ಅರ್ಧ ಅನ್ ಲಾಕ್ ನಲ್ಲೇ ಸಹಜ‌ ಸ್ಥಿತಿಗೆ ಮರಳಲಾರಂಭಿಸಿದ ಕಾಪು ಪೇಟೆ

Team Udayavani, Jun 18, 2021, 3:13 PM IST

wertyuytrertyujnbgfr

ಕಾಪು  : ಕಾಪು ತಾಲೂಕಿನಾದ್ಯಂತ ಮೊದಲ ಹಂತದ ಲಾಕ್ ಡೌನ್ ತೆರವಾಗಿ ಅನ್ ಲಾಕ್ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಅರ್ಧ ಅನ್ ಲಾಕ್ ಪ್ರಕ್ರಿಯೆಯಲ್ಲೇ ಕಾಪು ಸಹಜ ಸ್ಥಿತಿಗೆ ಬಂದಿದೆ.

ಜೂ. 15 ರಿಂದ ಉಡುಪಿ ಜಿಲ್ಲೆಯಲ್ಲಿ‌ ಅನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು ಅದರಂತೆ ಕಾಪು ತಾಲೂಕಿನಲ್ಲೂ ಅನ್‌ಲಾಕ್‌ ಪ್ರಕ್ರಿಯೆ ಜಾರಿಯಲ್ಲಿದೆ. ಅನ್ ಲಾಕ್ ಪ್ರಕ್ರಿಯೆ ಜಾರಿಗೆ ಬಂದ ಬಳಿಕ ಕಾಪು ಪೇಟೆ ಸಹಜ ಸ್ಥಿತಿಗೆ ಮರಳಿದ್ದು, ಮಧ್ಯಾಹ್ನ 2 ಗಂಟೆಯವರೆಗೆ ಪೇಟೆಯಲ್ಲಿ ಎಂದಿನಂತೆ ವ್ಯವಹಾರ, ವಾಹನ‌ ಓಡಾಟ, ರಿಕ್ಷಾ ಪ್ರಯಾಣ ಸಹಿತ ಆರ್ಥಿಕ ಚಟುವಟಿಕೆಗಳು ಎಂದಿನಂತೆ ನಡೆಯಲಾರಂಭಿಸಿವೆ.

ಕಾಪು ಪೇಟೆಯಲ್ಲಿ ಮೆಡಿಕಲ್, ದಿನಸಿ, ಹಾಲು, ತರಕಾರಿ, ಹೂ ಸಹಿತ ಅಗತ್ಯ ಸಾಮಾಗ್ರಿಗಳ ಮಾರಾಟ ಮಳಿಗೆಗಳು ತೆರೆದು ಕೊಂಡಿದ್ದು, ಹೊಟೇಲ್ ಗಳಲ್ಲಿ‌ ಪಾರ್ಸೆಲ್ ನಂತಹ ಚಟುವಟಿಕೆಗಳು ಮಧ್ಯಾಹ್ನದ ವರೆಗೆ ಬಿರುಸಿನಿಂದ ನಡೆಯಲಾರಂಭಿಸಿವೆ. ಬಟ್ಟೆ ಅಂಗಡಿ, ಸೆಲೂನ್, ಟೈಲರ್ ಶಾಪ್, ಗ್ಯಾರೇಜ್, ಮೊಬೈಲ್ ರಿಪೇರಿ ಮತ್ತು ಶಾಪ್, ಸ್ಟೇಷನರಿ ಮಳಿಗೆ, ಚಪ್ಪಲಿ ಅಂಗಡಿಗಳು, ಪಾತ್ರೆ ಮಳಿಗೆ, ಪೋಟೋ ಸ್ಟುಡಿಯೋ, ಬೇಕರಿ, ಜ್ಯುವೆಲ್ಲರಿ ಮಳಿಗೆಗಳು ಇನ್ನೂ ತೆರೆದುಕೊಂಡಿಲ್ಲ.

ಅನಗತ್ಯವಾಗಿ ಸಂಚರಿಸುತ್ತಿರುವವರು, ಮಾರ್ಗಸೂಚಿಯನ್ನು ಉಲ್ಲಂಘಿಸಿ ತೆರೆದಿರುವ ಅಂಗಡಿ, ವ್ಯಾಪಾರ ಮಳಿಗೆಗಳ ವಿರುದ್ದ ತಾಲೂಕು ಆಡಳಿತ, ಪೌರಾಡಳಿತ, ಪೊಲೀಸ್ ಇಲಾಖೆಯ ಅಧಿಕಾರಿಗಳು ಧಾಳಿ ಮುಂದುವರಿಸಿದ್ದು, ದಂಡ ವಿಧಿಸುವುದರ ಜೊತೆಗೆ ಎಚ್ಚರಿಕೆಯನ್ನೂ ನೀಡುತ್ತಿರುವುದು ಕಂಡು ಬಂದಿವೆ.

ಪೊಲೀಸ್, ಗೃರಕ್ಷಕರಿಂದ ಕಣ್ಗಾವಲು : ಲಾಕ್ ಡೌನ್ ಆರಂಭಗೊಂಡ ದಿನದಿಂದಲೂ ಕಾಪು ಪೇಟೆಯಲ್ಲಿ ಅಗತ್ಯವಾಗಿ ಸಂಚರಿಸುತ್ತಿರುವವರ ಮೇಲೆ ಪೊಲೀಸ್ ಕಣ್ಗಾವಲು ಜಾರಿಯಲ್ಲಿದ್ದು, ಕಣ್ಗಾವಲು ತಪ್ಪಿಸಿಕೊಂಡು ಬಂದವರಿಗೆ ಎಚ್ಚರಿಕೆ ಪಾಠ, ಎರಡನೇ ಸಲ ನಿಯಮ‌ ಮುರಿದವರಿಗೆ ದಂಡ ವಿಧಿಸುವ ಪ್ರಕ್ರಿಯೆಗಳೂ ನಡೆಯುತ್ತಿವೆ.

ಗೃರಕ್ಷಕದಳ ಸಿಬಂದಿಗಳ ಸೇವೆಗೆ ಶ್ಲಾಘನೆ : ಕೊರೊನಾ ಆತಂಕದ ನಡುವೆಯೂ ಪೊಲೀಸ್ ಇಲಾಖೆಯ ಜೊತೆಗೆ ಗೃಹರಕ್ಷಕರೂ ಬಂದೋಬಸ್ತ್ ನಲ್ಲಿ ಸಹಕಾರ ನೀಡುತ್ತಿದ್ದು, ಸೇವಾ ಭದ್ರತೆಯಿರದಿದ್ದರೂ ಸಮುದಾಯದ ರಕ್ಷಣೆಗಾಗಿ ನಿರಂತರವಾಗಿವ ಸೇವಾ ನಿರತರಾಗಿರುವ ಗೃಹರಕ್ಷಕದಳದ ಸಿಬ್ಬಂದಿಗಳ ಸೇವೆಗೆ ಸಾರ್ವಜನಿಕರಿಂದ ಭಾರೀ ಶ್ಲಾಘನೆ ವ್ಯಕ್ತವಾಗುತ್ತಿದೆ.‌

ಟಾಪ್ ನ್ಯೂಸ್

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Udupi: ಆಕಸ್ಮಿಕವಾಗಿ ಬಾವಿಗೆ ಬಿದ್ದವರ ರಕ್ಷಣೆ

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.