ಕೋವಿಡ್ ಹೋರಾಟದಲ್ಲಿ ಜನಪ್ರತಿನಿಧಿಗಳೂ ಜವಾಬ್ದಾರಿ ತೋರಲಿ

Team Udayavani, May 6, 2021, 6:00 AM IST

ಕೋವಿಡ್ ಹೋರಾಟದಲ್ಲಿ ಜನಪ್ರತಿನಿಧಿಗಳೂ ಜವಾಬ್ದಾರಿ ತೋರಲಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಹೆಚ್ಚಳವಾಗುತ್ತಿರುವ ಮಧ್ಯೆಯೇ ಬೆಡ್‌ ಬ್ಲಾಕಿಂಗ್‌ ಹಗರಣ ಅನಾವರಣವಾಗಿದೆ. ಅದರಲ್ಲೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಶಾಸಕರಾದ ರವಿಸುಬ್ರಹ್ಮಣ್ಯ, ಸತೀಶ್‌ ರೆಡ್ಡಿ ಅವರು, ಕೊರೊನಾ ವಾರ್‌ ರೂಂಗಳ ಮೇಲೆ ದಾಳಿ ಮಾಡಿ ಬೆಡ್‌ ಬ್ಲಾಕಿಂಗ್‌ ದಂಧೆ ಅನಾವರಣ ಮಾಡಿದ್ದಾರೆ. ಒಂದು ರೀತಿಯಲ್ಲಿ ಜನಪ್ರತಿನಿಧಿಗಳು ಮಾಡಬಹುದಾದ ಒಳ್ಳೆಯ ಕೆಲಸವಿದು.

ಬೆಂಗಳೂರಿನಲ್ಲಂತೂ ಇತ್ತೀಚಿನ ದಿನಗಳಲ್ಲಿ ಕೋವಿಡ್ ರೋಗಿಗಳಿಗೆ ಬೆಡ್‌ಗಳು ಸಿಗುತ್ತಲೇ ಇಲ್ಲ. ಸ್ವತಃ ಸಚಿವರು, ಶಾಸಕರು, ಸಂಸದರು ಕರೆ ಮಾಡಿ ಬೆಡ್‌ಗಾಗಿ ಮನವಿ ಸಲ್ಲಿಸಿದರೂ ಯಾವುದೇ ಉಪಯೋಗವಾಗುತ್ತಿರಲಿಲ್ಲ. ಬೆಡ್‌ ಸಿಗದೇ, ವೆಂಟಿಲೇಟರ್‌, ಹಾಸಿಗೆ ಸಿಗದೇ ಅದೆಷ್ಟೋ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಗಳಲ್ಲಿ ನಿಜಕ್ಕೂ ಇಂಥ ಸಮಸ್ಯೆ ಇದೆಯೇ ಎಂಬುದನ್ನು ಪರಿಶೀಲನೆ ಮಾಡುವ ಸಲುವಾಗಿಯೇ ತೇಜಸ್ವಿ ಸೂರ್ಯ ಮತ್ತವರ ಟೀಂ ಕೆಲಸ ಮಾಡಿತ್ತು. ಇದರಲ್ಲಿ ಬೆಡ್‌ ಬ್ಲಾಕಿಂಗ್‌ ದಂಧೆ ಕಂಡು ಬಂದಿತ್ತು. ಹೀಗಾಗಿ ದಿಢೀರನೇ ಕೋವಿಡ್ ವಾರ್‌ ರೂಂಗಳ ಮೇಲೆ ದಾಳಿ ಮಾಡಿ, ಬ್ಲಾಕ್‌ ಮಾಡಲಾಗಿದ್ದ ಬೆಡ್‌ಗಳನ್ನು ತೆರವು ಮಾಡಲಾಗಿತ್ತು.

ಈ ಘಟನೆಯ ಅನಂತರ ಇಡೀ ಪ್ರಕರಣದ ಬಗ್ಗೆ ಸಿಸಿಬಿ ತನಿಖೆ ನಡೆಸುತ್ತಿದೆ. ಆಗಲೇ ಇಬ್ಬರನ್ನು ಬಂಧಿಸಿ ವಿಚಾರಣೆಯನ್ನೂ ನಡೆಸಲಾಗಿದೆ. ಈ ಎಲ್ಲ ಘಟನಾವಳಿಗಳು ಒಂದು ರೀತಿಯಲ್ಲಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬರುವಂಥವೇ ಆಗಿವೆ.

ರಾಜ್ಯದಲ್ಲಿ 28 ಸಂಸದರು ಮತ್ತು 224 ಮಂದಿ ಶಾಸಕರಿದ್ದಾರೆ. ಸಂಸದರು ತಮ್ಮ ಜಿಲ್ಲೆಗಳಲ್ಲಿನ ಕೊರೊನಾ ಸ್ಥಿತಿಗತಿ ಬಗ್ಗೆ ಮತ್ತು ಆಸ್ಪತ್ರೆಗಳಲ್ಲಿನ ವ್ಯವಸ್ಥೆ ಬಗ್ಗೆ ಕಣ್ಣು ಆಡಿಸಿದರೆ ಸಾಕು. ಹಾಗೆಯೇ ತಾಲೂಕುಗಳ 224 ಶಾಸಕರು ಕೂಡ ತಮ್ಮ ವ್ಯಾಪ್ತಿಯಲ್ಲಿ ಆಸ್ಪತ್ರೆಗಳು, ಬೆಡ್‌ಗಳ ಬಗ್ಗೆ ಆಗಾಗ ಪರಿಶೀಲನೆ ನಡೆಸಬೇಕು. ಜನಪ್ರತಿನಿಧಿಗಳು ತಮ್ಮ ಮೇಲೆ ಕಣ್ಣಿಟ್ಟಿದ್ದಾರೆ ಎಂಬುದು ಆಸ್ಪತ್ರೆಗಳಿಗೆ ಮತ್ತು ಹಾಸಿಗೆ ಹಂಚಿಕೆ ಮಾಡುವ ಕೊರೊನಾ ವಾರ್‌ ರೂಂ ಸಿಬಂದಿ ಗಮನಕ್ಕೆ ಹೋದರೆ, ಅವರು ತಪ್ಪು ಮಾಡಲಾರರು. ಇದರಿಂದ ಜನರಿಗೂ ಅನುಕೂಲವಾಗುತ್ತದೆ, ಹಾಗೆಯೇ ಜನಪ್ರತಿನಿಧಿಗಳು ನಮ್ಮೊಂದಿಗಿದ್ದಾರೆ ಎಂಬ ಭಾವನೆಯೂ ಜನರಲ್ಲಿ ಮೂಡುತ್ತದೆ.

ಇನ್ನು ಬೆಡ್‌ಬ್ಲಾಕಿಂಗ್‌ ದಂಧೆ ಅನಂತರ ರಾಜಕೀಯ ವಾಕ್ಸಮರವೂ ಜೋರಾಗಿದೆ. ಕೋವಿಡ್ ಸಂದರ್ಭದಲ್ಲಿ ಇಂಥ ರಾಜಕೀಯಗಳು ಯಾರಿಗೂ ಶೋಭೆ ತರುವಂಥದ್ದಲ್ಲ. ಹಾಗೆಯೇ ಸಮುದಾಯಗಳನ್ನು ಗುರಿಯಾಗಿಸಿ, ಇಂಥವರಿಂದಲೇ ಸಮಸ್ಯೆಯಾಗುತ್ತಿದೆ ಎಂದು ದೂರುವುದರಲ್ಲೂ ಅರ್ಥವಿಲ್ಲ. ಒಂದು ಜನಪ್ರತಿನಿಧಿಗಳು ಮಾಡುವ ಕೆಲಸದಿಂದ ಜನರಿಗೆ ಅನುಕೂಲವಾಗಬೇಕೇ ಹೊರತು, ಇಂಥ ಕಷ್ಟಕಾಲದಲ್ಲೂ ರಾಜಕೀಯ ಮಾಡುತ್ತಿದ್ದಾರಲ್ಲಪ್ಪ ಎಂದು ಅಸಹ್ಯ ಮೂಡಬಾರದು. ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿಯಿಂದ ಕೆಲಸ ಮಾಡಬೇಕಾದದ್ದು ಮುಖ್ಯ.

ಒಟ್ಟಾರೆಯಾಗಿ ಯಾರೇ ಒಳ್ಳೆಯ ಕೆಲಸ ಮಾಡಲಿ, ಅವರ ಬೆನ್ನು ತಟ್ಟುವ ಕೆಲಸವಾಗಬೇಕು. ಅದು ಆಡಳಿತ ಪಕ್ಷವಾಗಲಿ ಅಥವಾ ವಿಪಕ್ಷವಾಗಲಿ, ಯಾರೇ ಮಾಡಿದರೂ ಅವರಿಗೆ ಬೆಂಬಲ ನೀಡುವ ಕೆಲಸವನ್ನು ಮಾಡಬೇಕು ಅಷ್ಟೇ.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.