ಮತ ಎಣಿಕೆಗೆ ಆಯೋಗದ ಹೊಸ ಮಾರ್ಗಸೂಚಿ

ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ: ಡಿಸಿ ಹರೀಶಕುಮಾರ

Team Udayavani, Apr 30, 2021, 7:01 PM IST

yhutjyuty

ಬೆಳಗಾವಿ: ಲೋಕಸಭಾ ಉಪ ಚುನಾವಣೆಯ ಮತ ಎಣಿಕೆ ಮೇ 2ರಂದು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಕೋವಿಡ್‌ -19 ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶನ ನೀಡಿದೆ.

ಮತ ಎಣಿಕೆ ಕೇಂದ್ರ ಪ್ರವೇಶಿಸುವ ಅಭ್ಯರ್ಥಿಗಳು ಕೊರೋನಾ ನೆಗೆಟಿವ್‌ ವರದಿ ಅಥವಾ ಎರಡು ಡೋಸ್‌ ಲಸಿಕೆ ಪಡೆದಿರುವ ಬಗ್ಗೆ ದಾಖಲೆ ಸಲ್ಲಿಸಬೇಕು. ಏಜೆಂಟರು ಕೂಡ 48 ಗಂಟೆಗಿಂತ ಹಳೆಯದಲ್ಲದ ಆರ್‌ಟಿಪಿಸಿಆರ್‌ ಟೆಸ್ಟ್‌ ವರದಿ ಸಲ್ಲಿಸಬೇಕು ಎಂದು ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಮತ ಎಣಿಕೆ ಕೇಂದ್ರಗಳಲ್ಲಿ ಕೋವಿಡ್‌-19 ನಿಯಮಾವಳಿಗಳು: ಮತ ಎಣಿಕೆ ಕೇಂದ್ರಗಳಲ್ಲಿ ಚಟುವಟಿಕೆಗಳು ಪ್ರಾರಂಭವಾಗುವ ಮೊದಲು, ಮತ ಎಣಿಕೆಯ ವೇಳೆ ಹಾಗೂ ಚಟುವಟಿಕೆಗಳು ಮುಗಿದ ನಂತರ ಕೇಂದ್ರಗಳನ್ನು ಸಾನಿಟೆ„ಜ್‌ ಮಾಡುವ ಮೂಲಕ ಸೋಂಕು ರಹಿತವಾಗಿಸಬೇಕು. ಸೀಲ್‌ ಮಾಡಲಾದ ಇ.ವಿ.ಎಮ್‌. ಮತ್ತು ವಿವಿ ಪ್ಯಾಟ್‌ಗಳ ಪೆಟ್ಟಿಗೆಗಳನ್ನು ಸ್ಯಾನಿಟೈಸ್‌ ಅಥವಾ ಸೋಂಕು ರಹಿತವಾಗಿಸಬೇಕು. ಮತ ಎಣಿಕೆ ಕೇಂದ್ರದ ಕೊಠಡಿಗಳಲ್ಲಿ, ಕೊಠಡಿಯ ಅಳತೆಗೆ ಅನುಗುಣವಾಗಿ ಹೆಚ್ಚಿನ ಸಂಖ್ಯೆಯ ಮೇಜುಗಳ ವ್ಯವಸ್ಥೆ ಮಾಡಬೇಕು. ಒಂದು ಕ್ಷೇತ್ರದ ಮತ ಎಣಿಕೆಗಾಗಿ 3-4 ಕೊಠಡಿಗಳ ವ್ಯವಸ್ಥೆ ಮಾಡಿ, ಹೆಚ್ಚುವರಿ ಎ.ಆರ್‌.ಒ. ಅ ಧಿಕಾರಿಗಳ ನೇಮಕ ಮಾಡಬೇಕು ಎಂದು ಆಯೋಗ ತಿಳಿಸಿದೆ.

ಯಾವುದೇ ಕೊಠಡಿ, ಆವರಣ ಪ್ರವೇಶಿಸುವ ಮೊದಲು ಥರ್ಮಲ್‌ ಸ್ಕ್ಯಾನಿಂಗ್‌ ಮಾಡುವುದು ಕಡ್ಡಾಯವಾಗಿರುತ್ತದೆ. ಕೈಗಳ ಶುದ್ಧತೆಗಾಗಿ ಸಾನಿಟೆ„ಜರ್‌, ಸೋಪ್‌ ಹಾಗೂ ನೀರಿನ ವ್ಯವಸ್ಥೆ ಮಾಡಬೇಕು. ಅಲ್ಲದೇ, ಕೆಮ್ಮು, ನೆಗಡಿ, ಜ್ವರ ಮುಂತಾದ ಕೋವಿಡ್‌-19 ರೋಗಲಕ್ಷಣಗಳನ್ನು ಹೊಂದಿದ ವ್ಯಕ್ತಿಗೆ ಮತ ಎಣಿಕೆ ಕೇಂದ್ರವನ್ನು ಪ್ರವೇಶವನ್ನು ನಿಷೇಧಿ ಸಲಾಗಿದೆ ಎಂದು ಚುನಾವಣಾ ಆಯೋಗ ಆದೇಶಿಸಿದೆ.

ಅಭ್ಯರ್ಥಿಗಳು ನೇಮಿಸಿರುವ ಏಜೆಂಟ್‌ ಗಳ ಕೋವಿಡ್‌ ವರದಿಯು ಪಾಸಿಟಿವ್‌ ಇದ್ದಲ್ಲಿ, ಬೇರೆ ಎಜೆಂಟ್‌ ಗಳನ್ನು ನೇಮಿಸಬೇಕು. ಮತ ಎಣಿಕಾ ಕೊಠಡಿಗಳಲ್ಲಿ ಹಾಗೂ ನಿಯೋಜಿತ ಸಿಬ್ಬಂದಿ/ ಏಜೆಂಟ್‌ ಗಳು ಕೋವಿಡ್‌ -19 ಮಾರ್ಗಸೂಚಿಯಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಅಭ್ಯರ್ಥಿಗಳು ಹಾಗೂ ಏಜೆಂಟ್‌ಗಳಿಗೆ ಪಿಪಿಇ ಕಿಟ್‌ ವ್ಯವಸ್ಥೆ ಮಾಡಬೇಕು. ಪ್ರತಿ ಇಬ್ಬರು ಏಜೆಂಟ್‌ಗಳಲ್ಲಿ ಒಬ್ಬರು ಪಿಪಿಇ ಕಿಟ್‌ ಧರಿಸಬೇಕು. ನಿಯೋಜಿಸಲಾದ ಎಲ್ಲ ಮತ ಎಣಿಕಾ ಸಿಬ್ಬಂದಿಗಳಿಗೆ ಮಾಸ್ಕ್, ಸಾನಿಟೈಜರ್‌, ಫೇಸ್‌ – ಶೀಲ್ಡ್‌ ಮತ್ತು ಗ್ಲೌಸ್‌ ನೀಡಬೇಕು. ಪೋಸ್ಟಲ್‌ ಬ್ಯಾಲೆಟ್‌ಗಳ ಮತ ಎಣಿಕೆಗಾಗಿ ಹೆಚ್ಚುವರಿ ಎ.ಆರ್‌.ಒ. ಅ ಧಿಕಾರಿಗಳ ನೇಮಕ ಮಾಡಿಕೊಳ್ಳಬಹುದು. ಅಗತ್ಯವಿದ್ದಲ್ಲಿ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಿಕೊಳ್ಳಬಹುದು. ಮಾಸ್ಕ್, ಪಿಪಿಇ ಕಿಟ್‌, ಗ್ಲೌಸ್‌ ಮುಂತಾದ ಪರಿಕರಗಳ ವಿಲೇವಾರಿಯನ್ನು ಸರ್ಕಾರದ ನಿರ್ದೇಶನದಂತೆ ಮಾಡಬೇಕು. ಕೋವಿಡ್‌-19 ಮಾರ್ಗಸೂಚಿಗಳ ಪಟ್ಟಿಯನ್ನು ಪ್ರವೇಶ ದ್ವಾರ, ಮತ ಎಣಿಕಾ ಕೊಠಡಿಗಳಲ್ಲಿ ಹಾಗೂ ಇನ್ನಿತರ ಸ್ಥಳಗಳಲ್ಲಿ ಪ್ರಕಟಿಸಬೇಕು ಎಂದು ಚುನಾವಣಾ ಆಯೋಗ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಮತ ಎಣಿಕಾ ಕೇಂದ್ರಗಳಿಗೆ ಪ್ರವೇಶ ಮಿತಿ: ಮತ ಎಣಿಕೆ ಕೇಂದ್ರದ ಸುತ್ತಲೂ ಗೆಲುವಿನ ಸಂಭ್ರಮಾಚರಣೆಗಳಿಗೆ ಯಾವುದೇ ರೀತಿಯ ಅವಕಾಶವಿಲ್ಲ ಹಾಗೂ ಕೇಂದ್ರದ ಹೊರಗಡೆ ಜನ ಗುಂಪುಗೂಡುವುದನ್ನೂ ಸಹ ನಿಷೇ ಧಿಸಲಾಗಿದೆ ಎಂದು ಆಯೋಗ ತಿಳಿಸಿದೆ. ಗೆಲುವು ಸಾ ಧಿಸಿದ ಅಭ್ಯರ್ಥಿಯೊಂದಿಗೆ ಕೇವಲ ಇಬ್ಬರಿಗೆ ಮಾತ್ರ ಅವಕಾಶವಿರುತ್ತದೆ ಎಂದು ಆಯೋಗ ತಿಳಿಸಿದೆ.

ನಿಯಮ ಉಲ್ಲಘಿಸುವವರ ವಿರುದ್ಧ ಕಠಿಣ ಕ್ರಮ: ಕೋವಿಡ್‌-19 ನಿಯಮಾವಳಿಗಳನ್ನು ಪಾಲಿಸದೇ ಇದ್ದಲ್ಲಿ, ಅಂತಹ ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅನ್ವಯ ಸೆಕ್ಷನ್‌ 51ರಿಂದ 60 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 188 ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣಾ ಅ ಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ| ಕೆ. ಹರೀಶಕುಮಾರ ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.