ಸರ್ಕಾರದೊಂದಿಗೆ ಸಂಘ-ಸಂಸ್ಥೆ ಕೈಜೋಡಿಸಲಿ

Team Udayavani, May 20, 2021, 8:54 PM IST

20-13

ಶಿವಮೊಗ್ಗ: ತುರ್ತು ಸಂದರ್ಭ, ಸಂಕಷ್ಟದ ಸಮಯ, ಪ್ರಕೃತಿ ವಿಕೋಪ, ಕೋವಿಡ್‌ನ‌ಂತಹ ವಿಷಮ ಪರಿಸ್ಥಿತಿಯಲ್ಲಿ ಪ್ರತಿಯೊಂದಕ್ಕೂ ಸರ್ಕಾರವನ್ನು ಆಶ್ರಯಿಸದೆ ದಾನಿಗಳು, ಸಂಘ-ಸಂಸ್ಥೆಗಳು ನೆರವು ಹಾಗೂ ಸಹಕಾರ ನೀಡಬೇಕೆಂದು ಆರ್‌ಎಸ್‌ಎಸ್‌ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪಟ್ಟಾಭಿರಾಮ ಮನವಿ ಮಾಡಿದರು.

ಶಿವಮೊಗ್ಗ ಜಿಲ್ಲಾ ಆಟೋಮೊಬೈಲ್‌ ಡೀಲರ್ ಅಸೋಸಿಯೇಷನ್‌ (ಸಾಡ) ವತಿಯಿಂದ ಬುಧವಾರ ಬೆಳಿಗ್ಗೆ ಇಲ್ಲಿನ ಜಿಲ್ಲಾ ಧಿಕಾರಿಗಳ ಕಚೇರಿಯಲ್ಲಿ ಕೋವಿಡ್‌ ನ ತುರ್ತು ನಿಗಾ ಘಟಕಕ್ಕೆ (ಐಸಿಯು) ಸುಮಾರು 10 ಲಕ್ಷ ರೂ. ಮೌಲ್ಯದ ರೋಗಿಗಳ ಬಹು ಉಸ್ತುವಾರಿ ವ್ಯವಸ್ಥೆ (ಎಂಪಿಎಂಎಸ್‌)ಗಳನ್ನು ಕೊಡುಗೆಯಾಗಿ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೋವಿಡ್‌ನಿಂದ ಉಂಟಾಗಿರುವ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಶಕ್ತಿ ಮೀರಿ ಪ್ರಯತ್ನಿಸುತ್ತಿವೆ.

ಸಾಧ್ಯವಾದಷ್ಟು ಮಟ್ಟಿಗೆ ಲೋಪದೋಷಗಳನ್ನು ಸರಿಪಡಿಸಲಾಗುತ್ತಿದೆ. ಸರ್ಕಾರದೊಂದಿಗೆ ಸಂಘ-ಸಂಸ್ಥೆಗಳೂ ಕೈಜೋಡಿಸಿದಲ್ಲಿ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬಹುದು ಎಂದರು. ಈ ನಿಟ್ಟಿನಲ್ಲಿ ಸೇವಾ ಭಾರತಿ, ಕೋವಿಡ್‌ ಸುರûಾ ಪಡೆ, ಜಿಲ್ಲಾ ಆಟೋಮೊಬೈಲ್‌ ಡೀಲರ್ ಅಸೋಸಿಯೇಷನ್‌ ಸೇರಿದಂತೆ ಅನೇಕ ಸಂಘ-ಸಂಸ್ಥೆಗಳು ಸಹಾಯ, ನೆರವು ನೀಡಲು ಮುಂದಾಗಿರುವುದು ಶ್ಲಾಘನೀಯ. ಅದರಲ್ಲೂ ಹರ್ಷ ಕಾಮತ್‌ ಅವರು ಸಾಮಾಜಿಕ ಜವಾಬ್ದಾರಿಯಿಂದ ಮುಂದಾಳತ್ವ ವಹಿಸಿ ಕಾರ್ಯನಿರ್ವಹಿಸುತ್ತಿರುವುದು ಪ್ರಶಂಸನೀಯ.

ಇವರಿಗೆ ಇತರೆ ಪದಾಧಿ ಕಾರಿಗಳು ಬೆಂಬಲವಾಗಿ ನಿಂತಿರುವುದು ಅನುಕರಣೀಯ ಎಂದು ಹೇಳಿದರು. ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್‌.ದತ್ತಾತ್ರಿ ಮಾತನಾಡಿ, ಕಳೆದ ವರ್ಷದ ಲಾಕ್‌ಡೌನ್‌ ಸಂದರ್ಭದಲ್ಲೂ ಜಿಲ್ಲಾ ಆಟೋಮೊಬೈಲ್‌ ಡೀಲರ್ ಅಸೋಸಿಯೇಷನ್‌ ನೂರಾರು ಫುಡ್‌ ಕಿಟ್‌ಗಳನ್ನು ವಿತರಿಸಿತ್ತು. ಈ ಬಾರಿ ಲಕ್ಷಾಂತರ ರೂ. ಮೌಲ್ಯದ ವೈದ್ಯಕೀಯ ಪರಿಕರ ನೀಡುವ ಮೂಲಕ ಮಾನವೀಯತೆ ಮೆರೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ ವರ್ಷದ ಲಾಕ್‌ಡೌನ್‌ನಿಂದಾಗಿ ಅನೇಕರು ಉದ್ಯೋಗ ಕಳೆದುಕೊಂಡಿದ್ದ ಸಂದರ್ಭದಲ್ಲಿ ಓಂ ಗಣೇಶ್‌ ಯಮಹಾ ಶೋರೂಂನಲ್ಲಿ ಉದ್ಯೋಗ ಮೇಳ ನಡೆಸಿ ನೂರಾರು ಮಂದಿಗೆ ಉದ್ಯೋಗ ಕಲ್ಪಿಸಿದ್ದನ್ನು ಅವರು ಸ್ಮರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್‌, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್‌. ಅರುಣ್‌, ಜಿಲ್ಲಾ ಆರೋಗ್ಯಾಧಿ ಕಾರಿ ರಾಜೇಶ್‌ ಸುರಗಿಹಳ್ಳಿ, ಅಸೋಸಿಯೇಷನ್‌ನ ಪದಾಧಿಕಾರಿಗಳು ಹಾಗೂ ವೈದ್ಯಕೀಯ ಪರಿಕರಗಳ ದಾನಿಗಳಾದ ಹರ್ಷ ಭಾಸ್ಕರ್‌ ಕಾಮತ್‌, ಸೋನಾ ಹೋಂಡಾ ಮೋಟಾರ್ನ ಇಕ್ಬಾಲ್‌ ಶೇಟ್‌, ರವಿಕುಮಾರ್‌, ಮಣಿ, ಹುಂಡೈ ಶ್ರೇಯ ರೆನಾಲ್ಟ್ನ ರಾಹುಲ್‌, ಸುಪ್ರೀಂ ಬಜಾಜ್‌ನ ಪ್ರಭಾಕರ್‌ ರಾವ್‌ ಆಮ್ಟೆ, ಝೂನ್ಸಿಕಿಯಾ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.