ಕೆಎಂಎಫ್‌ನಿಂದ 200 ಹಾಸಿಗೆಗೆ ಆಕ್ಸಿಜನ್‌ ವ್ಯವಸ್ಥೆ


Team Udayavani, May 5, 2021, 2:47 PM IST

Oxygen system from KMF to 200 bed

ಬೆಳಗಾವಿ: ರೈತರ ಜೀವನಾಡಿ ಆಗಿರುವ ಕರ್ನಾಟಕ ಹಾಲು ಮಹಾಮಂಡಳಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ 200 ಹಾಸಿಗೆಗಳಿಗೆ ಆಕ್ಸಿಜನ್‌ ಪೂರೈಸುವ ನಿರ್ಧಾರ ತೆಗೆದುಕೊಂಡಿದೆ ಎಂದು ಕೆಎಂಎಫ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿತಿಳಿಸಿದರು.
ಬೆಂಗಳೂರಿನ ಕೆಎಂಎಫ್‌ ಪ್ರಧಾನ ಕಚೇರಿಯಲ್ಲಿ ಮಂಗಳವಾರ ನಡೆದ ಅ ಧಿಕಾರಿಗಳ ಸಭೆಯಲ್ಲಿ ಈವಿಷಯ ತಿಳಿಸಿ, ಆಕ್ಸಿಜನ್‌ ಕೊರತೆಯಿಂದ ಬಹಳಷ್ಟು ಕೊರೊನಾ ಸೋಂಕಿತರು ಸಾವಿಗೀಡಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಅನುಕೂಲಕ್ಕಾಗಿ 200ಆಕ್ಸಿಜನ್‌ ಬೆಡ್‌ ವ್ಯವಸ್ಥೆ ಮಾಡಲಾಗುತ್ತಿದೆ.

ಬೆಡ್‌,ಸಿಲಿಂಡರ್‌ ಮತ್ತು ಆಕ್ಸಿಜನ್‌ ಉತ್ಪಾದಿಸಲುಸಾಮರ್ಥ್ಯವಿರುವ ಕಂಪನಿಯೊಂದಕ್ಕೆ ಟೆಂಡರ್‌ನೀಡಲಾಗುತ್ತಿದೆ. ಸೋಂಕಿತರಿಗೆ ಆಕ್ಸಿಜನ್‌ ಉಚಿñವಾಗಿ ‌ನೀಡಲು ಯೋಜಿಸಿದ್ದು, ಸರ್ಕಾರಿ ಆಸ್ಪತ್ರೆ ಯೊಂದನ್ನುಗುರುತಿಸಿ ಅಲ್ಲಿ ಆಕ್ಸಿಜನ್‌ ವ್ಯವಸ್ಥೆ ಕಲ್ಪಿಸಿ ಕೊಡಲಾಗುವುದು. ಸೋಂಕಿತರಿಗೆ ಈ ಸೌಲಭ್ಯ ಸಂಪೂರ್ಣ ಉಚಿತವಾಗಿದ್ದು, ಕೊರೊನಾ ಸೋಂಕಿತರಿಗೆ ತಿಂಗಳೊಳಗೆ ಆಕ್ಸಿಜನ್‌ ಪೂರೈಲಾಗುವುದು ಎಂದರು.

ಕೆಎಂಎಫ್‌ ಪ್ರಸಕ್ತ 2020-21ನೇ ಸಾಲಿನಲ್ಲಿ 170ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ದಿನನಿತ್ಯ 81.50ಲಕ್ಷ ಲೀಟರ್‌ ಹಾಲು ಸಂಗ್ರಹವಾಗುತ್ತಿದೆ. ಕೋವಿಡ್‌ ಸಂದರ್ಭ 28ಲಕ್ಷ ಲೀಟರ್‌ ಹಾಲನ್ನು ಹಾಲಿನ ಪೌಡರ್‌ ಆಗಿ ಪರಿವರ್ತಿಸಲಾಗುತ್ತಿದೆ. 52 ಲಕ್ಷಲೀಟರ್‌ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನುಮಾರಾಟ ಮಾಡಲಾಗುತ್ತಿದೆ.

ಕೋವಿಡ್‌ನ‌ಂತಹಸಂದಿಗ್ಧ ಸಂದರ್ಭದಲ್ಲೂ ರೈತರಿಂದ ಹಾಲನ್ನು ತಪ್ಪದೇಸಂಗ್ರಹಿಸಲಾಗುತ್ತಿದೆ. ರೈತರಿಗೆ ಯಾವುದೇತೊಂದರೆಯಾಗದಂತೆ ನಮ್ಮ ಸಿಬ್ಬಂದಿ ಕರ್ತವ್ಯನಿರ್ವಹಿಸುತ್ತಿದ್ದಾರೆ. ಕೆಎಂಎಫ್‌ನ ಎಲ್ಲ ನೌಕರವರ್ಗದವರಿಗೆ ವಿಮೆ ಸೌಲಭ್ಯ ಕಲ್ಪಿಸಿಕೊಡಲಾಗಿದೆಎಂದರು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸರ್ಕಾರದಆದೇಶದನ್ವಯ ಹಾಲು-ಹಾಲಿನ ಉತ್ಪನ್ನಗಳ ನಂದಿನಿಮಾರಾಟ ಮಳಿಗೆಗಳನ್ನು ದಿನಪೂರ್ತಿ ತೆರೆಯಲುಅವಕಾಶ ಕಲ್ಪಿಸಲಾಗಿದೆ. ಗ್ರಾಹಕರು-ಸಾರ್ವಜನಿಕರುಇದರ ಸದುಪಯೋಗ ಪಡೆಯಬೇಕು. ಮಾರಾಟಮಳಿಗೆಗಳಲ್ಲಿ ಸಾಮಾಜಿಕ ಅಂತರ ಕಾಪಾಡುವುದರಜತೆಗೆ ಮಾಸ್ಕ್ ಧರಿಸಬೇಕು.

ಕೋವಿಡ್‌ ನಿಯಮಗಳನ್ನುಕಡ್ಡಾಯವಾಗಿ ಪಾಲಿಸಿ ಸಹಕರಿಸುವಂತೆ ಕೆಎಂಎಫ್‌ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ರೈತರಲ್ಲಿ-ಗ್ರಾಹಕರಲ್ಲಿಮನವಿ ಮಾಡಿದ್ದಾರೆ. ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ, ಪಶು ಸಂಗೋಪನೆ, ಮಾರುಕಟ್ಟೆ, ಗುಣನಿಯಂತ್ರಣ, ಅಭಿಯಂತರ, ಖರೀದಿ ವಿಭಾಗದಮುಖ್ಯಸ್ಥರು ಇದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.