ಮನೆ ಮನೆ ಸಮೀಕ್ಷೆಗೆ ನಿರ್ಧಾರ: ಮಾಲಪಾಟಿ


Team Udayavani, May 6, 2021, 10:21 PM IST

6-14

ಬಳ್ಳಾರಿ: ನಗರದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದ್ದು, ತೀವ್ರ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಆರಂಭದಲ್ಲಿಯೇ ಸೋಂಕಿನ ಲಕ್ಷಣಗಳನ್ನು ಹೊಂದಿರುವವರನ್ನು ಪತ್ತೆಹಚ್ಚುವ, ಇಎಲ್‌ಐ ಮತ್ತು ತೀವ್ರ ಉಸಿರಾಟ ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಪತ್ತೆಹಚ್ಚಿ ತಪಾಸಣೆ ನಡೆಸಿ ಚಿಕಿತ್ಸೆ ನೀಡುವ ಹಾಗೂ ಕೊರೊನಾ ಪ್ರಸರಣ ಸರಪಳಿ ತುಂಡರಿಸುವ ನಿಟ್ಟಿನಲ್ಲಿ ಮನೆ ಮನೆ ಸಮೀಕ್ಷೆ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಇದಕ್ಕಾಗಿ ನಗರದ 39 ವಾರ್ಡ್‌ಗಳಿಗೆ ತಲಾ ಓರ್ವ ನೋಡಲ್‌ ಅಧಿ ಕಾರಿಗಳ ನೇತೃತ್ವದಲ್ಲಿ ತಂಡಗಳನ್ನು ರಚನೆ ಮಾಡಲಾಗಿದೆ. ಪ್ರತಿ ತಂಡದಲ್ಲಿ ನೋಡಲ್‌ ಅಧಿಕಾರಿ, ವೈದ್ಯರು, ನರ್ಸ್‌ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಈ ತಂಡದಲ್ಲಿರಲಿದ್ದಾರೆ. ಇವರು 39 ವಾರ್ಡ್‌ಗಳಲ್ಲಿರುವ ಪ್ರತಿ ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಲಿದ್ದಾರೆ. ಈಗಾಗಲೇ ಈ ಕಾರ್ಯ ಎರಡು ದಿನಗಳಿಂದ ನಗರದಲ್ಲಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿ ಕಾರಿ ಪವನಕುಮಾರ ಮಾಲಪಾಟಿ ಅವರು ತಿಳಿಸಿದ್ದಾರೆ.

ಕೊರೊನಾ ಸೋಂಕಿನ ಲಕ್ಷಣಗಳಿದ್ದರೂ ತಪಾಸಣೆ ಮಾಡಿಸದೇ ನಿರ್ಲಕ್ಷ  ತೋರುತ್ತಿರುವುದು ಮತ್ತು ಸೋಂಕು ತೀವ್ರತರದಲ್ಲಿ ಉಲ್ಬಣಿಸಿದಾಗ ಆಸ್ಪತ್ರೆಗೆ ಬರುತ್ತಿರುವುದರಿಂದ ಮರಣಗಳು ಸಂಭವಿಸುತ್ತಿರುವುದು ಸೇರಿದಂತೆ ವಿವಿಧ ಸಮಸ್ಯೆಗಳು ಉಂಟಾಗುತ್ತಿವೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕಡಿವಾಣ ಹಾಕುವುದಕ್ಕೆ ಮನೆ-ಮನೆ ಸಮೀಕ್ಷೆಯೇ ಮದ್ದು ಎಂದು ನಿರ್ಧರಿಸಿರುವ ಜಿಲ್ಲಾಡಳಿತ ಸಮೀಕ್ಷೆ ಆರಂಭಿಸಿದೆ. ಪ್ರತಿ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿರುವ ಈ ತಂಡಗಳು ಮನೆಯಲ್ಲಿರುವ ಪ್ರತಿಯೊಬ್ಬರನ್ನು ತಪಾಸಣೆ ಮಾಡಲಿವೆ. ಅವರಲ್ಲಿ ಯಾರಾದರೂ ಸೋಂಕಿತರೆಂದು ಕಂಡುಬಂದಲ್ಲಿ ಅವರ ರೋಗಲಕ್ಷಣಗಳ ಆಧಾರದ ಮೇರೆಗೆ ಹೋಂ ಐಸೋಲೇಷನ್‌ ಅಥವಾ ಆಸ್ಪತ್ರೆಗೆ ದಾಖಲಿಸಬೇಕೆ ಎಂಬುದನ್ನು ಶಿಫಾರಸ್ಸು ಮಾಡಲಿವೆ. ಹೋಂ ಐಸೋಲೇಷನ್‌ ಇದ್ದಲ್ಲಿ ಪ್ರತಿನಿತ್ಯ ನಿಗಾವಹಿಸಲು ಆರ್‌ ಆರ್‌ಟಿ ತಂಡಗಳಿಗೆ ತಿಳಿಸುವುದರ ಜತೆಗೆ ಸೋಂಕಿತರಿಗೆ ಔಷಧಿ ಕಿಟ್‌ಗಳನ್ನು ವಿತರಿಸಲಾಗುತ್ತದೆ.

ಇಎಲ್‌ಐ ಮತ್ತು ತೀವ್ರ ಉಸಿರಾಟ ಹಾಗೂ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಪತ್ತೆಹಚ್ಚಿ ಅವರಿಗೂ ಕೊರೊನಾ ಪರೀಕ್ಷೆ ನಡೆಸಲಾಗುತ್ತದೆ. ಅವರಲ್ಲಿ ಪಾಸಿಟಿವ್‌ ಕಂಡುಬಂದಲ್ಲಿ ರೋಗಲಕ್ಷಣಗಳ ಆಧಾರದ ಮೇಲೆ ಹೋಂ ಐಸೋಲೇಷನ್‌ ಅಥವಾ ಆಸ್ಪತ್ರೆಗೆ ದಾಖಲಿಸಬೇಕೆ ಎಂಬುದನ್ನು ಶಿಫಾರಸ್ಸು ಮಾಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ತಪಾಸಣೆ ನಡೆಸುವುದರ ಜೊತೆಗೆ ಆ ಮನೆಯಲ್ಲಿ ಈಗಾಗಲೇ ಕೋವಿಡ್‌ ಲಸಿಕೆ ಪಡೆದಿದ್ದರೇ ಅವರ ವಿವರವನ್ನು ಪಡೆದುಕೊಳ್ಳಲಿವೆ. ಎರಡು ಬಾರಿ ಲಸಿಕೆ ಪಡೆದಿದ್ದರೇ ಸಮಸ್ಯೆ ಇಲ್ಲ. ಒಂದು ಬಾರಿ ಲಸಿಕೆ ಪಡೆದು ಎರಡನೇ ಡೋಸ್‌ ಗಾಗಿ ಕಾಯುತ್ತಿರುವವರನ್ನು ಆದ್ಯತೆ ಮೇರೆಗೆ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಲು ಕ್ರಮವಹಿಸಲಾಗುತ್ತದೆ ಎಂದು ವಿವರಿಸಿದ ಜಿಲ್ಲಾ ಧಿಕಾರಿ ಮಾಲಪಾಟಿ ಅವರು ಸದರಿ ಮನೆಗಳಲ್ಲಿ 18ರಿಂದ 45 ವರ್ಷದೊಳಗಿನವರಿದ್ದಲ್ಲಿ ಕೋವಿಡ್‌ ಲಸಿಕೆ ಪಡೆದುಕೊಳ್ಳುವುದಕ್ಕೆ ಯಾವ ರೀತಿ ಆನ್‌ ಲೈನ್‌ನಲ್ಲಿ ತಮ್ಮ ಮಾಹಿತಿ ಭರ್ತಿ ಮಾಡಬೇಕು ಎಂಬುದನ್ನು ತಿಳಿಸಿಕೊಡಲಾಗುತ್ತದೆ.

ಅಂಥವರ ಮಾಹಿತಿಯನ್ನು ಸಂಗ್ರಹಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಪವನಕುಮಾರ ಮಾಲಪಾಟಿ ಅವರು ತಿಳಿಸಿದ್ದಾರೆ. ನಗರದ ಪ್ರತಿಯೊಬ್ಬ ಸಾರ್ವಜನಿಕರು ಈ ಮನೆ-ಮನೆ ಸಮೀûಾ ಕಾರ್ಯಕ್ಕೆ ಸಹಕರಿಸುವುದರ ಮೂಲಕ ಕೊರೊನಾ ಪ್ರಸರಣ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.