ತೆಲುಗು ಸಿನಿಮಾದಲ್ಲಿ ಮಿಂಚುತ್ತಿರುವ ಶ್ರೀಲೀಲಾ
Team Udayavani, May 1, 2021, 9:16 AM IST
ಕನ್ನಡದಲ್ಲಿ “ಕಿಸ್’, “ಭರಾಟೆ’ ಸಿನಿಮಾಗಳ ಮೂಲಕ ಸಿನಿ ಪ್ರಿಯರ ಗಮನ ಸೆಳೆದಿದ್ದ ನಾಯಕಿ ಶ್ರೀಲೀಲಾ, ಸದ್ಯ ಧನ್ವೀರ್ ಜೊತೆ “ಬೈ ಟು ಲವ್’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ನಡುವೆಯೇ ತೆಲುಗಿನತ್ತಲೂ ಮುಖ ಮಾಡಿರುವ ಶ್ರೀಲೀಲಾ, ಸದ್ದಿಲ್ಲದೆ ತೆಲುಗು ಚಿತ್ರವೊಂದರಲ್ಲಿ ಅಭಿನಯಿಸಿದ್ದಾರೆ.
ಅಂದಹಾಗೆ, ಶ್ರೀಲೀಲಾ ಅಭಿನಯಿಸಿರುವ ಮೊದಲ ತೆಲುಗು ಚಿತ್ರದ ಹೆಸರು “ಪೆಳ್ಳಿ ಸಂದಡಿ’. ತೆಲುಗು ನಟ ಶ್ರೀಕಾಂತ್ ಪುತ್ರ ರೋಶನ್ ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿಯಾಗಿ ಕಾಣಿಸಿ ಕೊಳ್ಳುತ್ತಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ “ಪೆಳ್ಳಿ ಸಂದಡಿ’ ಚಿತ್ರದ ಪೋಸ್ಟರ್ಗಳಲ್ಲಿ, ಶ್ರೀಲೀಲಾ ಲುಕ್ ತೆಲುಗು ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಸದ್ಯ ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ “ಪೆಳ್ಳಿ ಸಂದಡಿ’ ಚಿತ್ರದ ಮೊದಲ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಗಿದೆ.
ಸದ್ಯ ಬಿಡುಗಡೆಯಾಗಿರುವ “ಪೆಳ್ಳಿ ಸಂದಡಿ’ ಚಿತ್ರದ ಮೊದಲ ಲಿರಿಕಲ್ ವಿಡಿಯೋ ಕೂಡ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ಶ್ರೀಲೀಲಾ ಮೊದಲ ತೆಲುಗು ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಗುವ ಎಲ್ಲ ಲಕ್ಷಣಗಳೂ ಕಾಣುತ್ತಿದೆ.
ಇನ್ನು ಸದ್ಯ ಶ್ರೀಲೀಲಾ ಕನ್ನಡದಲ್ಲಿ ಅಭಿನಯಿಸುತ್ತಿರುವ “ಬೈ ಟು ಲವ್’ ಚಿತ್ರ ತೆಲುಗಿಗೆ ರಿಮೇಕ್ ಆಗಲಿದೆ ಎನ್ನಲಾಗುತ್ತಿದೆ. ಕನ್ನಡ ಮತ್ತು ತೆಲುಗು ಎರಡೂ ಭಾಷೆಗಳಿಗೂ ಈ ಚಿತ್ರದ ಕಥೆ ಕನೆಕ್ಟ್ ಆಗುವುದರಿಂದ, ಚಿತ್ರವನ್ನು ಕನ್ನಡದ ಜೊತೆ ತೆಲುಗಿನಲ್ಲೂ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸುತ್ತಿದೆ ಎನ್ನಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ