ಸ್ಥಳೀಯ ಉದ್ಯೋಗಿಗೆ ಹಿಂಸೆ: MRPL ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ ಡಾ.ಭರತ್ ಶೆಟ್ಟಿ ವೈ


Team Udayavani, Jun 5, 2021, 2:35 PM IST

ಸ್ಥಳೀಯ ಉದ್ಯೋಗಿಗೆ ಹಿಂಸೆ: MRPL ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕ ಡಾ.ಭರತ್ ಶೆಟ್ಟಿ ವೈ

ಸುರತ್ಕಲ್:  ಎಂ ಆರ್ ಪಿ ಎಲ್  ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಸ್ಥಳೀಯ ಯುವಕನೊಬ್ಬನ ಮೊಬೈಲ್ ಫೋನ್ ಅನ್ನು ಬಲವಂತವಾಗಿ ತೆಗೆದುಕೊಂಡು ಅದರಲ್ಲಿರುವ ಫೋಟೋಸ್, ದಾಖಲೆಗಳನ್ನು ತಡಕಾಡಿ ಆರು ಜನ ಅಧಿಕಾರಿಗಳು ತೀವ್ರತರ ತನಿಖೆ ಮಾಡಿ ಯುವಕನಿಗೆ ಮಾನಸಿಕ ದೌರ್ಜನ್ಯ ನಡೆಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು,ಶಾಸಕ ಡಾ.ವೈ ಭರತ್ ಶೆಟ್ಟಿ ಅವರು   ಶನಿವಾರ ಬೆಳಿಗ್ಗೆ ದಿಡೀರ್ ಭೇಟಿ ನೀಡಿ ಎಂ ಆರ್ ಪಿ ಎಲ್  ಅಧಿಕಾರಿಗಳನ್ನು ಕರೆಸಿ ಮಾಹಿತಿ ಪಡೆದರು. ಬೃಹತ್ ಕಂಪನಿಯೊಳಗೆ ಸ್ಥಳೀಯರಿಗೆ ದೌರ್ಜನ್ಯ ಆದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದು ಸುರತ್ಕಲ್ ಸಿ ಐ ಚಂದ್ರಪ್ಪ ಅವರಿಗೆ ಶಾಸಕರು ಸೂಚಿಸಿದರು.

ಅಧಿಕಾರಿಗಳು ಪೊಲೀಸರ ಕೆಲಸ ಮಾಡಬಾರದು. ಮೊಬೈಲ್ ಕಸಿದು ಒಳಗಿನ ಮಾಹಿತಿ ಪರಿಶೀಲಿಸುವುದು ಉದ್ಯೋಗಿಯ ಖಾಸಗಿತನದ ಮೇಲೆ ಪ್ರಹಾರ ಮಾಡಿದಂತೆ. ಕೆಲಸದ ವೇಳೆಯಲ್ಲಿ ಉದ್ಯೋಗಿಗಳು ಮೊಬೈಲ್ ತೆಗೆದುಕೊಂಡು ಹೋಗಿದ್ದು ತಪ್ಪಾಗಿದ್ದಲ್ಲಿ ದಂಡ ಹಾಕುವುದನ್ನು ಬಿಟ್ಟು ಮೊಬೈಲ್ ಕಸಿದು ಅದರೊಳಗಿನ ಮಾಹಿತಿ ಪರಿಶೀಲಿಸುವುದು ತಪ್ಪು.ಇಲ್ಲಿ ಯಾವುದೋ ಬೇರೆ ವಿಷಯಗಳ ಬಗ್ಗೆ ಅಧಿಕಾರಿಗಳು ತನಿಖೆ ಮಾಡುವ ಪ್ರಯತ್ನ ಮಾಡುವುದು ಸರಿಯಲ್ಲ ಎಂದು ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದರು.

ಇದನ್ನೂ ಓದಿ: ವಿಜಯೇಂದ್ರ ಹೈಕಮಾಂಡ್ ಭೇಟಿ ಮಾಡಲು ಇಡಿ ತನಿಖೆ ಭಯ ಕಾರಣ: ಯತ್ನಾಳ್

ಸಭೆಯಲ್ಲಿ ಉಪಸ್ಥಿತರಿದ್ದ ಕಂಪೆನಿಯ ಉನ್ನತ ಅಧಿಕಾರಿಗಳಾದ ಬಿ ಎಚ್ ವಿ ಪ್ರಸಾದ್ ಹಾಗೂ ಕೃಷ್ಣ ಹೆಗ್ಡೆಯವರು ಇಂತಹ ಘಟನೆಗಳು ಮುಂದೆ ಆಗದಂತೆ ನೋಡಿಕೊಳ್ಳುವುದಾಗಿ ಹಾಗೂ ಆ ಯುವಕನೊಂದಿಗೆ ಅಸಭ್ಯವಾಗಿ ವರ್ತಿಸಿದ ಆರು ಜನ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಎಂ ಆರ್ ಪಿ ಎಲ್  ನಲ್ಲಿ ಕೆಲಸ ಮಾಡುವ ಸ್ಥಳೀಯರಿಗೆ ಅಲ್ಲಿ ಯಾವುದೇ ರೀತಿಯ ತೊಂದರೆ ಆಗದಂತೆ ಸೂಕ್ತವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕರು ಪೊಲೀಸ್ ಸಬ್ ಇನ್ಸಪೆಕ್ಟರ್ ಚಂದ್ರಪ್ಪ ಅವರಿಗೆ ಶಾಸಕ ಡಾ.ಭರತ್ ಶೆಟ್ಟಿ  ಸೂಚನೆ ನೀಡಿದರು.

ಡಾ.ಭರತ್ ಶೆಟ್ಟಿಯವರೊಂದಿಗೆ ಪಾಲಿಕೆ ಸ್ಥಾಯಿ ಸಮತಿ ಅಧ್ಯಕ್ಷ ಲೋಕೇಶ್ ಬೊಳ್ಳಾಜೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

Dharmasthala ಮೇಳದ ಈ ಸಾಲಿನ ತಿರುಗಾಟಕ್ಕೆ ಮಂಗಳ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

ಸರಕಾರಿ ಅಧಿಕಾರಿಗಳ ರಕ್ಷಣೆಗೆ ಸದಾ ಬದ್ಧ: ಕೆ. ರಘುಪತಿ ಭಟ್‌ ಭರವಸೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

K. S. Eshwarappa ಪಕ್ಷ ನಿಷ್ಠರಿಗೆ ಅಮಾನತು ಶಿಕ್ಷೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ

ಕೇರಳಕ್ಕೆ ವಿದ್ಯುತ್‌ ಸಾಗಾಟಕ್ಕೆ ಟವರ್‌ ನಿರ್ಮಾಣ; ಇನ್ನಾದಲ್ಲಿ ಭಾರೀ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26

Mangaluru: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

24

Surathkal: ಗುತ್ತಿಗೆ ಕಾರ್ಮಿಕ ಬಿದ್ದು ಸಾವು

23-

Mangaluru: ರೈಲು ನಿಲ್ದಾಣದ ಬಳಿ ವೈದ್ಯರ ಮೊಬೈಲ್‌ ಕಸಿದು ಪರಾರಿ 

22

Gurupura: ಖಾಸಗಿ ಬಸ್ಸು, ಬೈಕ್‌ ಢಿಕ್ಕಿ ,ಸವಾರ ಸ್ಥಿತಿ ಗಂಭೀರ

20-

Kinnigoli: ಏಸ್‌ ಢಿಕ್ಕಿ: ಬುಲೆಟ್‌ ಸವಾರ ಸಾವು

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-qeeqwew

Mizoram; ರೆಮಲ್‌ ಅಬ್ಬರಕ್ಕೆ ಕುಸಿದ ಕಲ್ಲುಕ್ವಾರಿ: 17 ಮಂದಿ ಬಲಿ

1-wewewqe

Kerala ಸುರಿದ ಧಾರಾಕಾರ ಮಳೆ: ‘ಮೇಘ ಸ್ಫೋಟ’ದ ಸಾಧ್ಯತೆ

1-raf

26 Rafale ಖರೀದಿಗೆ ನಾಳೆ ಭಾರತ, ಫ್ರಾನ್ಸ್‌ ಮಾತುಕತೆ

1-wqeqewewqewqe

TMCಯ ಶಹಜಹಾನ್‌ ವಿರುದ್ಧ ಕೊಲೆ ಯತ್ನ ಕೇಸು

1-wqeqewqe

Congo;ಭಾರತದ ಮೇಜರ್‌ ರಾಧಿಕಾಗೆ ವಿಶ್ವಸಂಸ್ಥೆಯ ಉನ್ನತ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.