ಜ್ವರದಿಂದ ಚೇತರಿಸಿಕೊಂಡ ಸಿದ್ದರಾಮಯ್ಯ; ಕೋವಿಡ್ ವರದಿ ನೆಗೆಟಿವ್
Team Udayavani, Jun 5, 2021, 1:01 PM IST
ಬೆಂಗಳೂರು: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸದ್ಯ ಚೇತರಿಸಿಕೊಂಡಿದ್ದಾರೆ.
ಸಿದ್ದರಾಮಯ್ಯನವರು ಸದ್ಯ ಚೇತರಿಸಿಕೊಂಡಿದ್ದು, ಜ್ವರದ ಲಕ್ಷಣಗಳು ಇಲ್ಲವಾಗಿದೆ. ಶುಕ್ರವಾರ ನಡೆಸಿದ ಕೋವಿಡ್ ಪರೀಕ್ಷೆಯಲ್ಲಿಯೂ ನೆಗೆಟಿವ್ ವರದಿ ಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:ಒಬ್ಬರೇ ಕೋವಿಡ್ ನಿಯಂತ್ರಣ ಮಾಡಿದ್ದಾರೆಂಬ ಭ್ರಮೆ ಬೇಡ: ಮೈಸೂರು ಡಿಸಿಗೆ ಸಚಿವರ ಟಾಂಗ್
ವೈದ್ಯರ ಸಲಹೆ ಮೇರೆಗೆ ಇಂದು ಮತ್ತು ನಾಳೆ ಆಸ್ಪತ್ರೆಯಲ್ಲಿಯೇ ಸಿದ್ದರಾಮಯ್ಯ ಅವರು ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿ ತಿಳಿಸಿದೆ.