ಭಾರತದಿಂದ ಮತ್ತೊಂದು ಜಾಗತಿಕ ದಾಖಲೆ; ಒಂದೇ ದಿನದಲ್ಲಿ 20 ಲಕ್ಷ ಕೋವಿಡ್ 19 ಪರೀಕ್ಷೆ
ಭಾರತದಲ್ಲಿ ಒಟ್ಟು ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 2,19,86,363ಕ್ಕೆ ಏರಿಕೆಯಾಗಿದೆ.
Team Udayavani, May 19, 2021, 4:34 PM IST
ನವದೆಹಲಿ:ಕೋವಿಡ್ ಎರಡನೇ ಅಲೆ ವಿರುದ್ಧ ಹೋರಾಟ ಮುಂದುವರಿಯುತ್ತಿರುವ ನಡುವೆಯೇ ಭಾರತ ಒಂದೇ ದಿನಗದಲ್ಲಿ 20 ಲಕ್ಷ ಕೋವಿಡ್ 19 ಪರೀಕ್ಷೆ ನಡೆಸುವ ಮೂಲಕ ಜಾಗತಿಕವಾಗಿ ಮತ್ತೊಂದು ದಾಖಲೆಯ ಸಾಧನೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ(ಮೇ 19) ತಿಳಿಸಿದೆ.
ಕಳೆದ 24ಗಂಟೆಗಳಲ್ಲಿ 20ಲಕ್ಷಕ್ಕೂ ಅಧಿಕ ಕೋವಿಡ್ ಪರೀಕ್ಷೆ ನಡೆಸಲಾಗಿದೆ,(ದೇಶದಲ್ಲಿ ಈವರೆಗೆ ನಡೆಸಿದ ಪರೀಕ್ಷೆಗಿಂತ ದಾಖಲೆಯ ಪ್ರಮಾಣ ಇದಾಗಿದೆ) ದಿನದ ಪಾಸಿಟಿವಿಟಿ ದರ 13.31ಕ್ಕೆ ಇಳಿಕೆಯಾಗಿರುವುದಾಗಿ ಆರೋಗ್ಯ ಸಚಿವಾಲಯ ವಿವರಿಸಿದೆ.
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 20.08 ಲಕ್ಷ ಪರೀಕ್ಷೆಗಳನ್ನು ನಡೆಸುವ ಮೂಲಕ ಜಾಗತಿಕ ದಾಖಲೆ ಬರೆದಿದೆ ಎಂದು ಸಚಿವಾಲಯ ಹೇಳಿದೆ. ಈವರೆಗೆ ದೇಶದಲ್ಲಿ 32 ಕೋಟಿಗೂ ಅಧಿಕ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಕಳೆದ 24ಗಂಟೆಗಳಲ್ಲಿ 3,89, 851 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಭಾರತದಲ್ಲಿ ಒಟ್ಟು ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 2,19,86,363ಕ್ಕೆ ಏರಿಕೆಯಾಗಿದೆ. ರಾಷ್ಟ್ರೀಯ ಚೇತರಿಕೆ ಪ್ರಮಾಣ ಶೇ.86.23ಕ್ಕೆ ತಲುಪಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ