ಮನೆಯಲ್ಲೇ ರಂಜಾನ್‌ ಹಬ್ಬ ಆಚರಣೆ

ಕುಟುಂಬ ಸಮೇತರಾಗಿ ವಿಶೇಷ ಪ್ರಾರ್ಥನೆ! ­ಕೊರೊನಾ ಆಪತ್ತು ನಿವಾರಿಸಲು ಅಲ್ಲಾಹನಲ್ಲಿ ಕೋರಿಕೆ

Team Udayavani, May 15, 2021, 8:59 PM IST

14mdr1

ಗದಗ: ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ಕರ್ಫ್ಯೂ ಜಾರಿಗೊಳಿಸಿದ್ದರಿಂದ ಅವಳಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಶುಕ್ರವಾರ ಮುಸ್ಲಿಂ ಬಾಂಧವರು ಮನೆಯಲ್ಲೇ ಸರಳ ಮತ್ತು ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಿಸಿದರು.

ರಂಜಾನ್‌ ಮಾಸಾದ್ಯಂತ ಉಪವಾಸ ವ್ರತ ಕೈಗೊಂಡಿದ್ದ ಮುಸ್ಲಿಂ ಬಾಂಧವರು ಶುಕ್ರವಾರ ಮನೆಯಲ್ಲೇ ಕುಟುಂಬ ಸಮೇತರಾಗಿ ಶ್ರದ್ಧಾ-ಭಕ್ತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕಳೆದೊಂದು ವರ್ಷದಿಂದ ದೇಶಾದ್ಯಂತ ಕೊರೊನಾ ಪಿಡುಗು ಆವರಿಸಿದ್ದು, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ಆಪತ್ತು ನಿವಾರಿಸಿ, ಸಕಲ ಜೀವ ರಾಶಿಗಳಿಗೂ ಲೇಸು ಮಾಡಲಿ ಎಂದು ಅಲ್ಲಾಹನಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ನೆರೆಹೊರೆಯರು ಹಾಗೂ ಸ್ನೇಹಿತರನ್ನು ಭೇಟಿ ಮಾಡಿ ಹಬ್ಬದ ಶುಭ ಕೋರಿದರು.

ಸಾಮಾನ್ಯವಾಗಿ ಹಬ್ಬದ ಶುಭ ಕೋರಲು ಪರಸ್ಪರ ಆಲಂಗಿಸಿಕೊಳ್ಳುವ ಬದಲಾಗಿ, ದೂರದಿಂದಲೇ “ಅಸಲಾಂ ವಾಲೇಖುಂ- ವಾಲೇಖುಂ ಸಲಾಂ, ಈದ್‌ ಮುಬಾರಕ್‌’ ಎನ್ನುವ ಮೂಲಕ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡಿದ್ದು ವಿಶೇಷವಾಗಿತ್ತು. ಮನೆ ಮಂದಿಯಲ್ಲಿ ಒಟ್ಟುಗೆ ಕುಳಿತು, ಹಬ್ಬಕ್ಕೆ ತಯಾರಿಸಿದ ಸುರುಕುಂಬ, ಬಿರಿಯಾನಿ ಹಾಗೂ ಮಾಂಸದೂಟ ಸವಿದರು.

ಹಬ್ಬದ ನಿಮಿತ್ತ ಮುಸ್ಲಿಂ ಸಮಾಜದ ಕೆಲ ನಾಯಕರು ಹಬ್ಬದ ಖರ್ಚು- ವೆಚ್ಚಗಳಿಗಾಗಿ ಕೂಡಿಟ್ಟಿದ್ದ ಹಣದಲ್ಲಿ ಬಡವರಿಗೆ ಆಹಾರ ಸಾಮಗ್ರಿ ಹಾಗೂ ವೈದ್ಯಕೀಯ ಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡಿ, ಮಾನವೀಯತೆ ಸಾರಿದರು. ರಂಜಾನ್‌ ಹಬ್ಬದ ನಿಮಿತ್ತ ಪ್ರತೀ ವರ್ಷ ನಗರದ ವಿವಿಧ ಈದ್ಗಾ ಮೈದಾನಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಆದರೆ, ಕಳೆದ ಬಾರಿಯಂತೆ ಈ ಬಾರಿಯೂ ಲಾಕ್‌ಡೌನ್‌ ಜಾರಿಗಿದ್ದರಿಂದ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಇಲ್ಲದಂತಾಯಿತು.

ಈದ್ಗಾ ಮೈದಾನಗಳಲ್ಲಿ ವಿಶೇಷ ಪ್ರಾರ್ಥನೆ ನಿರ್ಬಂಧಿ ಸಿದ್ದರಿಂದ ಇಲ್ಲಿನ ಡಂಬಳ ನಾಕಾ, ಮುಳಗುಂದ ನಾಕಾ ಸಮೀಪದ ಶಾಹಿ ಈದ್ಗಾ ಮೈದಾನ, ಬೆಟಗೇರಿಯ ರೈಲ್ವೆ ನಿಲ್ದಾಣ ಸಮೀಪದ ಈದ್ಗಾ ಮೈದಾನಗಳಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ರಂಜಾನ್‌ ಹಬ್ಬದ ವಿಶೇಷವಾಗಿ ತರಹೇವಾರಿ ಮಾಂಸ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಹೀಗಾಗಿ, ಇಲ್ಲಿನ ಜವಳಿ ಗಲ್ಲಿ, ಮಾಬುಸೂಬಾನ್‌ ಕಟ್ಟಿ, ಬೆಟಗೇರಿ ಭಾಗದ ಮಾಂಸ ಮಾರಾಟ ಅಂಗಡಿಗಳಲ್ಲಿ ಮಾಂಸ ಮಾರಾಟ ಜೋರಾಗಿತ್ತು.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.