ಬ್ಲಾಕ್ ಫಂಗಸ್ ನ್ನು ಅಧಿಕೃತ ರೋಗಗಳ ಪಟ್ಟಿಗೆ ಸೇರಿಸಿ ಸೂಕ್ತ ಚಿಕಿತ್ಸೆ ನೀಡಿ: ಸಿದ್ದರಾಮಯ್ಯ


Team Udayavani, May 17, 2021, 11:37 AM IST

ಬ್ಲಾಕ್ ಫಂಗಸ್ ನ್ನು ಅಧಿಕೃತ ರೋಗಗಳ ಪಟ್ಟಿಗೆ ಸೇರಿಸಿ ಸೂಕ್ತ ಚಿಕಿತ್ಸೆ ನೀಡಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಬ್ಲಾಕ್ ಫಂಗಸ್ ಕಾಯಿಲೆಯನ್ನು ಅಧಿಕೃತ ರೋಗಗಳ ಪಟ್ಟಿಯಲಿ ಸೇರಿಸಿ ಸೂಕ್ತ ಅಧಿಸೂಚನೆ ಹೊರಡಿಸಿ ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬ್ಲಾಕ್ ಫಂಗಸ್, ಕಪ್ಪು ಶಿಲೀಂದ್ರದ ಸಮಸ್ಯೆ ಅಥವಾ ವೈದ್ಯಕೀಯ ಪರಿಭಾಷೆಯಲ್ಲಿ ಮ್ಯೂಕರ್ ಮೈಕೋಸಿಸ್ ಎಂದು ಕರೆಯಲಾಗುವ ಈ ಕಾಯಿಲೆಯು ಕೋವಿಡ್ ರೋಗಕ್ಕೆ ತುತ್ತಾಗಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿರುವವರಲ್ಲಿ ಮಾರಣಾಂತಿಕವಾಗಿ ಪರಿಣಮಿಸುತ್ತಿದೆ. ಕೋವಿಡ್ ನಿಂದಾಗಿ ಸಾವು ಬದುಕಿನ ನಡುವೆ ಹೋರಾಡಿ ಬದುಕಿ ಬಂದವರನ್ನು ಗುರಿ ಮಾಡಿಕೊಂಡು ದಾಳಿ ಮಾಡುತ್ತಿರುವ ಈ ಕಾಯಿಲೆಯನ್ನು ಬಡವರಿರಲಿ, ಮಧ್ಯಮ ವರ್ಗದವರಿಗೂ ಕೂಡ ಸೂಕ್ತ ಚಿಕಿತ್ಸೆ ಪಡೆಯಲಾಗದಷ್ಟು ದುಬಾರಿಯಾಗಿದೆ. ಈ ರೋಗ ಬಂದವರಿಗೆ ದಿನಕ್ಕೆ ಮೂರರಂತೆ 30 ದಿನಗಳವರೆಗೂ ಆಂಫೊಟೆರೆಸಿನ್ ಎಂಬ ಇಂಜೆಕ್ಷನ್‍ಗಳನ್ನು ನೀಡಬೇಕಾಗುತ್ತದೆ ಎಂದು ವೈದ್ಯರು ಹೇಳುತ್ತಿದ್ದಾರೆ. ಮಾರುಕಟ್ಟೆಯಲಿ ಈ ಔಷಧಗಳು ಸಿಗುತ್ತಿಲ್ಲ. ಒಂದೊಂದು ಇಂಜೆಕ್ಷನ್ನಿನ ಬೆಲೆ ಕಾಳಸಂತೆಯಲ್ಲಿ ಈಗಾಗಲೇ 5 ರಿಂದ 7 ಸಾವಿರ ರೂಗಳವರೆಗೆ ಮಾರಾಟವಾಗುತ್ತಿವೆ ಎಂಬ ದೂರುಗಳು ಬರುತ್ತಿವೆ. ಕೋವಿಡ್ ಸಾಂಕ್ರಾಮಿಕವನ್ನು ಅತ್ಯಂತ ಅರಾಜಕವಾಗಿ ನಿರ್ವಹಿಸುತ್ತಿರುವ, ಸತ್ತವರು ಸಾಯಲಿ ಎಂಬಂತೆ ನಡದುಕೊಳ್ಳುತ್ತಿರುವ ಸರ್ಕಾರ ಬ್ಲಾಕ್ ಫಂಗಸ್ ರೋಗದ ಕುರಿತು ಇನ್ನೂ ಕೂಡ ಸಮರ್ಪಕ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ಚಿಕಿತ್ಸೆ ನೀಡುವ ಕುರಿತಾದಂತೆ ಅಷ್ಟೆ ಅಲ್ಲ. ರೋಗ ಹರಡುತ್ತಿರುವ ಕುರಿತಂತೆ ಸರ್ಕಾರ ನಿರ್ಧಾರ ಕೈಗೊಳ್ಳಬೇಕಾಗಿದೆ. ರೋಗ ಯಾರಲ್ಲಿ ಹರಡುತ್ತಿದೆ? ಏಕೆ ಹರಡುತ್ತಿದೆ? ಯಾವಾಗ ಹರಡುತ್ತಿದೆ? ರೋಗ ಲಕ್ಷಣಗಳೇನು? ರೋಗ ಬಂದರೆ ಹೇಗೆ ಚಿಕಿತ್ಸೆ ಪಡೆಯಬೇಕು? ರೋಗ ಬರದಂತೆ ತಡೆಯಲು ಯಾವ ಕ್ರಮಗಳನ್ನು ಅನುಸರಿಸಬೇಕು? ಕೋವಿಡ್ ಚಿಕಿತ್ಸೆಯಿಂದ ಈ ಶಿಲೀಂದ್ರ ಸೋಂಕು ಬರುತ್ತದೆ ಅಂತಾದರೆ, ಕೋವಿಡ್ ಚಿಕಿತ್ಸೆಯಲ್ಲಿ ಮಾಡಿಕೊಳ್ಳಬೇಕಾದ ಮಾರ್ಪಾಟುಗಳೇನು? ಎಂಬೆಲ್ಲ ವಿಚಾರಗಳ ಕುರಿತು ಸಮರ್ಪಕ ಎಸ್‍ಓಪಿ ಯನ್ನು ಹೊರಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕೋವಿಡ್ ಸೋಂಕಿನ ವಿಚಾರದಲ್ಲಿ ಅವೈಜ್ಞಾನಿಕವಾಗಿ ನಡೆದುಕೊಂಡಂತೆ ಬ್ಲಾಕ್ ಫಂಗಸ್ಸಿನ ವಿಚಾರದಲ್ಲಿ ನಡೆದುಕೊಳ್ಳಬಾರದು. ಉತ್ತರ ಭಾರತದ ಅನೇಕ ಕಡೆ ಸಗಣಿ ಬಳಸಿ ಚಿಕಿತ್ಸೆ ಪಡೆಯಲು ಹೊರಟವರಲ್ಲಿ ಈ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ. ಬಹುತೇಕ ವೈದ್ಯರು  ಕೋವಿಡ್ ಚಿಕಿತ್ಸೆಯಲ್ಲಿ ಅನಿಯಮಿತವಾಗಿ ಬಳಸುವ ಸ್ಟಿರಾಯ್ಡ್‍ಗಳಿಂದ ಹರಡುತ್ತಿದೆ ಎನ್ನುತ್ತಾರೆ. ಕೋವಿಡ್ ಬಂದವರಿಗೆ ಸಕ್ಕರೆ ಕಾಯಿಲೆ ಇದ್ದರೆ ಅವರಿಗೆ ಸುಲಭವಾಗಿ ಹರಡುತ್ತದೆ ಎನ್ನಲಾಗುತ್ತಿದೆ. ಆಕ್ಸಿಜನ್ ನೀಡುವಾಗ ಉಂಟಾಗುವ ಸೋಂಕುಗಳಿಂದ ಹರಡುತ್ತದೆ ಎಂಬ ಅಭಿಪ್ರಾಯವೂ ಇದೆ. ಆದ್ದರಿಂದ ಈ ಕುರಿತು ಸೂಕ್ತವಾಗಿ ಶೀಘ್ರವಾಗಿ ಅಧ್ಯಯನ ಮಾಡಿ ಚಿಕಿತ್ಸೆ ನೀಡಬೇಕು ಎಂದಿದ್ದಾರೆ.

ಪ್ರತಿವಾರ ಸುಮಾರು 400 ಜನಕ್ಕೆ ಈ ಸೋಂಕು ಬರಬಹುದು ಎಂದು ಅಂದಾಜಿಸಲಾಗುತ್ತಿದೆ. ಆದರೆ ಚಿಕಿತ್ಸೆ ನೀಡಲು ಬೇಕಾದ ತಯಾರಿಯನ್ನು ಇನ್ನೂ ಮಾಡಿಕೊಂಡಂತೆ ಕಾಣುತ್ತಿಲ್ಲ. ಮಧುಮೇಹ ಮುಂತಾದ ಸಮಸ್ಯೆ ಇದ್ದು ಕೋವಿಡ್ ಬಂದವರನ್ನು ಕನಿಷ್ಟ ಮೂರು ತಿಂಗಳ ಕಾಲ ಗಮನಿಸುತ್ತಿರಬೇಕು. ಜೊತೆಗೆ ಕೋವಿಡ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರ ವಿವರಗಳನ್ನು ಮತ್ತು ಹೆಚ್ಚು ಸ್ಟಿರಾಯ್ಡ್ ನೀಡಲಾಗಿರುವವರ ಪಟ್ಟಿಯನ್ನು ತಾಲ್ಲೂಕುವಾರು, ವಾರ್ಡ್‍ವಾರು ಸಿದ್ಧಪಡಿಸಿಕೊಂಡು ಅವರನ್ನೂ ಸಹ ಆಶಾ ಕಾರ್ಯಕರ್ತರು ಮತ್ತು ಆರೋಗ್ಯ ಕಾರ್ಯಕರ್ತರ ಮೂಲಕ ನಿಗಾವಹಿಸಬೇಕು. ಈ ನಿಗಾ ಅವಧಿಯಲ್ಲಿ ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ಕೂಡಲೇ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಿ ಉಚಿತವಾಗಿ ಸಮರ್ಪಕ ಚಿಕಿತ್ಸೆಯನ್ನು ನೀಡಬೇಕು. ಅದಕ್ಕೂ ಮೊದಲು ಈ ಕೂಡಲೇ ಈ ರೋಗಕ್ಕೆ ಚಿಕಿತ್ಸೆ ನೀಡಲು ಜಿಲ್ಲಾವಾರು ಆಸ್ಪತ್ರೆಗಳ ಪಟ್ಟಿ ಸಿದ್ಧಪಡಿಸಿ, ಅಧಿಸೂಚನೆ ಹೊರಡಿಸಬೇಕು. ಚಿಕಿತ್ಸೆಗಾಗಿ ಅಗತ್ಯ ಇರುವಷ್ಟು ಆಂಫೊಟೆರೆಸಿನ್ ಮುಂತಾದ ಔಷಧಗಳನ್ನು ಕೂಡಲೇ ಅಂದಾಜು ಮಾಡಿ ತರಿಸಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಹಿನ್ನೆಯಲ್ಲಿ ಸರ್ಕಾರ ತಡಮಾಡದೆ ಸೂಕ್ತ ಅಧಿಸೂಚನೆಗಳನ್ನು ಹೊರಡಿಸಿ ಉಚಿತ ಚಿಕಿತ್ಸೆ ನೀಡಲು ಪ್ರಾರಂಭಿಸಬೇಕು. ಈಗಾಗಾಲೇ ಬಹಳಷ್ಟು ಜನರು ಬ್ಲಾಕ್ ಫಂಗಸ್ಸಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಕಣ್ಣುಗಳನ್ನು ಕಳೆದುಕೊಂಡಿದ್ದಾರೆ. ಅಂಥವರಿಗೆ, ಅಂಥವರ ಕುಟುಂಬ ಸೂಕ್ತ ಪರಿಹಾರ ನೀಡಬೇಕು. ಈ ರೋಗವು ಇನ್ನಷ್ಟು ಅಮೂಲ್ಯ ಜೀವಗಳನ್ನು ಹೊತ್ತೊಯ್ಯುವ ಮೊದಲು ಕೂಡಲೇ ಉಚಿತ ಚಿಕಿತ್ಸೆ ನೀಡಲು ಆರಂಭಿಸಬೇಕೆಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.