ಕರಾವಳಿಯಲ್ಲೂ ತರಕಾರಿಗಳ ಬೆಲೆ ಏರಿಕೆ : ರಾಜ್ಯದ APMCಗಳಲ್ಲಿ ಕೊಳೆಯುತ್ತಿದೆ ಕೃಷ್ಯುತ್ಪನ್ನ

Team Udayavani, Apr 30, 2021, 11:14 PM IST

ಕರಾವಳಿಯಲ್ಲೂ ತರಕಾರಿಗಳ ಬೆಲೆ ಏರಿಕೆ : ರಾಜ್ಯದ APMCಗಳಲ್ಲಿ ಕೊಳೆಯುತ್ತಿದೆ ಕೃಷ್ಯುತ್ಪನ್ನ

ಬೆಂಗಳೂರು : ಕೊರೊನಾ 2ನೇ ಅಲೆಗೆ ರೈತರು ಕಂಗೆಟ್ಟಿದ್ದು, ತಾವು ಬೆಳೆದ ಉತ್ಪನ್ನಗಳನ್ನು ಮಾರಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೃಷಿ ಚಟುವಟಿಕೆಗೆ ಸರಕಾರ ಅವಕಾಶ ಕೊಟ್ಟರೂ, ಬೆಳೆ ಮಾರಾಟಕ್ಕೆ ಸಮಯದ ನಿರ್ಬಂಧ ಹೇರಿರುವುದು ಸಮಸ್ಯೆಯಾಗಿ ಪರಿಣಮಿಸಿದೆ.

ಎಪಿಎಂಸಿಗಳಲ್ಲೂ ಬೆಳಗ್ಗೆ 6ರಿಂದ 10ರ ವರೆಗೆ ಮಾತ್ರ ಮಾರಾಟಕ್ಕೆ ಅವಕಾಶವಿದೆ. ಜತೆಗೆ ಹಣ್ಣು ಮತ್ತು ತರಕಾರಿ ಮಳಿಗೆಗಳೂ ದಿನಪೂರ್ತಿ ತೆರೆಯುವಂತಿಲ್ಲ. ಹೊಟೇಲ್‌, ರೆಸ್ಟೋರೆಂಟ್‌, ಮದುವೆಯಂಥ ಕಾರ್ಯಕ್ರಮಗಳೂ ಇಲ್ಲ. ಹಾಗಾಗಿ ಖರೀದಿದಾರರಿಲ್ಲದೆ ಟನ್‌ ಗಟ್ಟಲೆ ತರಕಾರಿ ಮತ್ತು ಹಣ್ಣುಗಳು ಕೊಳೆಯುತ್ತಿವೆ. ಈ ಹಿನ್ನೆಲೆಯಲ್ಲಿ ಕಳೆದ ಬಾರಿಯಂತೆ ಸರಕಾರವೇ ಹಣ್ಣು ಮತ್ತು ತರಕಾರಿ ಖರೀದಿಸಿ ಹಾಪ್‌ಕಾಮ್ಸ್‌ ಮಳಿಗೆಗಳ ಮೂಲಕ ಜನರಿಗೆ ಮಾರಬೇಕು. ನಂದಿನಿ ಹಾಲಿನ ಮಳಿಗೆಗಳ ರೀತಿಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೂ ಹಣ್ಣು ಮತ್ತು ತರಕಾರಿ ಅಂಗಡಿಗಳಿಗೆ ಅವಕಾಶ ಕಲ್ಪಿಸಬೇಕೆಂಬ ಬೇಡಿಕೆಯನ್ನು ರೈತರು ಮುಂದಿಟ್ಟಿದ್ದಾರೆ.

ಸಮಸ್ಯೆ ಎಲ್ಲೆಲ್ಲಿ?
ಬೆಂಗಳೂರು, ಬೆಳಗಾವಿ, ಮೈಸೂರು, ಹಾಸನ, ಕಲಬುರಗಿ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಪ್ಪಳ ಸಹಿತ ಹಲವೆಡೆ ಆಲೂಗಡ್ಡೆ, ಟೊಮೆಟೋ, ಕ್ಯಾರೆಟ್‌, ಬೀನ್ಸ್‌, ಈರುಳ್ಳಿ, ಎಲೆಕೋಸು, ದಪ್ಪ ಮೆಣಸಿನಕಾಯಿ, ನುಗ್ಗೇಕಾಯಿ ಹಾಗೂ ಹಣ್ಣುಗಳಾದ ಬಾಳೆಹಣ್ಣು, ಪಪ್ಪಾಯ, ಕಲ್ಲಂಗಡಿ, ಕಬೂìಜಾ ಕೊಳೆಯತೊಡಗಿವೆ. ಇದರೊಂದಿಗೆ ಹಲವೆಡೆ ಹೂ ಬೆಳೆಗಳೂ ಹಾಳಾಗುತ್ತಿವೆ. ಆದ್ದರಿಂದ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ :ಜನ ಎಚ್ಚೆತ್ತುಕೊಳ್ಳದಿದ್ದಲ್ಲಿ ಭವಿಷ್ಯ ಭೀಕರ: ಈಶ್ವರಪ್ಪ

ಕರಾವಳಿಗೇನು ನಷ್ಟ ?
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಹಲವು ತರಕಾರಿಗಳಿಗೆ ಇತರ ಜಿಲ್ಲೆಗಳನ್ನು ಅವಲಂಬಿಸಿವೆ. ಅಲ್ಲಿಂದ ತರಕಾರಿ ಸಾಗಣೆ ಕಡಿಮೆಯಾದರೆ ಇಲ್ಲಿನ ಗ್ರಾಹಕರ ಜೇಬಿಗೆ ಹೊರೆಯಾಗುತ್ತದೆ. ಕರ್ಫ್ಯೂಗಿಂತ ಮೊದಲು ಕೆಜಿ ಟೊಮೆಟೊ ಗೆ ಬೆಲೆ 20 ರೂ. ಒಳಗಿತ್ತು. ಈಗ ಹಲವೆಡೆ 25 ರೂ. ಹತ್ತಿರವಿದೆ. 20 ರೂ. ವರೆಗೆ ಇಳಿದಿದ್ದ ಈರುಳ್ಳಿ ಬೆಳೆಯೂ ಛಂಗನೆ ನೆಗೆದಿದೆ. ಇದು ಒಂದೆರಡಕ್ಕಲ್ಲ; ಎಲ್ಲ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ.

ಎಪಿಎಂಸಿ ಮಾರುಕಟ್ಟೆಗಳಲ್ಲಿ ಹಣ್ಣು ತರಕಾರಿ ಮಾರಾಟವಾಗದೆ ರೈತರು ಕಷ್ಟಕ್ಕೆ ಸಿಲುಕಿರುವುದು ಸರಕಾರದ ಗಮನಕ್ಕೂ ಬಂದಿದೆ. ಮಾರಾಟದ ಅವಧಿ ವಿಸ್ತರಣೆ ಮಾಡಿದರೆ ಬೇರೆ ಬೇರೆ ರೀತಿಯ ಸಮಸ್ಯೆಗಳು ಎದುರಾಗಬಹುದು ಎಂಬ ಆತಂಕವೂ ಇದೆ. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚಿಸಿ ಪರಿಹಾರೋಪಾಯ ಕಂಡುಕೊಳ್ಳಲಾಗುವುದು.
– ಎಸ್‌.ಟಿ.ಸೋಮಶೇಖರ್‌, ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವ

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.