ನಾಳೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ಸಚಿವ ಬಿ.ಸಿ.ಪಾಟೀಲ್ ರಿಂದ ಕೋವಿಡ್ ಪ್ರಗತಿ ಪರಿಶೀಲನೆ
Team Udayavani, May 5, 2021, 1:16 PM IST
ಬೆಂಗಳೂರು :ಕೃಷಿ ಸಚಿವರು ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಬಿ.ಸಿ.ಪಾಟೀಲ್ ಉಸ್ತುವಾರಿ ಜಿಲ್ಲೆ ಕೊಪ್ಪಳದಲ್ಲಿನ ಕೋವಿಡ್ ಪರಿಶೀಲನೆಗೆ ಮುಂದಾಗಿದ್ದಾರೆ.
ಮೇ.6ರಂದು ಬೆಳಗ್ಗೆ ಕೊಪ್ಪಳಕ್ಕೆ ತೆರಳಲಿರುವ ಅವರು, ಮಧ್ಯಾಹ್ನ 3.30 ಕ್ಕೆ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಬಗ್ಗೆ ಸೇರಿದಂತೆ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ.
ಬಳಿಕ 4.30 ರ ಸುಮಾರಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೊಪ್ಪಳ ಜಿಲ್ಲೆಯಾದ್ಯಂತ ಕೋವಿಡ್ ಅನ್ನು ನಿಯಂತ್ರಿಸಲು ಹಾಗೂ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲು ಕೈಗೊಂಡ ಕ್ರಮಗಳಿಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಸಂಬಂಧಿತ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಲಿದ್ದಾರೆ.
ಮೇ.7ರ ಶುಕ್ರವಾರದಂದು ಕುಷ್ಟಗಿ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಸೋಂಕಿತರಿಗೆ ಚಿಕಿತ್ಸೆ ,ನಿಯಂತ್ರಣ ಸಂಬಂಧ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಅಲ್ಲಿಂದ ಮಧ್ಯಾಹ್ನ ಯಲಬುರ್ಗಾ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಲಿರುವ ಬಿ.ಸಿ.ಪಾಟೀಲ್,ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ಆಸ್ಪತ್ರೆಯಲ್ಲಿನ ಸೌಲಭ್ಯಗಳು ನಿಯಂತ್ರಣ ಬಗ್ಗೆ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ