ಗೋವಾದಲ್ಲಿ ಬ್ಲ್ಯಾಕ್ ಫಂಗಸ್ಗೆ ಮೊದಲ ಬಲಿ
Team Udayavani, May 18, 2021, 5:29 PM IST
ಪಣಜಿ: ಗೋವಾದಲ್ಲಿ ಕೋವಿಡ್ ಮರಣ ಮೃದಂಗದ ನಡುವೆಯೇ ಬ್ಲ್ಯಾಕ್ ಫಂಗಸ್ಗೆ ರಾಜ್ಯದಲ್ಲಿ ಮಂಗಳವಾರ ಮೊದಲ ಬಲಿಯಾಗಿದೆ.
ರಾಜ್ಯದಲ್ಲಿ ಸದ್ಯ 6 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗೋವಾ ಬಾಂಬೋಲಿಂ ಆಸ್ಪತ್ರೆಯ ಡೀನ್ ಡಾ. ಶಿವಾನಂದ ಬಾಂದೇಕರ್ ಮಾಹಿತಿ ನೀಡಿದ್ದಾರೆ.
ಗೋವಾದಲ್ಲಿ ಕೋವಿಡ್ ಸೋಂಕು ದೃಢಪಡುವ ಪ್ರಮಾಣ ಶೇ 50 ರಿಂದ ಶೇ 33 ರಷ್ಟು ಇಳಿಕೆ ಕಂಡಿರುವ ಖುಷಿ ಒಂದೆಡೆಯಾದರೆ, ಬ್ಲ್ಯಾಕ್ ಫಂಗಸ್ ತನ್ನ ಮರಣಮೃದಂಗ ಬಾರಿಸುತ್ತಿರುವುದು ರಾಜ್ಯದ ಜನತೆಯನ್ನು ಭಯಭೀತರನ್ನಾಗಿಸಿದೆ.
ದಕ್ಷಿಣ ಗೋವಾದಲ್ಲಿ ಇನ್ನೂ ಎರಡು ಪ್ರಕರಣಗಳು ಬ್ಲ್ಯಾಕ್ ಫಂಗಸ್ ಸೋಂಕಿತರೇ..? ಎಂಬುದು ಖಚಿತವಾಗಿಲ್ಲ. ಬಾಂಬೋಲಿಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 6 ಜನ ಕೋವಿಡ್ ಸೋಂಕಿತರಿಗೆ ಬ್ಲ್ಯಾಕ್ ಫಂಗಸ್ ಇರುವುದು ಖಚಿತವಾಗಿದೆ. ಇವರು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂಧಿಸುತ್ತಿದ್ದಾರೆ ಎಂದು ಡಾ. ಶಿವಾನಂದ ಬಾಂದೇಕರ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ