ಹಬ್ಬದಾಚರಣೆಯಲ್ಲಿ ಗೊಂದಲ ಬೇಡ

Team Udayavani, May 13, 2021, 11:16 PM IST

13-22

ಶಿವಮೊಗ್ಗ: ಬರಲಿರುವ ರಂಜಾನ್‌ ಹಾಗೂ ಬಸವ ಜಯಂತಿ ಆಚರಣೆಗೆ ಯಾವುದೇ ಗೊಂದಲ ಬೇಡ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದ್ದು, ದಾರಿ ತಪ್ಪಿಸುವ ಹೇಳಿಕೆಗಳಿಗೆ ಯಾರು ಕೂಡ ಕಿವಿಗೊಡಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಂಜಾನ್‌ ಮತ್ತು ಬಸವ ಜಯಂತಿ ಆಚರಣೆಗೆ ಯಾವುದೇ ಕಾರಣಕ್ಕೂ ತೊಂದರೆ ಆಗುವುದಿಲ್ಲ. ಕಠಿಣ ಕರ್ಫ್ಯೂ ಜಾರಿಯಲ್ಲಿದ್ದರೂ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ದಿನಸಿ, ತರಕಾರಿ, ಹಣ್ಣು, ಮೀನು, ಮಾಂಸ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಸಾರ್ವಜನಿಕರು ನಿಗದಿಪಡಿಸಿದ ಸಮಯದಲ್ಲಿ ಖರೀದಿ ಮಾಡಬಹುದಾಗಿದೆ ಎಂದರು.

ಕೊರೊನಾ ಸೋಂಕು ತಡೆಗಟ್ಟುವ ಉದ್ದೇಶದಿಂದ ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುರುವಾರದಿಂದ ನಾಲ್ಕು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್‌ ಮಾಡಲು ತೀರ್ಮಾನಿಸಲಾಗಿದೆ. ಕೆಲವು ಅಗತ್ಯ ಸೇವೆಗಳನ್ನು ಹೊರತುಪಡಿಸಿ ನಾಲ್ಕು ದಿನಗಳ ಕಾಲ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ. ಇದೇ ಸಂದರ್ಭ ದಲ್ಲಿ ರಂಜಾನ್‌ ಹಾಗೂ ಬಸವ ಜಯಂತಿ ಹಬ್ಬ ಎದುರಾಗಿದೆ. ಆದರೆ ಹಬ್ಬ ಆಚರಣೆಗೆ ಯಾವುದೇ ತೊಂದರೆ ಇಲ್ಲ. ದಾರಿತಪ್ಪಿಸುವ ಹೇಳಿಕೆಗಳನ್ನು ಸಾರ್ವಜನಿಕರು ನಂಬ ಬಾರದು ಎಂದರು.

ಬಿಜೆಪಿ ಸರ್ಕಾರ ಎಲ್ಲ ಜಾತಿ ಧರ್ಮದವರನ್ನು ಒಟ್ಟಿಗೆ ಕರೆದುಕೊಂಡು ಹೋಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಕೆಲವರು ಹಬ್ಬದ ಸಂದರ್ಭದಲ್ಲಿ ಸಂಪೂರ್ಣ ಲಾಕ್‌ಡೌನ್‌ ಜಾರಿ ಮಾಡಲಾಗಿದೆ ಎಂದು ಕೋಮು ವಿಚಾರ ಎಳೆದು ತರುತ್ತಿದ್ದು ಇದು ಸರಿಯಲ್ಲ ಎಂದರು. ಜಿಲ್ಲೆಯಲ್ಲಿ ಗುರುವಾರ, ಶುಕ್ರವಾರ, ಶನಿವಾರ ಹಾಗೂ ಭಾನುವಾರ ಸಂಪೂರ್ಣ ಲಾಕ್‌ಡೌನ್‌ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದೆ. ಇದಕ್ಕೆ ಕೈಗಾರಿಕೋದ್ಯಮಿಗಳು, ಗಾಂಧಿ ಬಜಾರ್‌ ವರ್ತಕರ ಸಂಘ, ಸೇರಿದಂತೆ ಹಲವರು ಬೆಂಬಲ ನೀಡಿದ್ದಾರೆ.

ಆದರೆ ರಕ್ಷಣೆ, ರೈಲ್ವೆ, ಮೆಡಿಕಲ್‌, ಆಹಾರ ಸಂಸ್ಕರಣಾ ಘಟಕ ಇವುಗಳಿಗೆಲ್ಲಾ ಅದರಿಂದ ವಿನಾಯಿತಿ ನೀಡಲಾಗುವುದು. ಸರ್ಕಾರದ ಮಾರ್ಗಸೂಚಿಯನ್ನು ಅನುಸರಿಸಿ ಈ ನಾಲ್ಕು ಘಟಕಗಳು ಕಾರ್ಯ ನಿರ್ವಹಿಸಬಹುದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌, ಸೂಡಾ ಅಧ್ಯಕ್ಷ ಎಸ್‌.ಎಸ್‌. ಜ್ಯೋತಿಪ್ರಕಾಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.