ಜನ ಆಶೀರ್ವದಿಸಿದ್ದಾರೆ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ : ಅಸ್ಸಾಂ ಸಿಎಂ ಸೋನೊವಾಲ್
Team Udayavani, May 2, 2021, 3:13 PM IST
ಅಸ್ಸಾಂ : ಅಸ್ಸಾಂನಲ್ಲಿ ಎನ್ ಡಿಎ ಮೈತ್ರಿಕೂಟ 77 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತ್ತ ಕಾಂಗ್ರೆಸ್ ಮೈತ್ರಿಕೂಟ 49 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಪಕ್ಷದ ಪ್ರಕಾರ ಹೇಳುವುದಾದರೆ ಬಿಜೆಪಿ 62, ಅಸ್ಸಾಂ ಗಣಪರಿಷತ್ 10 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುತ್ತಿದೆ.
ಹೆಚ್ಚು ಹೆಚ್ಚು ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಅಸ್ಸಾಂನಲ್ಲಿ ಮತ್ತೆ ಅಧಿಕಾರದತ್ತ ಎನ್ ಡಿ ಎ ಸಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಜನರು ಮತ್ತೆ ನಮಗೆ ಆಶೀರ್ವದಿಸಿದ್ದಾರೆ. ಅಸ್ಸಾಂ ನಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ತಿಳಿಸಿದ್ದಾರೆ.
ಒಟ್ಟು ಅಸ್ಸಾ ರಾಜ್ಯದಲ್ಲಿ 126 ಕ್ಷೇತ್ರಗಳಿಗೆ ವಿಧಾನ ಸಭಾ ಚುನಾವಣೆ ನಡೆದಿತ್ತು. ಈ ರಾಜ್ಯದಲ್ಲಿ ಎನ್ ಡಿ ಎ ಮತ್ತು ಯುಪಿಎ ಮೈತ್ರಿ ಕೂಟಗಳಿಗೆ ಭಾರೀ ಪೈಪೋಟಿ ಇದೆ. ಅಂತಿಮ ಫಲಿತಾಂಶ ಬಂದ ಮೇಲೆ ಯಾರಿಗೆ ಜಯ ಎಂಬುದನ್ನು ತಿಳಿಯಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.