ಬಾಅಭಿಯಾನ, ಶಾಲೆ ಬಿಟ್ಟ ಮಕ್ಕಳ ಮನೆ-ಮನೆ ಸಮೀಕ್ಷೆ, ಎಸ್‌ಬಿಎಂ ಯೋಜನೆ ಶೌಚಾಲಯಗಳ ಮೌಲ್ಯಮಾಪನ ಸಮೀಕ್ಷೆಹಾಗೂ ಇತರೆ ಯೋಜನೆಗಳ ಅನುಷ್ಠಾನದ ಕುರಿತುಗ್ರಾಪಂಗಳ ಅಭಿವೃದ್ಧಿ ಅ ಧಿಕಾರಿಗಳ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಬೇಸಿಗೆ ಇರುವುದರಿಂದ ಗ್ರಾಮೀಣಪ್ರದೇಶದಲ್ಲಿ ಕುಡಿವ ನೀರಿನ ಸಮಸ್ಯೆಯಾಗದಂತೆಮುಂಜಾಗ್ರತಾ ಕ್ರಮ ವಹಿಸಬೇಕು. ಕೋವಿಡ್ ಎರಡನೇ ಅಲೆ ಪ್ರಾರಂಭವಾಗಿದ್ದು, ಸಾರ್ವಜನಿಕರು ಸಾಮಾಜಿಕ ಅಂತರ ಮದುವೆ, ಜಾತ್ರೆ, ದೇವರ ಕಾರ್ಯಕ್ರಮ,ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನರು ಸೇರದಂತೆ ನೋಡಿಕೊಳ್ಳಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ತಿಳಿವಳಿಕೆ ಮೂಡಿಸಬೇಕು ಎಂದರು.

ಪಟ್ಟಣಗಳಿಂದ ಸ್ವಗ್ರಾಮಗಳಿಗೆ ಆಗಮಿಸಿದವರಿಗೆ ನರೇಗಾ ಯೋಜನೆಯಡಿ ಕೆಲಸ ನೀಡಬೇಕು. ಪ್ರತಿಯೊಂದು ಗ್ರಾಪಂಗ್ರಾಮದಲ್ಲಿ ನರೇಗಾ ಕೆಲಸ ಕಡ್ಡಾಯವಾಗಿ ಪ್ರಾರಂಭಿಸಿ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಬೇಕು. ಕೋವಿಡ್ ಸೋಂಕು ಪಟ್ಟಣಗಳಲ್ಲಿ ಹೆಚ್ಚುತ್ತಿರುವುದರಿಂದ ಜನರು ಗ್ರಾಮಗಳಿಗೆಮರಳಿದ್ದಾರೆ. ಇಂಥವರಿಗೆ ಗ್ರಾಪಂಗಳಲ್ಲಿ ಉದ್ಯೋಗ ಚೀಟಿನೀಡಿ, ಕೆಲಸ ಒದಗಿಸಿ ಅವರ ಜೀವನೋಪಾಯಕ್ಕೆ ದಾರಿಮಾಡಿಕೊಡುವ ಜವಾಬ್ದಾರಿ ಗ್ರಾಪಂ ಅಧಿ ಕಾರಿಗಳ ಮೇಲಿದೆ ಎಂದರು.

ಸಭೆಯಲ್ಲಿ ಪ್ರೊಬೇಷನ್‌ ಸಹಾಯಕ ಆಯುಕ್ತರು ಹಾಗೂ ಗುರುಮಠಕಲ್‌ ತಾಪಂ ಇಒ ಸಾವಿತ್ರಿ, ಸಹಾಯಕ ನಿರ್ದೇಶಕ ಚಂದ್ರಶೇಖರ ಪವಾರ, ನರೇಗಾ ವಿಷಯ ನಿರ್ವಾಹಕರಾದ ಅನಸರ ಪಟೇಲ ಸೇರಿದಂತೆ ಯಾದಗಿರಿ, ಗುರುಮಠಕಲ್‌ ತಾಲೂಕಿನ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.