ಕೋವಿಡ್‌ ಕೇರ್‌ ಆಸ್ಪತ್ರೆ ಆರಂಭಕ್ಕೆ ಸಿದ್ಧತೆ


Team Udayavani, May 5, 2021, 10:17 PM IST

5-15

ಬಳ್ಳಾರಿ: ಬಳ್ಳಾರಿ ಜಿಲ್ಲಾಡಳಿತದಿಂದ ಕೋವಿಡ್‌-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಹಾಗೂ ಕೋವಿಡ್‌ ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಕೋವಿಡ್‌ ಕೇರ್‌ ಆಸ್ಪತ್ರೆಗಳನ್ನು ತೆರೆಯಲು ನಿರ್ಧರಿಸಿದೆ. ಇದರ ಜೊತೆಗೆ ತೋರಣಗಲ್‌ ಬಳಿಯ ಜಿಂದಾಲ್‌ ಎದುರುಗಡೆಯ ವಿಶಾಲ ಮೈದಾನದಲ್ಲಿ 1 ಸಾವಿರ ಹಾಸಿಗೆ ಸೌಕರ್ಯವುಳ್ಳ ತಾತ್ಕಾಲಿಕ ಆಸ್ಪತ್ರೆ ಆರಂಭಿಸಲಾಗುತ್ತಿದೆ.

ಈ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸಲು ತಜ್ಞ ವೈದ್ಯರು, ವೈದ್ಯರು ಸೇರಿದಂತೆ ವಿವಿಧ ಹುದ್ದೆಗಳಿಗೆ ಸಿಬ್ಬಂದಿಯ ಅಗತ್ಯತೆ ಇರುವುದರಿಂದ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲಿನ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ  ಧಿಕಾರಿ ಪವನಕುಮಾರ ಮಾಲಪಾಟಿ ತಿಳಿಸಿದ್ದಾರೆ. ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಸಂದರ್ಶನ ಪ್ರಕ್ರಿಯೆಯು ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರ್‌ರ ಕಚೇರಿಯಲ್ಲಿ ಆರಂಭವಾಗಿದ್ದು, ಮೇ 11ರವರೆಗೆ ನಡೆಯಲಿದೆ. ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ನಡೆಯಲಿದ್ದು, ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಒಂದು ಸೆಟ್‌ ನಕಲು ಪ್ರತಿ ಸಲ್ಲಿಸುವುದು. ಈ ನೇಮಕಾತಿ ತಾತ್ಕಾಲಿಕವಾಗಿ ಗುತ್ತಿಗೆ ಆಧಾರವಾಗಿದ್ದು ಕಾಯಂ ನೌಕರಿಯಾಗಿರುವುದಿಲ್ಲ. ನಿಯಮ ಮತ್ತು ಷರತ್ತುಗಳನ್ನು ಸಂದರ್ಶನದಲ್ಲಿ ತಿಳಿಸಲಾಗುವುದು. ನೇಮಕಾತಿ ನಂತರ ಕಾರ್ಯನಿರ್ವಹಿಸುವ ಸ್ಥಳ, ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಇರಬಹುದಾಗಿದೆ. ಗುತ್ತಿಗೆ ಅವಧಿ ಆರು ತಿಂಗಳುಗಳಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪವನ್‌ಕುಮಾರ್‌ ಮಾಲಪಾಟಿ ಅವರು ತಿಳಿಸಿದ್ದಾರೆ.

ಜಿಂದಾಲ್‌ ಸಂಜೀವಿನಿ ಸಾವಿರ ಹಾಸಿಗೆಗಳ ತಾತ್ಕಾಲಿಕ ಆಸ್ಪತ್ರೆ, ತೋರಣಗಲ್ಲಿನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಊಟ, ವಸತಿ ಉಚಿತವಾಗಿ ಕಲ್ಪಿಸಲಾಗುವುದು. ಜಿಲ್ಲಾ ಆಸ್ಪತ್ರೆ, ವಿಮ್ಸ್‌ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಶುಶ್ರೂಷಕರಿಗೆ ಹಾಗೂ ಪ್ಯಾರಾ ಮೆಡಿಕಲ್‌ ಸಿಬ್ಬಂದಿಗೆ ಅವಶ್ಯಕತೆ ಇದ್ದಲ್ಲಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಪರಿಗಣಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಹುದ್ದೆಗಳ ವಿವರ: μಸಿಶಿಯನ್‌(21), ಅರಿವಳಿಕೆ ತಜ್ಞರು (16), ಪ್ರಸೂತಿ ಮತ್ತು ಸ್ರಿàರೋಗ ತಜ್ಞರು (1), ಸಾಮಾನ್ಯ ಔಷಧ, ಉಸಿರಾಟ ಔಷಧ, ಕಿವಿ ಮೂಗು ಗಂಟಲು ತಜ್ಞರು (20), μಸಿಯೋ ಥೆರಪಿಸ್ಟ್‌ (6), ಸ್ಟಾಫ್‌ ನರ್ಸ್‌ (146), ಪ್ರಯೋಗಾಲಯ ತಜ್ಞರು (39), ಫಾರ್ಮಾಸಿಸ್ಟ್‌ (12), ಕ್ಷ-ಕಿರಣ ತಜ್ಞರು(13), ಡಿ ಗ್ರೂಪ್‌ ನೌಕರರು(141) ಹಾಗೂ ಚಾಲಕರು (4) ಹುದ್ದೆಗಳಿಗೆ ಆಯಾ ತಹಶೀಲ್ದಾರ್‌ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ.

ತಜ್ಞ ವೈದ್ಯರಿಗೆ ಮಾಸಿಕ 2.50 ಲಕ್ಷ ರೂ. ವೇತನ ನಿಗದಿ ಮಾಡಲಾಗಿದೆ. ಜಿಂದಾಲ್‌ ಆಸ್ಪತ್ರೆಗಾಗಿ ತಜ್ಞ ವೈದ್ಯರು (31), ವೈದ್ಯರು(75), ಶುಶ್ರೂಷಕರು(155), ಶುಶ್ರೂಷಕ ಮೇಲ್ವಿಚಾರಕರು (19), ತಲಾ 12 ರೇಡಿಯಾಲಜಿ ತಂತ್ರಜ್ಞರು ಮತ್ತು μಸಿಯೋಥೆರಪಿಸ್ಟ್‌ಗಳು, 300 ಗ್ರೂಪ್‌ ಡಿ ನೌಕರರೊಂದಿಗೆ ಫಾರ್ಮಾಸಿಸ್ಟ್‌, ಆಪ್ತಸಮಾಲೋಚಕರು, ಸ್ಟೋರ್‌ ಕೀಪರ್‌ಗಳು, ಬಯೋ ಮೆಡಿಕಲ್‌ ಎಂಜಿನಿಯರ್‌ಗಳು ಹಾಗೂ ಆಹಾರ ತಜ್ಞರ ನೇಮಕವೂ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿರುವ ಜಿಲ್ಲಾ ಧಿಕಾರಿ ಪವನಕುಮಾರ ಮಾಲಪಾಟಿ ಅವರು ಮೊದಲ ಬಂದವರಿಗೆ ಮೊದಲ ಆದ್ಯತೆ ಮೇರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ. 08392-277100 ಗೆ ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.