ಭಾರತದಲ್ಲಿ 50 ದಿನಗಳ ನಂತರ ಭಾರೀ ಇಳಿಕೆ ಕಂಡ ಕೋವಿಡ್ ಪ್ರಕರಣ; 1.52 ಲಕ್ಷ ಕೇಸ್ ಪತ್ತೆ
ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,78,94,800ಕ್ಕೆ ಇಳಿಕೆಯಾಗಿತ್ತು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
Team Udayavani, May 31, 2021, 10:15 AM IST
ನವದೆಹಲಿ:ಭಾರತದಲ್ಲಿ ಕೋವಿಡ್ ಎರಡನೇ ಅಲೆ ಇಳಿಮುಖವಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 1,52,734 ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಇದು ಹಿಂದಿನ 50 ದಿನಗಳ ಅತಿ ಕಡಿಮೆ ಪ್ರಮಾಣದ ಪ್ರಕರಣವಾಗಿದೆ. 24 ಗಂಟೆಯಲ್ಲಿ 3,128 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಮೇ 31) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬೆಳಗ್ಗೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, 24ಗಂಟೆಗಳಲ್ಲಿ 2,38,022 ಮಂದಿ ಗುಣಮುಖರಾಗಿದ್ದಾರೆ. 1.52 ಸಾವಿರ ಕೋವಿಡ್ ಪ್ರಕರಣ ವರದಿಯಾಗುವ ಮೂಲಕ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 2,80,47,534ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಟ್ಟು ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 3,29,100ಕ್ಕೆ ಹೆಚ್ಚಳವಾಗಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಅಂಕಿಅಂಶದ ಪ್ರಕಾರ ಈವರೆಗೆ 21,31,54,129 ಮಂದಿಗೆ ಲಸಿಕೆ ನೀಡಲಾಗಿದೆ. ಭಾರತದಲ್ಲಿ ಜನವರಿಯಿಂದ ಆರಂಭಸಲಾದ ಕೋವಿಡ್ ಲಸಿಕೆ ಅಭಿಯಾನದಲ್ಲಿ 21.31 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.
ಕಳೆದ 46 ದಿನಗಳ ನಂತರ ದೇಶದಲ್ಲಿ 1,65,553 ಕೋವಿಡ್ ಪ್ರಕರಣ ಪತ್ತೆಯಾಗುವ ಮೂಲಕ ಇಳಿಕೆ ಕಂಡಿದ್ದು, ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,78,94,800ಕ್ಕೆ ಇಳಿಕೆಯಾಗಿತ್ತು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ