ಮಲಾಡ್‌ ಪರಿಸರದಲ್ಲಿ 2,200 ಹಾಸಿಗೆಗಳ ಕೋವಿಡ್‌ ಜಂಬೋ ಸೆಂಟರ್‌

Team Udayavani, May 3, 2021, 1:36 PM IST

Covid Jumbo Center with 2,200 beds in Malad environment

ಮುಂಬಯಿ: ಮಲಾಡ್‌ ಪರಿಸರದಲ್ಲಿ ಅತ್ಯಾಧುನಿಕ 2,200 ಹಾಸಿಗೆಗಳ ಕೊರೊನಾ ಚಿಕಿತ್ಸಾ ಕೇಂದ್ರವನ್ನು ನಿರ್ಮಿಸಲು ಮುಂಬಯಿ ಮಟ್ರೋ ಪಾಲಿಟನ್‌ ಪ್ರದೇಶ ಪ್ರಾಧಿಕಾರ (ಎಂಎಂಆರ್‌ಡಿಎ)ಯು ಈಗಾಗಲೇ ಟೆಂಡರ್‌ ಘೋಷಿಸಿದ್ದು, ಮೇ 7ರಂದು ಟೆಂಡರ್‌ ತೆರೆಯಲಾಗುವುದು ಎಂದು ಎಂಎಂಆರ್‌ಡಿಎ ಅಧಿಕಾರಿ ಗಳು ತಿಳಿಸಿದ್ದಾರೆ.

ಕೋವಿಡ್‌ ಸೆಂಟರ್‌ ನಿರ್ಮಾ ಣಕ್ಕೆ ಸುಮಾರು 65 ಕೋ. ರೂ. ವೆಚ್ಚ ಅಂದಾಜಿಸಲಾಗಿದೆ.ಆದರೆ ಟೆಂಡರ್‌ ಪ್ರಕ್ರಿಯೆ ಅಂತಿಮಗೊಳ್ಳ ದ ಕಾರಣ ವೆಚ್ಚವನ್ನು ನಿರ್ಧರಿಸಲಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಕೊರೊನಾ 2ನೇ ಅಲೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳವಾಗಿ ಆರೋಗ್ಯ ವ್ಯವಸ್ಥೆಯ ಮೇಲೆ ಭಾರೀ ಒತ್ತಡವನ್ನುಂಟು ಮಾಡಿದೆ.

ಕೊರೊನಾ 3ನೇ ಅಲೆಯ ಸಾಧ್ಯತೆಯನ್ನು ವ್ಯಕ್ತಪಡಿಸುತ್ತಿರು ವುದರಿಂದ ಮುಂಬಯಿ ಮನಪಾವು ಮಲಾಡ್‌ ಪರಿಸರ ದಲ್ಲಿ 2,200 ಹಾಸಿಗೆಗಳ ಜಂಬೋ ಕೋವಿಡ್‌ ಕೇಂದ್ರಗಳನ್ನು ನಿರ್ಮಿ ಸುವ ಕೆಲಸವನ್ನು ಎಂಎಂಆರ್‌ಡಿಎಗೆ ಹಸ್ತಾಂತರಿಸಿದೆ. ಎಂಎಂ ಆರ್‌ಡಿಎ ಈ ಜಂಬೋ ಆಸ್ಪತ್ರೆಯ ನಿರ್ಮಾಣಕ್ಕಾಗಿ ಟೆಂಡರ್‌ ಪ್ರಕ್ರಿಯೆ ಹೊರಡಿಸಿತ್ತು. 2,200 ಹಾಸಿಗೆಗಳ ಪೈಕಿ 1,400 ಹಾಸಿಗೆಗಳು ಆಮ್ಲಜನಕ ವ್ಯವಸ್ಥೆ ಹೊಂದಿದ್ದರೆ, ಐಸಿಯು ಹಾಸಿಗೆಗಳ ಸಂಖ್ಯೆಯು 200ರಷ್ಟು, ಸಾಮಾನ್ಯ ರೋಗಿಗಳಿಗೆ 600 ಹಾಸಿಗೆಗಳನ್ನು ನಿರ್ಮಿಸಲಾಗುವುದು. ಇದಲ್ಲದೆ ಈ ಕೋವಿಡ್‌ ಜಂಬೋ ಕೇಂದ್ರದಲ್ಲಿ 18 ಡಯಾಲಿಸಿಸ್‌ ಘಟಕಗಳು, ಪ್ರಯೋಗಾಲಯಗಳು, ಸಿಟಿ ಸ್ಕ್ಯಾನ್‌ ವ್ಯವಸ್ಥೆಗಳು ಮತ್ತು ಕೋವಿ ಡ್‌ ಪರೀಕ್ಷಾ ಯಂತ್ರಗಳ ಸೌಲಭ್ಯ ಗಳನ್ನು ಒದಗಿಸಲಾಗುವುದು.

ಮಲಾಡ್‌ ಪರಿಸರದಲ್ಲಿ ಜಂಬೋ ಕೋವಿಡ್‌ ಸೆಂಟರ್‌ ನಿರ್ಮಿಸಲಿರುವ ಮೈದಾನದಲ್ಲಿ ಮಳೆಗಾಲದಲ್ಲಿ ನೀರು ತುಂಬು ತ್ತದೆ. ಆದರೆ ಜಮೀನು ಖಾಸಗಿ ಒಡೆತನದಲ್ಲಿ ಇರುವುದರಿಂದ ಅದನ್ನು ಭರ್ತಿ ಮಾಡುವಂತೆ ಎಂಎಂಆರ್‌ಡಿಎ ಬಿಎಂಸಿಗೆ ಸೂಚಿಸಿತ್ತು. ಇದರ ಕಾಮಗಾರಿ ಯನ್ನು ಪ್ರಾರಂಭಿಸಿದ್ದ ಮನಪಾ ಎಂಎಂಆರ್‌ಡಿಎಗೆ ಹಸ್ತಾಂತರಿಸಿದ ಬಳಿಕ 15ರಿಂದ 20 ದಿನಗಳಲ್ಲಿ ಕೋವಿಡ್‌ ಜಂಬೋ ಕೇಂದ್ರ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಎಂಎಂಆರ್‌ಡಿಎ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕಾಗಿ ಈಗಾಗಲೇ ಎಲ್ಲ ಟೆಂಡರ್‌ ಸ್ವೀಕರಿಸಲಾಗಿದ್ದು, ಮೇ 7ರಂದು ಟೆಂಡರ್‌ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗು ವುದು. ಮನಪಾ ವತಿಯಿಂದ ಮೈದಾನವನ್ನು ಸ್ವಾಧೀನಪಡಿಸಿ ಕೊಂಡ ಬಳಿಕ ಜಂಬೋ ಕೋವಿಡ್‌ ಕೇಂದ್ರಗಳ ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.