ಬಿಗ್ ಬಾಸ್ ಎರಡನೇ ಇನ್ನಿಂಗ್ಸ್ ಶುರು…

Team Udayavani, Jun 16, 2021, 1:17 PM IST

0

ಕೋವಿಡ್ ಅಟ್ಟಹಾಸದಿಂದಾಗಿ ಅರ್ಧಕ್ಕೆ ಮೊಟಕುಗೊಂಡಿದ್ದ ಕನ್ನಡದ ಬಿಗ್ ಬಾಸ್ 8ನೇ ಸೀಸನ್ ಇದೀಗ ಪುನಾರಂಭಗೊಳ್ಳುತ್ತಿದೆ.

ಈ ಬಗ್ಗೆ ಕಲರ್ಸ್​ ಕನ್ನಡದ ಬ್ಯುಸಿನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್ ಸೋಶಿಯಲ್ ಮೀಡಿಯಾದಲ್ಲಿ ಅಧಿಕೃತ ಮಾಹಿತಿ ನೀಡಿದ್ದಾರೆ.

“ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ.

ಇದೊಂಥರಾ ಎರಡನೇ ಇನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನಿಂಗ್ಸಿನ ಸ್ಕೋರ್‍ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನಿಂಗ್ಸಿನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು.. ಎರಡನೇ ಇನಿಂಗ್ಸಿನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು. ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.

ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ ಎಂದು ಪರಮೇಶ್ವರ್​ ಗುಂಡ್ಕಲ್​ ಬರೆದುಕೊಂಡಿದ್ದಾರೆ.

ಮನೆಯಲ್ಲಿ ಯಾರು ಇರಲಿದ್ದಾರೆ ?

ಸ್ಪರ್ಧಿಗಳಾದ ಕೆ.ಪಿ. ಅರವಿಂದ್​, ಶಮಂತ್​ ಗೌಡ, ಮಂಜು ಪಾವಗಡ, ದಿವ್ಯಾ ಸುರೇಶ್​, ರಘು ಗೌಡ, ವೈಷ್ಣವಿ ಗೌಡ, ಶುಭಾ ಪೂಂಜಾ, ಪ್ರಶಾಂತ್​ ಸಂಬರಗಿ, ಚಕ್ರವರ್ತಿ ಚಂದ್ರಚೂಡ್ ಹಾಗೂ ಪ್ರಿಯಾಂಕಾ ತಿಮ್ಮೇಶ್​ ಮತ್ತೆ ದೊಡ್ಮನೆಯ ಕದ ತಟ್ಟಿದ್ದಾರೆ ಎನ್ನಲಾಗಿದೆ.‌

ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತಗೊಳ್ಳುವ ವೇಳೆಯಲ್ಲಿ ಆಸ್ಪತ್ರೆ ಸೇರಿದ್ದ ದಿವ್ಯಾ ಉರುಡುಗ ಕೂಡ ಈ ತಂಡವನ್ನ ಸೇರಿದ್ದಾರೆ ಎಂಬ ಮಾಹಿತಿ ಕೂಡ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಈಗಾಗಲೇ ಕಲರ್ಸ್ ಕನ್ನಡ ವಾಹಿನಿ ಸಾಕಷ್ಟು ಪ್ರೋಮೋಗಳ ಮೂಲಕ 12 ಮಂದಿ ಸ್ಪರ್ಧಿಗಳು ಮನೆಗೆ ಹೊಕ್ಕಿರುವ ಬಗ್ಗೆ ಮಾಹಿತಿ ನೀಡಿದೆ. ಹೀಗಾಗಿ ಇನ್ನೊಂದು ವೈಲ್ಡ್​ ಕಾರ್ಡ್ ಎಂಟ್ರಿ ಇದೆಯಾ ಎಂಬ ಪ್ರಶ್ನೆಯೂ ಅಭಿಮಾನಿಗಳನ್ನ ಕಾಡುತ್ತಿದೆ. ಶೋ ಆರಂಭದ ದಿನಾಂಕ ಹಾಗೂ ಎಷ್ಟು ದಿನಗಳವರೆಗೆ ಈ ಶೋ ನಡೆಯಲಿದೆ ಅನ್ನೋದಕ್ಕೆ ವಾಹಿನಿ ಕಡೆಯಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.