ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

Team Udayavani, May 6, 2021, 10:29 PM IST

ಕನ್ನಡಿಗರ ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಮಾರಕ ತಾರತಮ್ಯ ಬದಲಾಗಬೇಕು : ಹೆಚ್.ಡಿಕೆ

ಬೆಂಗಳೂರು : ಕರ್ನಾಟಕದಿಂದ ಎಲ್ಲವನ್ನೂ ಪಡೆದ ಕೇಂದ್ರ ಕರ್ನಾಟಕವನ್ನು ಇನ್ನೆಷ್ಟು ವಂಚಿಸಬೇಕೆಂದಿದೆ? ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಆಮ್ಲಜನಕ ಪೊರೈಕೆಯ ವಿಷಯದಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ಧೋರಣೆ ಬಗ್ಗೆ ಧ್ವನಿ ಎತ್ತಿದ್ದಾರೆ.

ಕರ್ನಾಟಕಕ್ಕೆ ನಿತ್ಯ 1200 ಟನ್‌ ಆಮ್ಲಜನಕ ಪೂರೈಸುವಂತೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದೆ. ‘ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆ ಹೆಚ್ಚಿಸಿದರೆ ಆರೋಗ್ಯ ವ್ಯವಸ್ಥೆ ಕುಸಿಯಲಿದೆ’ ಎಂದು ವಾದಿಸಿದೆ. ಕರ್ನಾಟಕದಿಂದ ಎಲ್ಲವನ್ನೂ ಪಡೆದ ಕೇಂದ್ರ ಕರ್ನಾಟಕವನ್ನು ಇನ್ನೆಷ್ಟು ವಂಚಿಸಬೇಕೆಂದಿದೆ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯಕ್ಕೆ ನಿತ್ಯ 1700 ಟನ್‌ ಆಮ್ಲಜನಕದ ಅಗತ್ಯವಿದೆ. ಆದರೂ, 1200 ಟನ್‌ ಆಮ್ಲಜನಕ ಇದ್ದರೆ ಪರಿಸ್ಥಿತಿ ಹೇಗೋ ನಿಭಾಯಿಸಬಹುದು. ಕರ್ನಾಟಕದಲ್ಲಿ ಹೆಚ್ಚು ಕಡಿಮೆ 1200 ಟನ್‌ಗೂ ಅಧಿಕ ಪ್ರಮಾಣದ ಆಮ್ಲಜನಕವೂ ಉತ್ಪಾದನೆಯಾಗುತ್ತಿದೆ. ಆದರೆ, ನಮ್ಮಿಂದ ಆಮ್ಲಜನಕ ಕಿತ್ತುಕೊಳ್ಳುತ್ತಿರುವ ಕೇಂದ್ರ ಪೂರೈಸುತ್ತಿರುವುದು 865-965 ಟನ್‌ ಮಾತ್ರ ಎಂದು ಹೇಳಿದ್ದಾರೆ.

ಇದನ್ನೂ ಓದಿ :ದಾವಣಗೆರೆ: ಸೂಕ್ತ ಸಮಯಕ್ಕೆ ಸಿಗದ ಬೆಡ್ : ಆಸ್ಪತ್ರೆ ಆವರಣದಲ್ಲೇ ಮೃತಪಟ್ಟ ವ್ಯಕ್ತಿ

ಅನುದಾನದಲ್ಲಿ ತಾರತಮ್ಯ, ಜಿಎಸ್‌ಟಿ ಬಾಕಿಯಲ್ಲಿ ತಾರತಮ್ಯ, ನೆರೆ-ಬರ ಪರಿಹಾರದಲ್ಲಿ ಮಾಡಲಾದ ತಾರತಮ್ಯವನ್ನು ಕರ್ನಾಟಕ, ಕನ್ನಡಿಗರು  ಹೇಗೋ ಸಹಿಸಿದ್ದಾರೆ. ಆದರೆ, ಉಸಿರನ್ನೇ ಕಿತ್ತುಕೊಳ್ಳುವ ಕೇಂದ್ರದ ಈ ಮಾರಕ ತಾರತಮ್ಯವನ್ನು ಸಹಿಸುವುದಾದರೂ ಹೇಗೆ. ಇದು ಕನ್ನಡಿಗರ ಜೀವ, ಜೀವನದ ಪ್ರಶ್ನೆ ಎಂಬುದನ್ನು ಕೇಂದ್ರ ಸರ್ಕಾರ ಅರಿಯುತ್ತಿಲ್ಲ ಏಕೆ? ಎಂದು ಕೇಂದ್ರದ ವಿರುದ್ಧ ಗುಡುಗಿದ್ದಾರೆ.

ಅಷ್ಟಕ್ಕೂ ನಾವು ಅಧಿಕವಾಗಿ ಏನೂ ಕೇಳುತ್ತಿಲ್ಲ. ನಮ್ಮಲ್ಲಿ ಉತ್ಪಾದನೆಯಾಗುತ್ತಿರುವ ಆಮ್ಲಜನಕವನ್ನು ನಮಗೇ ನೀಡಿ ಎಂಬುದು ನಮ್ಮ ಬೇಡಿಕೆ. ನಮ್ಮವರ ಜೀವವನ್ನೇ ಕಿತ್ತು ಗುಜರಾತ್‌ ಮತ್ತಿತರ ರಾಜ್ಯಗಳ ಜನರ ಜೀವ ಉಳಿಸಬೇಕಾದ ಅನಿವಾರ್ಯತೆ, ತ್ಯಾಗ ಮಾಡಬೇಕಾದ ಸಂದಿಗ್ಧತೆಯಲ್ಲಿ ನಮ್ಮನ್ನು ಸಿಲುಕಿಸಬಾರದು. ಕೇಂದ್ರ ನಮ್ಮ ಪಾಲನ್ನು ನಮಗೆ ನೀಡಲಿ ಎಂದು ಕೇಳಿಕೊಂಡಿದ್ದಾರೆ.

ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ಕೇಂದ್ರದ ಇಂಥ ತಾರತಮ್ಯವನ್ನು ಪ್ರಶ್ನಿಸಬೇಕು. ಇಲ್ಲಿವರೆಗೆ ಬಾಯಿಗೆ ಬೀಗ ಹಾಕಿಕೊಂಡಿರುವ ಬಿಜೆಪಿ ಸಂಸದರು ಈಗ ಜನರ ಜೀವ ಉಳಿಸುವುದಕ್ಕಾದರೂ ಬಾಯಿ ಬಿಡಲಿ. ರಾಜ್ಯದಿಂದ ಶಕ್ತಿ ಪಡೆದಿರುವ ಕೇಂದ್ರ ಅದೇ ಶಕ್ತಿಯನ್ನು ಬಳಸಿಕೊಂಡು ರಾಜ್ಯದ ಮೇಲೆ ಗದಾಪ್ರಹಾರ ನಡೆಸುತ್ತಿರುವುದನ್ನು ಜನ ಗಮನಿಸಲಿ ಎಂದಿದ್ದಾರೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.