ಹಳ್ಳಿಗಳಲ್ಲಿ ಪೊಲೀಸ್‌ ಬೀಟ್‌ ಹೆಚ್ಚಿ ಸಿ: ಜೊಲ್ಲೆ


Team Udayavani, May 25, 2021, 8:32 PM IST

vb nbvcxz

ವಿಜಯಪುರ: ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ರೀತಿಯಲ್ಲಿ ಕೋವಿಡ್‌ ಪ್ರಕರಣಗಳು ಬರುತ್ತಿರುವ ಹಿನ್ನೆಲೆ ಪೊಲೀಸ್‌ ಇಲಾಖೆಯ ಬೀಟ್‌ ಸಿಬ್ಬಂದಿ ಸಂಖ್ಯೆ ಹೆಚ್ಚಿಸಬೇಕು. ಹಳ್ಳಿಗಳಲ್ಲಿ ನಿರಂತರ ಪರಿಶೀಲನೆ ಜೊತೆಗೆ ಗ್ರಾಪಂ ಮಟ್ಟದ ಕಾರ್ಯಪಡೆಗಳಿಗೆ ನೆರವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸೂಚಿಸಿದ್ದಾರೆ.

ಸೋಮವಾರ ನಗರದ ನೂತನ ಪ್ರವಾಸಿ ಮಂದಿರದಲ್ಲಿ ಪೊಲೀಸ್‌ ಇಲಾಖೆಯ ಹಿರಿಯ ಅಧಿ  ಕಾರಿಗಳೊಂದಿಗೆ ಕೋವಿಡ್‌ ನಿಯಂತ್ರಣ ಕುರಿತು ಪರಿಶೀಲನಾ ಸಭೆ ನಡೆಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇದಕ್ಕಾಗಿ ಈಗಾಗಲೇ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಪಂ ಸದಸ್ಯರನ್ನು ಒಳಗೊಂಡ ಕಾರ್ಯ ಪಡೆಗಳು ಕಾರ್ಯನಿರ್ವಹಿಸುತ್ತಿದ್ದು, ಅವರಿಗೆ ಸೂಕ್ತ ರೀತಿಯಲ್ಲಿ ನೆರವಾಗುವಂತೆ ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ದೃಢಪಟ್ಟ ತಕ್ಷಣ ಕೋವಿಡ್‌ ಕೇರ್‌ ಸೆಂಟರ್‌ಗೆ ರೋಗಿಗಳು ನಿರಾಕರಿಸುವ ಪ್ರಕರಣಗಳು ಸಹ ನಡೆಯುತ್ತಿವೆ.

ಇಂತಹ ಪ್ರಕರಣಗಳ ಬಗ್ಗೆ ವಿಶೇಷ ಗಮನ ನೀಡಿ ಕಾರ್ಯ ಪಡೆಗಳಿಗೆ ಸ್ಪಂದಿಸಬೇಕು. ಪ್ರತಿ ಗ್ರಾಮದಲ್ಲಿ ಬೀಟ್‌ ಸಿಬ್ಬಂದಿ ನಿರಂತರ ಭೇಟಿ ನೀಡುವ ಮೂಲಕ ಕಾರ್ಯ ಪಡೆಗಳೊಂದಿಗೆ ಸಮನ್ವಯತೆ ಸಾ ಧಿಸುವಂತೆ ನಿರ್ದೇಶನ ನೀಡಿದರು. ಕೋವಿಡ್‌ ರೋಗಿಗಳು ಗ್ರಾಮೀಣ ಪ್ರದೇಶದಲ್ಲಿ ನಿರಾತಂಕ ಓಡಾಡುವುದರಿಂದ ಕೊರೊನಾ ಪ್ರಕರಣ ಹೆಚ್ಚುವ ಸಾಧ್ಯತೆ ಇದೆ. ಆದ್ದರಿಂದ ಅಂತಹ ಕೋವಿಡ್‌ ರೋಗಿಗಳಿಗೆ ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸಲು ಗಮನ ನೀಡುವಂತೆ ಸೂಚಿಸಿದರು. ರಾಜ್ಯದಲ್ಲಿ ಕೋವಿಡ್‌ ಕರ್ಫ್ಯೂ ಜಾರಿಯಾಗಿದ್ದು, ಸರಕಾರದ ನಿಯಮಗಳು ಕಟ್ಟುನಿಟ್ಟಾಗಿ ಜಾರಿಯಾಗುವಂತೆ ನೋಡಿಕೊಳ್ಳಬೇಕು. ಜನಪ್ರತಿನಿಧಿ ಗಳು, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಸಂಘಟಿತ ಪ್ರಯತ್ನದ ಮೂಲಕ ಕೋವಿಡ್‌ ಹತೋಟಿಗೆ ತರಬೇಕಿದೆ. ಪೊಲೀಸ್‌ ಅ ಧಿಕಾರಿಗಳು ಮತ್ತು ಸಿಬ್ಬಂದಿ, ತಮ್ಮ ಜೀವದ ಹಂಗು ತೊರೆದು ಅತ್ಯುತ್ತಮ ಸೇವೆ ಸಲ್ಲಿಸಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಕರ್ಫ್ಯೂ ಸಂದರ್ಭದಲ್ಲಿ ಸಾರ್ವಜನಿಕರು ಅನಗತ್ಯ ಓಡಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದರ ಹೊರತಾಗಿಯೂ ಜನರು ಅನಗತ್ಯವಾಗಿ ಬೀದಿಗೆ ಇಳಿದಲ್ಲಿ ಕಠಿಣ ಕ್ರಮ ಕೈಗೊಳ್ಳಿ. ಆದರೆ ಇದರ ಜತೆಗೆ ರೈತರ ಕೃಷಿ ಕಾರ್ಯಕ್ಕೆ ತೊಂದರೆ ಕೊಡಬಾರದು. ಅಗತ್ಯ ಹಾಗೂ ತುರ್ತು ಕೆಲಸಕ್ಕೆ ಹೊರಗೆ ಬಂದವರ ವಿಷಯದಲ್ಲಿ ಮಾನವೀಯತೆ ತೋರಬೇಕು. ತಳ್ಳುವ ಗಾಡಿ ವ್ಯಾಪಾರಸ್ಥರ ಬಗ್ಗೆಯೂ ಮಾನವೀಯತೆ ನೆಲೆಯ ಮೇಲೆ ನೋಡಿಕೊಳ್ಳುವಂತೆ ಸೂಚಿಸಿದರು. ವಿಜಯಪುರ ನಗರದ ಇಟಗಿ ಕ್ರಾಸ್‌ ಬಗ್ಗೆ ನಿಗಾ ಇಡಬೇಕು. ಸಿಂದಗಿ ಹಾಗೂ ಆಲಮೆಲ ಭಾಗಗಳಲ್ಲಿ ಪೊಲೀಸ್‌ ಅ ಧಿಕಾರಿ, ಸಿಬ್ಬಂದಿ ಇನ್ನಷ್ಟು ಕಟ್ಟೆಚ್ಚರ ವಹಿಸಬೇಕು. ಅನ ಧಿಕೃತ ಮರಳು ಸಾಗಾಣಿಕೆ ಬಗ್ಗೆ ತೀವ್ರ ನಿಗಾ ಇಡುವಂತೆಯೂ ಸಲಹೆ ನೀಡಿದರು. ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ, ವೂಡಾ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಸಭೆಯಲ್ಲಿ ಪಾಲ್ಗೊಂಡಿದ್ದರು.

 

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.