ಸಾಲದ ಖಾತೆಗೆ ಕೋವಿಡ್ ಪ್ರೋತ್ಸಾಹಧನ!

Team Udayavani, Jun 19, 2021, 11:26 AM IST

ಸಾಲದ ಖಾತೆಗೆ ಕೋವಿಡ್ ಪ್ರೋತ್ಸಾಹಧನ!

ಗಂಗಾವತಿ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರು, ಕೂಲಿಕಾರರು, ಕುಶಲಕರ್ಮಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಿ ಅವರ ಬ್ಯಾಂಕ್‌ ಖಾತೆಗಳಿಗೆ ಜಮಾ ಮಾಡುವ ಪ್ರಕ್ರಿಯೆ ಆರಂಭಿಸಿದೆ. ಆದರೆ, ಜಿಲ್ಲೆಯ ಕೆಲ ರಾಷ್ಟ್ರೀಕೃತ ಬ್ಯಾಂಕ್‌ಗಳು ಕಾರ್ಮಿಕರಿಗೆ ಹಣ ನೀಡದೆ ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿವೆ.

ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪ್ಯಾಕೇಜ್‌ ಅನ್ವಯ ಹಣ ಪಡೆದ ಕೂಲಿ ಕಾರ್ಮಿಕರ ಬ್ಯಾಂಕ್‌ ಖಾತೆಗಳಿಗೆ ಪ್ರಸಕ್ತ ಸಾಲಿನಲ್ಲೂ ಪ್ರೋತ್ಸಾಹಧನ ಜಮಾ ಆಗಿದೆ. ಕಳೆದ ವರ್ಷ ಪ್ರೋತ್ಸಾಹಧನ ಸ್ವೀಕರಿಸದವರು ಅಗತ್ಯ ದಾಖಲಾತಿಗಳ ಜತೆಗೆ ಅರ್ಜಿ ಸಲ್ಲಿಸಲುಜೂ.31ರವರೆಗೂ ಅವಕಾಶ ಕಲ್ಪಿಸಲಾಗಿದೆ. ಈ ಮಧ್ಯೆ ಕೆಲ ಬ್ಯಾಂಕ್‌ನವರು ಸರ್ಕಾರ ಜಮಾಮಾಡಿದ ಹಣದಲ್ಲಿ ಹಿಂದಿನ ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿದ್ದು, ಫಲಾನುಭವಿಗಳು ಇದನ್ನುಪ್ರಶ್ನಿಸಿದರೆ ಬ್ಯಾಂಕ್‌ ಅಧಿ ಕಾರಿಗಳು ಸಮರ್ಪಕ ಉತ್ತರ ನೀಡುತ್ತಿಲ್ಲ.

ಈಗಾಗಲೇ ಹಲವು ದೂರಿನ ಅನ್ವಯ ಸಿಎಂ ಯಡಿಯೂರಪ್ಪ ಕೊರೊನಾ ಸಂಕಷ್ಟದಲ್ಲಿರುವವರ ಬ್ಯಾಂಕ್‌ ಖಾತೆಗೆ ಸರ್ಕಾರ ಘೋಷಣೆ ಮಾಡಿದಪ್ಯಾಕೇಜ್‌ ಹಣ ನೇರವಾಗಿ ಫಲಾನುಭವಿಗಳಿಗೆ ವಿತರಿಸಬೇಕು. ಸಾಲದ ಖಾತೆಗೆ ಜಮಾ ಮಾಡಿಕೊಳ್ಳದಂತೆ ಕಟ್ಟುನಿಟ್ಟಿನ ಆದೇಶಮಾಡಿದ್ದರೂ ಕೆಲ ಬ್ಯಾಂಕ್‌ಗಳ ಅಧಿಕಾರಿಗಳು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ. ಕಳೆದ ವರ್ಷದಿಂದ ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವ್ಯಾಪಾರ ವಹಿವಾಟು ಸ್ಥಗಿತವಾಗಿರುವುದರಿಂದ ಯೋಜನೆಯ ಕೆಲ ಫಲಾನುಭವಿಗಳು ಸಾಲದ ಕಂತನ್ನು ಪಾವತಿಸುವಲ್ಲಿ ವಿಳಂಬ ಮಾಡಿದ್ದಾರೆ.

ಈ ಮಧ್ಯೆ ಕೇಂದ್ರ ಸರ್ಕಾರ ರೈತರಿಗೆ ಪ್ರೋತ್ಸಾಹ ನೀಡಲು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂ., ರಾಜ್ಯ ಸರ್ಕಾರ ಕೊರೊನಾ ಎರಡನೇ ಅಲೆಸಂದರ್ಭದಲ್ಲಿ 1450 ಕೋಟಿ ರೂ. ಪ್ಯಾಕೇಜ್‌ ಘೋಷಣೆ ಮಾಡಿ ಅಸಂಘಟಿತ ವಲಯದಕಾರ್ಮಿಕರ ಬ್ಯಾಂಕ್‌ ಖಾತೆಗೆ 2 ಮತ್ತು 5 ಸಾವಿರ ರೂ.ಗಳನ್ನು ಈಗಾಗಲೇ ಜಮಾ ಮಾಡುತ್ತಿವೆ. ಈ ಹಣವನ್ನು ಫಲಾನುಭವಿಗಳು ಪಡೆಯಲುಬ್ಯಾಂಕಿಗೆ ತೆರಳಿದರೆ ಸರ್ಕಾರದ ಪ್ರೋತ್ಸಾಹಧನ ಸಾಲದ ಖಾತೆಗೆ ಜಮಾ ಮಾಡಲಾಗಿದೆ. ನಿಮ್ಮ ಖಾತೆಯಲ್ಲಿ ಬ್ಯಾಲೆನ್ಸ್‌ ಇಲ್ಲ ಎಂಬ ಮಾಹಿತಿ ಬರುತ್ತಿದೆ. ಮೊಬೈಲ್‌ಗೆ ಸಹ ಸಾಲದಖಾತೆಗೆ ಹಣ ಜಮಾ ಆಗಿರುವ ಸಂದೇಶ ರವಾನೆಯಾಗಿವೆ.

ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಸರಕಾರ ಅಸಂಘಟಿತ ಕಾರ್ಮಿಕರಿಗೆ ಕುಶಲಕರ್ಮಿಗಳಿಗೆ ಪ್ರೋತ್ಸಾಹ ಧನ ನೀಡಿದೆ. ಕುಶಲಕರ್ಮಿಗಳ ಬ್ಯಾಂಕ್‌ ಖಾತೆಗೆ ಪ್ರೋತ್ಸಾಹ ಧನ ಜಮಾ ಆಗಿದ್ದು, ಕೆಲ ಬ್ಯಾಂಕ್‌ ಗಳು ಪ್ರೋತ್ಸಾಹ ಧನವನ್ನು ಸಾಲದ ಖಾತೆಗೆಜಮಾ ಮಾಡಿಕೊಂಡಿರುವ ವರದಿಯಾಗಿದೆ.ಈಗಾಗಲೇ ಮುಖ್ಯಮಂತ್ರಿಗಳುಪ್ರೋತ್ಸಾಹಧನ ಸಾಲದ ಖಾತೆಗೆ ಜಮಾಮಾಡಿಕೊಳ್ಳದಂತೆ ಸೂಚನೆ ನೀಡಿದ್ದಾರೆ. ಗಂಗಾವತಿಯಲ್ಲಿ ಪ್ರೋತ್ಸಾಹ ಧನ ಜಮಾ ಮಾಡಿಕೊಳ್ಳುವ ಪ್ರಕರಣ ವರದಿಯಾಗಿದೆ.ಕೂಡಲೇ ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಗಳಿಗೆ ಮಾತನಾಡಿ ಸಾಲದ ಖಾತೆಗೆ ಜಮಾಮಾಡಿಕೊಳ್ಳದಂತೆ ಸಮಂಜಸ ಸೂಚನೆ ನೀಡಲಾಗುತ್ತದೆ.– ಯು .ನಾಗರಾಜ್‌, ತಹಶೀಲ್ದಾರ

ಕೊರೊನಾ ಲಾಕ್‌ಡೌನ್‌ ಹಾಗೂ ಇತರೆ ಕಾರಣಕ್ಕಾಗಿ ಬದುಕು ನಡೆಸುವುದು ಕಷ್ಟವಾಗಿದೆ. ಸಿಎಂ ಯಡಿಯೂರಪ್ಪ ಕುಶಲಕರ್ಮಿಗಳು, ಅಸಂಘಟಿತ ವಲಯದ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳಿಗೆ ಪ್ರೋತ್ಸಾಹ ಧನ ನೀಡಿದ್ದಾರೆ. ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಹಣ ಜಮಾ ಆಗಿದ್ದು, ಬ್ಯಾಂಕಿನವರು ಸಾಲದ ಖಾತೆಗೆ ಜಮಾ ಮಾಡಿಕೊಂಡಿದ್ದಾರೆ. – ಹುಲುಗೇಶ ಮಾದರ್‌ ಪ್ರೋತ್ಸಾಹಧನದ ಫಲಾನುಭವಿ

ದೇವರು ಕೊಟ್ಟರೂ ಪೂಜಾರಿ ಕೊಡುವುದಿಲ್ಲ ಎಂಬಂತೆ ಸರ್ಕಾರ ಕುಶಲಕರ್ಮಿಗಳು, ಅಸಂಘಟಿತ ಕಾರ್ಮಿಕರಿಗೆ ಪ್ರೋತ್ಸಾಹಧನವನ್ನು ಬ್ಯಾಂಕ್‌ ಖಾತೆಗೆ ಜಮಾ ಮಾಡಿದೆ. ಕೆಲವು ಬ್ಯಾಂಕ್‌ ಅಧಿ ಕಾರಿಗಳುಪ್ರೋತ್ಸಾಹಧನವನ್ನು ಫಲಾನುಭವಿಗಳಿಗೆ ವಿತರಣೆ ಮಾಡದೆ ಸಾಲದ ಖಾತೆಗೆ ಜಮಾ ಮಾಡಿಕೊಂಡಿರುವುದು ಖಂಡನೀಯ.– ವೆಂಕಟೇಶ ಚಲುವಾದಿ ಜೆಡಿಎಸ್‌ ಪಕ್ಷದ ಮುಖಂಡ

-ಕೆ. ನಿಂಗಜ್ಜ

ಟಾಪ್ ನ್ಯೂಸ್

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.