ಏನಿದು ತೌಕ್ತೆ ಚಂಡಮಾರುತ

Team Udayavani, May 15, 2021, 5:10 AM IST

ಏನಿದು ತೌಕ್ತೆ ಚಂಡಮಾರುತ

ತೌಕ್ತೆ ( Tauktae) ಇದೊಂದು ಈಗ ತಾನೇ ಮಧ್ಯ ಅರಬಿ ಸಮುದ್ರದಲ್ಲಿ ಸೃಷ್ಟಿಯಾ ಗುತ್ತಿರುವ ಚಂಡ ಮಾರುತದ ಹೆಸರು. ಶನಿವಾರ ಮತ್ತು ರವಿವಾರ ಭಾರತದ ಪಶ್ಚಿಮ ಕರಾವಳಿಗೆ ರಭಸದ ಗಾಳಿಯೊಂದಿಗೆ ಮಳೆ ತರುವ ಚಂಡ ಮಾರುತವಿದು. ಈ ಚಂಡ ಮಾರುತದ ಹೆಸರು ತೌಕ್ತೆ.

ಅರೆ, ಇದೇನಿದು ವಿಚಿತ್ರ ಹೆಸರು,ಚಂಡ ಮಾರುತಕ್ಕೆ. ಮ್ಯಾನ್ಮಾರ್‌ ಚಂಡ ಮಾರುತಕ್ಕೆ ಈ ಹೆಸರನ್ನು ಸೂಚಿಸಿದೆ. ತೌಕ್ತೆ ಎಂದರೆ ಒಂದು ಜಾತಿಯ ಹಲ್ಲಿ.

ಅರಬ್ಬಿ ಸಮುದ್ರ ಹಾಗೂ ಬಂಗಾಲ ಕೊಲ್ಲಿಯಲ್ಲಿ ಹುಟ್ಟುವ ಚಂಡಮಾರುತ ಗಳಿಗೆ ಇವುಗಳ ಸುತ್ತ ಇರುವ 13 ರಾಷ್ಟ್ರಗಳು ನಾಮ ಕರಣ ಮಾಡುತ್ತವೆ.

ಈ ಹೆಸರುಗಳನ್ನು ಮೊದಲೇ ಸೂಚಿಸಲಾಗುತ್ತವೆ. ಕಳೆದ ವರ್ಷ ಪ್ರತೀ ರಾಷ್ಟ್ರ 13 ಹೆಸರುಗಳ ಪಟ್ಟಿ ಕೊಟ್ಟ ಆಧಾರ ದಲ್ಲಿ 169 ಹೊಸ ಹೆಸರುಗಳ ಪಟ್ಟಿಯನ್ನು ಇಂಡಿ ಯನ್‌ ಮೆಟ್ರೋಲಾಜಿಕಲ್‌ ವಿಭಾಗ ಬಿಡುಗಡೆ ಮಾಡಿದೆ. ಈ ಹೊಸ ಪಟ್ಟಿಯಲ್ಲಿ ಕ್ರಮವಾಗಿ ಬಾಂಗ್ಲಾದೇಶ, ಭಾರತ, ಇರಾನ್‌, ಮಾಲ್ಡೀವ್ಸ್‌, ಮ್ಯಾನ್ಮಾರ್‌, ಒಮಾನ್‌, ಪಾಕಿಸ್ಥಾನ, ಕತಾರ್‌, ಸೌದಿ, ಶ್ರೀಲಂಕಾ, ಥಾಯ್ಲೆಂಡ್‌, ಯುಎಇ ಮತ್ತು ಯೆಮೆನ್‌ ಹೀಗೆ 13 ರಾಷ್ಟ್ರಗಳ ಹೆಸರು ಕ್ರಮವಾಗಿ ಬರುತ್ತವೆ. ತೌಕ್ತೆ ಮ್ಯಾನ್ಮಾರ್‌ ದೇಶ ಕೊಟ್ಟ ಹೆಸರು.

ಮುಂದೆ ಬರುವ ಚಂಡ ಮಾರುತದ ಹೆಸರು ಯಾಸ್‌, ಅದು ಒಮಾನ್‌ ದೇಶದವರು ಸೂಚಿಸಿರುವುದು. ಈ ತೌಕ್ತೆ ಚಂಡಮಾರುತ ಈಗ ತಾನೆ ಮಧ್ಯ ಅರಬಿ ಸಮುದ್ರದಲ್ಲಿ, ಭಾರತದ ನೈಋತ್ಯದಲ್ಲಿ ಹುಟ್ಟಿ ಪೂರ್ವದ ಕಡೆಗೆ ಅಂದರೆ ನಮ್ಮ ಪಶ್ಚಿಮದ ಕರಾವಳಿ ಕಡೆಗೆ ಬರುತ್ತಿದೆ. ಹವಾಮಾನ ವಿಶ್ಲೇಷಕರ ಪ್ರಕಾರ ಮೇ 15 ಹಾಗೂ 16ರಂದು ಪಶ್ಚಿಮದಿಂದ ಉತ್ತರಕ್ಕೆ ಹೊರಟು ಗುಜರಾತ್‌ನ ದಕ್ಷಿಣ ತೀರಕ್ಕೆ 17ರಂದು ತಲುಪಲಿದೆ.

ಚಂಡಮಾರುತ ಎಂದರೆ ಸಮುದ್ರದಲ್ಲಿ ಒಂದು ಕಡೆ ನಿಮ್ನ ಒತ್ತಡ ಸೃಷ್ಟಿಯಾಗಿ ಸುತ್ತಲಿಂದಲೂ ಅಲ್ಲಿಗೆ ಗಾಳಿ ನುಗ್ಗುವುದು. ಅವು ನೇರ ನುಗ್ಗದೆ ಸುರುಳಿ ಆಕಾರದಲ್ಲಿ ಸುತ್ತುತ್ತ ಮೋಡಗಳನ್ನು ಎತ್ತಿ ಕೊಂಡು ಕೆಲವೇ ಗಂಟೆಗಳಲ್ಲಿ ಅತೀ ಪ್ರಬಲ ಶಕ್ತಿ ಪಡೆ ಯುತ್ತವೆ. ಧಾರಾಕಾರ ಮಳೆ, ಬಿರುಗಾಳಿ ಯೊಂದಿಗೆ ಸಮುದ್ರದ ತೀರಕ್ಕೆ ಅಪ್ಪಳಿಸಿ ಬೀಸಿ ಕೆಲವೇ ಗಂಟೆ ಗಳಲ್ಲಿ ಅನೇಕ ಅವಾಂತರಗಳನ್ನು ಉಂಟು ಮಾಡುತ್ತದೆ. ಭಾರತದ ಪೂರ್ವ ಕರಾವಳಿಯಲ್ಲಿ, ಬಂಗಾಲ ಕೊಲ್ಲಿಯಲ್ಲಿ ಹುಟ್ಟುವ ಚಂಡಮಾರುತ ಪ್ರತೀ ವರ್ಷವಿರುತ್ತದೆ. ಅದು ಅಪರೂಪವೇನಲ್ಲ. ಅದರ ಪಾರ್ಶ್ವ ಪರಿಣಾಮಗಳನ್ನು ಮಾತ್ರವೇ ನಾವು ಇದುವರೆಗೆ ಎದುರಿಸಿರುವುದು. ಆದರೆ ಪಶ್ಚಿಮ ಕರಾವಳಿಯಲ್ಲಿರುವ ನಮಗೆ ಚಂಡಮಾರುತ ಅತೀ ಅಪರೂಪ. ಬಹುಶಃ ಸಮುದ್ರ ತೀರಕ್ಕೆ ಗೋಡೆಯಂತಿರುವ ಸಸ್ಯ ಶ್ಯಾಮಲೆ ಯಾಗಿದ್ದ ಪಶ್ಚಿಮಘಟ್ಟವೇ ಇದಕ್ಕೆ ಕಾರಣವಿದ್ದಿರಬೇಕು.
ಈಗ ಕಾಡು ಬೋಳಾಗಿರುವುದ ರಿಂದ ಭೂಮಿಯ ಉಷ್ಣತೆ ಸುಮಾರು 1.5 ಡಿಗ್ರಿ ಏರಿರುವುದ ರಿಂದ ಅರಬಿ ಸಮುದ್ರದಲ್ಲೂ ಚಂಡಮಾರುತ ಭಾರತದ ಪೂರ್ವ ಕರಾವಳಿಯಲ್ಲಿ ಪ್ರತೀ ವರ್ಷ ಬರುವಂತೆ ಮಾಮೂಲಾಗಿ ಬರುತ್ತಿದೆ. ಪ್ರಕೃತಿ ಮುನಿ ದರೆ ಹೀಗೆಯೇ. ಅನುಭವಿಸಬೇಕಷ್ಟೆ.

* ಡಾ| ಎ.ಪಿ. ಭಟ್‌, ನಿವೃತ್ತ ಪ್ರಾಂಶುಪಾಲರು, ಪೂರ್ಣಪ್ರಜ್ಞ ಕಾಲೇಜು ಉಡುಪಿ.

ಟಾಪ್ ನ್ಯೂಸ್

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.