ಬ್ಲ್ಯಾ ಫಂಗಸ್‌ ಚಿಕಿತ್ಸೆಗೆ ಪ್ರತ್ಯೇಕ ತಂಡ


Team Udayavani, May 29, 2021, 9:59 AM IST

ಬ್ಲ್ಯಾ ಫಂಗಸ್‌ ಚಿಕಿತ್ಸೆಗೆ ಪ್ರತ್ಯೇಕ ತಂಡ

ಬಳ್ಳಾರಿ: ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿದ್ದ ಕೋವಿಡ್‌ ಸೋಂಕಿನಿಂದ ತುಸು ಚೇತರಿಸಿಕೊಳ್ಳುತ್ತಿರುವ ಬೆನ್ನಲ್ಲೇ “ಬ್ಲ್ಯಾಕ್‌ ಫಂಗಸ್‌’ ಹಾವಳಿ ನಿಧಾನವಾಗಿ ಹೆಚ್ಚುತ್ತಿದ್ದು, ಈ ಸೋಂಕನ್ನು ನಿಭಾಯಿಸಲು, ಚಿಕಿತ್ಸೆ ನೀಡಲು ವಿಮ್ಸ್‌ನಲ್ಲಿ ಪ್ರತ್ಯೇಕ ವೈದ್ಯರ ತಂಡವನ್ನು ರಚಿಸಲಾಗಿದೆ.

ಉಭಯ ಜಿಲ್ಲೆಗಳಲ್ಲಿ ಈವರೆಗೆ 41 ಬ್ಲ್ಯಾಕ್‌ ಫಂಗಸ್‌ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 6 ಜನರು ಮೃತಪಟ್ಟಿದ್ದಾರೆ. ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಕೋವಿಡ್‌ ಸೋಂಕು ನಿಧಾನವಾಗಿ ನಿಯಂತ್ರ ಣಕ್ಕೆ ಬರುತ್ತಿರುವ ಬೆನ್ನಲ್ಲೇ ಉಭಯ ಜಿಲ್ಲೆಗಳಲ್ಲಿ ಬ್ಲ್ಯಾಕ್‌ ಫಂಗಸ್‌ (ಮ್ಯೂಕೋರಮೈಕೋಸಿಸ್‌) ಪ್ರಕರಣಗಳು ವರದಿಯಾಗುತ್ತಿರುವುದು ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡಿವೆ.

ಬಳ್ಳಾರಿ, ಹೊಸಪೇಟೆ, ಹರಪನಹಳ್ಳಿ, ಹಡಗಲಿ, ಕೂಡ್ಲಿಗಿ ತಾಲೂಕುಗಳಲ್ಲಿ ಈ ಬ್ಲ್ಯಾಕ್‌ ಫಂಗಸ್‌ ಸೋಂಕಿನ ಪ್ರಕರಣಗಳು ಕಂಡುಬಂದಿವೆ. ಹಡಗಲಿ, ಹರಪನಹಳ್ಳಿ ಸೇರಿ ಇತರೆ ತಾಲೂಕುಗಳಲ್ಲಿ ಒಟ್ಟು 6 ಜನರು ಮೃತಪಟ್ಟಿದ್ದಾರೆ. ಹಾಗಾಗಿ ಉಭಯ ಜಿಲ್ಲೆಗಳಲ್ಲಿ ಬ್ಲ್ಯಾಕ್‌ ಫಂಗಸ್‌ ಸೋಂಕನ್ನು ಎದುರಿಸಲು ಸಿದ್ಧವಾಗಿರುವ ವಿಮ್ಸ್‌ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ವಿಮ್ಸ್‌ನಲ್ಲಿ ತಜ್ಞವೈದ್ಯರ ಪ್ರತ್ಯೇಕ ತಂಡವನ್ನು ರಚಿಸಿದೆ.

ಮೂರು ಹಂತದಲ್ಲಿ ಪತ್ತೆ: ಉಭಯ ಜಿಲ್ಲೆಗಳಲ್ಲಿ ನಿಧಾನವಾಗಿ ಹೆಚ್ಚಳವಾಗುತ್ತಿರುವ ಬ್ಲ್ಯಾಕ್‌ ಫಂಗಸ್‌ ಸೋಂಕು ಮೂರು ಹಂತದಲ್ಲಿ ಪತ್ತೆಯಾಗಲಿದೆ. ಕೋವಿಡ್‌ ಸೋಂಕಿತರಲ್ಲಿ, ಕೋವಿಡ್‌ ಸೋಂಕಿನಿಂದ ಗುಣಮುಖರಾದವರಲ್ಲಿ ಮತ್ತು ಸ್ಟೀರಾಯ್ಡ ಬಳಸುತ್ತಿದ್ದವರಲ್ಲಿ ಈ ಸೋಂಕು ಪತ್ತೆಯಾಗಲಿದೆ. ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಂಕ್ರಾಮಿಕ ರೋಗವಲ್ಲವಾದರೂ, ಸೋಂಕಿತರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಸೋಂಕು ಆವರಿಸಿದ್ದ ರೋಗಿಯ ಗಂಭೀರತೆಯನ್ನು ಆಧರಿಸಿ 6 ರಿಂದ 21 ದಿನಗಳವರೆಗೆ ಚಿಕಿತ್ಸೆ ನೀಡಲಾಗುತ್ತದೆ. ಈ ಸೋಂಕಿಗೆ ನೀಡುವ ಇಂಜೆಕ್ಷನ್‌ ದುಬಾರಿ ವೆಚ್ಚದ್ದಾಗಿದ್ದು, ಸದ್ಯಕ್ಕೆ ರಾಜ್ಯ ಸರ್ಕಾರವೇ ಪೂರೈಸುತ್ತಿದೆ ಎಂದು ವಿಮ್ಸ್‌ ನಿರ್ದೇಶಕ ಡಾ| ಗಂಗಾಧರಗೌಡ ತಿಳಿಸಿದ್ದಾರೆ.

ತಜ್ಞವೈದ್ಯರ ತಂಡ ರಚನೆ: ಬ್ಲ್ಯಾಕ್‌ ಫಂಗಸ್‌ ದೃಢಪಟ್ಟ ಸೋಂಕಿತರಿಗೆ ಚಿಕಿತ್ಸೆ ನೀಡಲು ವಿಮ್ಸ್‌ನಲ್ಲಿ ನೆಗೆಟಿವ್‌ ಮತ್ತು ಪಾಸಿಟಿವ್‌ ಎಂಬ ಎರಡು ಪ್ರತ್ಯೇಕ ವಾರ್ಡ್‌ಗಳನ್ನು ತೆಗೆಯಲಾಗಿದೆ. ಈ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಮೆಡಿಸಿನ್‌, ಅನಸ್ತೇಸಿಯಾ, ಆಪ್ತಮಾಲಜಿ, ಇಎನ್‌ಟಿ, ನ್ಯೂರೊ ಸರ್ಜರಿ ಸೇರಿ ಒಟ್ಟು 6 ಜನರ ತಜ್ಞವೈದ್ಯರ ತಂಡವನ್ನು ರಚಿಸಲಾಗಿದೆ. ಈ ಎಲ್ಲ ವಿಭಾಗಗಳಿಗೆ ಸಂಬಂಧಿ ಸಿದಂತೆ ಸೋಂಕಿತರಲ್ಲಿ ಲಕ್ಷಣಗಳು ಕಾಣಿಸಲಿವೆ. ಕೆಲವೊಮ್ಮೆ ಸರ್ಜರಿ ಮಾಡುವ ಅವಶ್ಯಕತೆಯೂ ಬರಬಹುದು. ಹಾಗಾಗಿ ಈ ಎಲ್ಲ ವಿಭಾಗಗಳ ತಜ್ಞವೈದ್ಯರ ತಂಡವನ್ನು ರಚಿಸಿ, ಸೋಂಕಿತರಿಗೆ ಸ್ಥಳೀಯವಾಗಿಯೇ ಸೂಕ್ತ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ ಎಂದವರು ವಿವರಿಸಿದ್ದಾರೆ.

ಇಂಜೆಕ್ಷನ್‌ ಕೊರತೆ: ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ದಿನೇದಿನೆ ನಿಧಾನವಾಗಿ ಏರಿಕೆಯಾಗುತ್ತಿರುವ ಬ್ಲ್ಯಾಕ್‌ಫಂಗಸ್‌ ಸೋಂಕಿತರಿಗೆ ನೀಡುವ ಇಂಜೆಕ್ಷನ್‌ಗಳ ಕೊರತೆ ಎದುರಾಗಿದೆ. ದುಬಾರಿ ವೆಚ್ಚದ ಈ ಇಂಜೆಕ್ಷನ್‌ಗಳನ್ನು ಜಿಲ್ಲಾ ಆರೋಗ್ಯ ಇಲಾಖೆ, ವಿಮ್ಸ್‌ಗೆ ಸದ್ಯ ಸರ್ಕಾರವೇ ಪೂರೈಸುತ್ತಿದೆ. ಆದರೆ, ಆರೋಗ್ಯ ಇಲಾಖೆಯ ಬೇಡಿಕೆಯಷ್ಟು ಸರ್ಕಾರದಿಂದ ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಜಿಲ್ಲಾಡಳಿತದಿಂದ ತ್ವರಿತವಾಗಿ 200 ಇಂಜೆಕ್ಷನ್‌ ಪೂರೈಸುವಂತೆ ಸರ್ಕಾರಕ್ಕೆ ಮನವಿ ಮಾಡಿದರೆ, ಸರ್ಕಾರದಿಂದ ಕೇವಲ 10 ಇಂಜೆಕ್ಷನ್‌ಗಳು ಬಂದಿವೆ.

ಇಷ್ಟು ಕಡಿಮೆ ಇಂಜೆಕ್ಷನ್‌ಗಳನ್ನು ಹೇಗೆ ನಿಭಾಯಿಸಬೇಕು ಎಂಬುದೇ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ವಿಮ್ಸ್‌ ಅಧಿ ಕಾರಿಗಳಿಗೆ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದ್ದು, ಇನ್ನಷ್ಟು ಇಂಜೆಕ್ಷನ್‌ಗಳನ್ನು ಕಳುಹಿಸುವಂತೆ ಸರ್ಕಾರವನ್ನು ಕೋರಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಒಟ್ಟು 41 ಜನರಲ್ಲಿ ಬ್ಲಾಕ್‌ ಫಂಗಸ್‌ ಸೋಂಕು ದೃಢಪಟ್ಟಿದೆ. ವಿಮ್ಸ್‌ನಲ್ಲಿ 7 ಜನರಿಗೆ ಕೆಒಎಚ್‌ ಪರೀಕ್ಷೆ ಮಾಡಿಸಿದಾಗ ನಾಲ್ವರಲ್ಲಿ ಬ್ಲಾಕ್‌ ಫಂಗಸ್‌ ದೃಢಪಟ್ಟಿದೆ. ಈ ಸೋಂಕಿತರಿಗೆ ಚಿಕಿತ್ಸೆ ನೀಡಲು ವಿಮ್ಸ್‌ನಲ್ಲಿ ಎರಡು ಪ್ರತ್ಯೇಕ ವಾರ್ಡ್‌ಗಳನ್ನು ತೆರೆಯಲಾಗಿದೆ. ಜತೆಗೆ ಈ ಸೋಂಕಿತರಿಗೆ ಚಿಕಿತ್ಸೆ ನೀಡಲು ಮೆಡಿಸಿನ್‌, ಅನಸ್ತೇಸಿಯಾ, ಆಪ್ತಮಾಲಜಿ, ಇಎನ್‌ಟಿ, ನ್ಯೂರೊ ಸರ್ಜರಿ ಸೇರಿ ಒಟ್ಟು 6 ಜನರ ತಜ್ಞವೈದ್ಯರ ತಂಡವನ್ನು ರಚಿಸಲಾಗಿದೆ. ಸೋಂಕಿತರಲ್ಲಿ ರೋಗದ ತೀವ್ರತೆಯನ್ನು ಆಧರಿಸಿ 6 ರಿಂದ 21 ದಿನಗಳವರೆಗೆ ಚಿಕಿತ್ಸೆ ನೀಡಲಾಗುತ್ತದೆ. –ಗಂಗಾಧರಗೌಡ, ನಿರ್ದೇಶಕರು, ವಿಮ್ಸ್‌, ಬಳ್ಳಾರಿ.

 

-ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.