ವೆನ್ಲಾಕ್‌ನಲ್ಲಿ 168 ಹಾಸಿಗೆಗಳ ಸರ್ಜಿಕಲ್‌ ಕಟ್ಟಡ

Team Udayavani, May 8, 2021, 6:33 AM IST

ವೆನ್ಲಾಕ್‌ನಲ್ಲಿ 168 ಹಾಸಿಗೆಗಳ ಸರ್ಜಿಕಲ್‌ ಕಟ್ಟಡ

ಮಂಗಳೂರು: ಪ್ರತೀ ನಿಮಿಷಕ್ಕೆ 930 ಲೀಟರ್‌ ಉತ್ಪಾದನಾ ಸಾಮರ್ಥ್ಯದ ಆಕ್ಸಿಜನ್‌ ಘಟಕ ಎಂಆರ್‌ಪಿಎಲ್‌ ವತಿಯಿಂದ ವೆನ್ಲಾಕ್‌ ಆಸ್ಪತ್ರೆಯಲ್ಲಿ ನಿರ್ಮಾಣವಾಗುವ ಪ್ರಸ್ತಾವನೆಯ ಬೆನ್ನಲ್ಲೇ ಸುಸಜ್ಜಿತ ಪ್ರತ್ಯೇಕ ಸರ್ಜಿಕಲ್‌ ಕಟ್ಟಡ ನಿರ್ಮಾಣ ಕಾಮಗಾರಿ ಕೂಡ ವೇಗ ಪಡೆದುಕೊಂಡಿದ್ದು, ವರ್ಷದೊಳಗೆ ಪೂರ್ಣವಾಗುವ ನಿರೀಕ್ಷೆಯಿದೆ.

ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಾಣವಾಗುತ್ತಿರುವ ಸರ್ಜಿಕಲ್‌ ಕಟ್ಟಡದಲ್ಲಿ 12 ಶಸ್ತ್ರಚಿಕಿತ್ಸಾ ಕೊಠಡಿ ಸೇರಿದಂತೆ ಒಟ್ಟು 168 ಹಾಸಿಗೆಗಳಿರಲಿವೆ. ಸದ್ಯ ಶೇ. 10ರಷ್ಟು ಕಾಮಗಾರಿ ನಡೆದಿದೆ.ಒಟ್ಟು 39.19 ಕೋ.ರೂ. ವೆಚ್ಚ ಅಂದಾಜಿಸಲಾಗಿದೆ.

ಸುಸಜ್ಜಿತ ಕಟ್ಟಡ :

ಕಟ್ಟಡವು ನೆಲ ಅಂತಸ್ತು, ಜಿ+6 ಮಹಡಿಗಳನ್ನು ಹೊಂದಿರಲಿದೆ. ಕಟ್ಟಡದ ವಿಸ್ತೀರ್ಣ 13,252 ಚ.ಮೀ. ಇರಲಿದೆ. ಮೆಡಿಸಿನ್‌ ಹಾಗೂ ಸರ್ಜರಿ ವಿಭಾಗ ಪ್ರತ್ಯೇಕವಿರಲಿದ್ದು, ಇದರ ಮಧ್ಯೆ ಸೇತುವೆ ಜೋಡಣೆಯಾಗಲಿದೆ. ರೋಗಿಗಳ ಅನುಕೂಲಕ್ಕಾಗಿ ರ್‍ಯಾಂಪ್‌ ನಿರ್ಮಾಣವೂ ಆಗಲಿದೆ. ಅಗ್ನಿಶಾಮಕ ಸಹಿತ ಎಲ್ಲ ಸುರಕ್ಷಾ ಪರಿಕರಗಳನ್ನು ಅಳವಡಿಸಲಾಗುತ್ತದೆ. ಸಿಟಿ ಸ್ಕ್ಯಾನ್‌, ಎಕ್ಸ್‌ರೇ,ರೇಡಿಯೋಥೆರಪಿ ಕೊಠಡಿ ಸೇರಿದಂತೆ ವಿಕಿರಣ ಶಾಸ್ತ್ರ, ಲಾಂಡ್ರಿ, ಔಷಧಾಲಯ, ಅಲ್ಟ್ರಾಸೌಂಡ್‌, ಸೆಂಟ್ರಲ್‌ ಸ್ಟ್ರೈಲ್‌ ಸಪ್ಲೈ ಡಿಪಾರ್ಟ್‌ ಮೆಂಟ್‌ , ಸ್ಟೆರೈಲ್‌ ಸ್ಟೋರ್‌, ಪ್ರೀ ಆಪರೇಟಿವ್‌ ಹಾಗೂ ಪೋಸ್ಟ್‌ ಆಪರೇಟಿವ್‌ ವ್ಯವಸ್ಥೆ ಇರಲಿದೆ.

170 ವರ್ಷಗಳ ಇತಿಹಾಸವಿರುವ ವೆನ್ಲಾಕ್‌ನಲ್ಲಿ ವರ್ಷಕ್ಕೆ 2.25 ಲಕ್ಷ ಮಂದಿ ಹೊರರೋಗಿ ಗಳಾಗಿಯೂ 25,000ಕ್ಕೂ ಅಧಿಕ ಮಂದಿ ಒಳ ರೋಗಿಗಳಾಗಿಯೂ ಚಿಕಿತ್ಸೆ ಪಡೆಯುತ್ತಾರೆ. ಆಸ್ಪತ್ರೆಯು 12.5 ಎಕ್ರೆ ಪ್ರದೇಶದಲ್ಲಿ ವ್ಯಾಪಿಸಿದೆ.ವೆನ್ಲಾಕ್‌ ಜಿಲ್ಲಾ ಆಸ್ಪತ್ರೆಯಾಗಿದ್ದರೂ ಹಲವಾರು ವರ್ಷಗಳಿಂದ ರಾಜ್ಯದ 8 ಜಿಲ್ಲೆಗಳ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದೆ. ಸದ್ಯ ಆಕ್ಸಿಜನ್‌ ಸಹಿತ 275 ಬೆಡ್‌ಗಳನ್ನು ಕೋವಿಡ್ ಕಾರಣದಿಂದ ಮೀಸಲಿಡಲಾಗಿದೆ. ಕೊರೊನಾ ಹೊರತಾದ 310 ರೋಗಿಗಳು ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಮಾರ್ಟ್‌ಸಿಟಿ ಯೋಜನೆಯಡಿ ವೆನ್ಲಾಕ್‌ನಲ್ಲಿ ಸುಸಜ್ಜಿತ ಸರ್ಜಿಕಲ್‌ ಬ್ಲಾಕ್‌ ನಿರ್ಮಾಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಟ್ಟಡವನ್ನು ಸುಸಜ್ಜಿತವಾಗಿ ನಿರ್ಮಿಸಲಾ ಗುವುದು. ಹಂತ ಹಂತವಾಗಿ ಕಾಮಗಾರಿ ಪೂರ್ಣಗೊಳ್ಳಲಿದೆ. ಮಂಗಳೂರಿಗೆ ಇದೊಂದು ದೊಡ್ಡ ಕೊಡುಗೆಯಾಗಲಿದೆ. ಪ್ರಶಾಂತ್‌ ಕುಮಾರ್‌ ಮಿಶ್ರಾ, ವ್ಯವಸ್ಥಾಪಕ ನಿರ್ದೇಶಕರು (ಪ್ರಭಾರ),  ಸ್ಮಾರ್ಟ್‌ಸಿಟಿ-ಮಂಗಳೂರು

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.