ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

Team Udayavani, Jun 19, 2021, 7:13 PM IST

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಎಲ್ಲ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಶನಿವಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮುಂಗಾರು ಪ್ರವಾಹ ಪರಿಸ್ಥಿತಿ ಕುರಿತಂತೆ ಜಿಲ್ಲಾಧಿಕಾರಿಗಳ ಜೊತೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅವರು ಮಾತನಾಡಿದರು.

ಈಗಾಗಲೇ ಕಲ್ಯಾಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಅನೇಕ ಕಡೆ ನದಿ, ಹಳ್ಳಕೊಳ್ಳ ತುಂಬಿ ಹರಿಯುತ್ತಿದ್ದು ಪ್ರವಾಹ ಉಂಟಾಗಿದೆ. ಕಲಬುರಗಿಯಲ್ಲೂ ನೆರೆ ಹಾವಳಿ ಉಂಟಾಗದಂತೆ ತಕ್ಷಣವೇ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದರು.

ಕಲಬುರಗಿ ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮೆಲೆಕ್ಕಿಗರು, ಕಂದಾಯ ನೀರಿಕ್ಷಕರು ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಹೂಡಿ ಪರಿಸ್ಥಿತಿಯನ್ನು ನಿಭಾಯಿಸಬೇಕು. ಕಾಳಜಿ ಕೇಂದ್ರಕ್ಕೆ ಬರುವ ನಿರಾಶ್ರಿತ ಜನರಿಗೆ ಸರಕಾರದಿಂದ ಹೊರಡಿಸಲಾಗಿರುವ ಕೋವಿಡ್-19 ಸುರಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಲಹೆ ಮಾಡಿದರು.

ಇದನ್ನೂ ಓದಿ :ಕೋವಿಡ್ ಇಳಿಮುಖ : ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ ಬಿ ಎಸ್ ವೈ

ಪ್ರವಾಹ ಸಂದರ್ಭದಲ್ಲಿ ಕಾಳಜಿ ಕೆಂದ್ರಗಳನ್ನು ತೆರೆಯಬೇಕಾದಲ್ಲಿ ಬಿಸಿಎಂ, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳನ್ನು ಉಪಯೋಗಿಸಲು ಅನುಕೂಲವಾಗುವಂತೆ ಕಾಳಜಿ ಕೇಂದ್ರಗಳ ಮಾಹಿತಿಯನ್ನು ಪಡೆದುಕೊಂಡು ಮೂಲಭೂತ ಸೌಕರ್ಯವನ್ನು ಒದಗಿಸಲು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಆದೇಶಿಸಿದರು.

ಜೊತೆಗೆ ಕಾಳಜಿ ಕೇಂದ್ರಗಳಲ್ಲಿ ನಿರಾಶ್ರಿತರಿಗೆ ಅಗತ್ಯವಾದ ಪ್ರಾಥಮಿಕ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಅವಶ್ಯಕತೆ ಇರುವ ಎಲ್ಲಾ ರೀತಿ ಸಲಕರಣೆಗಳು, ಔಷಧಿಗಳನ್ನು ಸಂಗ್ರಹಿಸಿಡಬೇಕೆಂದು ಹೇಳಿದರು.

ಒಂದು ವೇಳೆ ಪ್ರವಾಹ ಉಂಟಾದಲ್ಲಿ ಪುರುಷರು, ಮಹಿಳೆಯರು, 60 ವರ್ಷ ಮೇಲ್ಪಟ್ಟ ವಯಸ್ಕರು, ಗಂರ್ಭಿಣಿಯರು ಹಾಗೂ ಜಾನುವಾರುಗಳ ಮಾಹಿತಿಯನ್ನು ಪಡೆದುಕೊಂಡು ಅವರಿಗೆ ಗಂಜಿ ಕೇಂದ್ರದ ವ್ಯವಸ್ಥೆಯನ್ನು ಮಾಡಬೇಕು. ಜೊತೆಗೆ ಜಿಲ್ಲೆಯಲ್ಲಿ ನಡುಗಡ್ಡೆ ಇದ್ದಲ್ಲಿ ಅಂತಹ ಸ್ಥಳಗಳಲ್ಲಿ ವಾಸವಾಗಿರುವ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಆಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದರು.

ಆಹಾರ ಇಲಾಖೆಯವರು, ಕಾಳಜಿ ಕೇಂದ್ರಗಳಲ್ಲಿ ಊಟದ ವ್ಯವಸ್ಥೆ, ಅಡುಗೆ ಮಾಡಲು ಅನಿಲ ವ್ಯವಸ್ಥೆ, ಅಡುಗೆ ಮಾಡುವವರು, ಜಾನುವರುಗಳಿಗೆ ಶೆಡ್ ವ್ಯವಸ್ಥೆ, ಆಸ್ಪತ್ರೆಗಳ ವ್ಯವಸ್ಥೆ, ಸಾಗಾಣಿಕೆ, ಸಾಮಾಜಿಕ ಅಂತರದೊಂದಿಗೆ ಮಾಡುವುದು ಹಾಗೂ ಜೆಸ್ಕಾಂ ಇಲಾಖೆ, ಲೋಕೋಪಯೋಗಿ, ಇಲಾಖೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇವರು ಜೆನೆರೇಟರ್ ವ್ಯವಸ್ಥೆ ಮಾಡುವಂತೆ ಸಭೆಯ ಗಮನಕ್ಕೆ ತಂದರು ಮತ್ತು ತುರ್ತು ಸಂದರ್ಭದಲ್ಲಿ 05 ಅಧಿಕಾರಿಗಳುಳ್ಳ ಟಾಸ್ಕ್ ಪೋಸ್೯ ಸಮಿತಿ ರಚಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕಲಬುರಗಿ ಜಿಲ್ಲೆಗೆ ಹೊಂದಿಕೊಂಡಿರುವ ನೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿಕೊಳ್ಳಲು ಸಂಬಂಧಪಟ್ಟ ಎಲ್ಲರೂ ಸಜ್ಜಾಗಬೇಕೆಂದು ಸೂಚನೆ ನೀಡಿದರು.

ಪ್ರವಾಹ ಪರಿಸ್ಥಿತಿಗೊಳಗಾದ ಗ್ರಾಮಗಳ ನಿರಾಶ್ರಿತರಿಗೆ ಕಾಳಜಿ ಕೇಂದ್ರಕ್ಕೆ ತರಬೇಕಾಗಿರುವುದರಿಂದ ತಾಲ್ಲೂಕು ಕೇಂದ್ರಗಳಲ್ಲಿ 200 ಕಿಟ್‍ಗಳನ್ನು ತಯಾರಿಕೆ, ಗ್ರಾಮದ ರಸ್ತೆ ಸಂಪೂರ್ಣ ಮುಳುಗಡೆಯಾದಾಗ ಪರ್ಯಾಯ ಮಾರ್ಗವಾಗಿ ಗ್ರಾಮಕ್ಕೆ ಸಂಪರ್ಕ ಸಾಧಿಸಲು ಬೇರೆ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳುವಂತೆ ತಾಕೀತು ಮಾಡಿದರು.

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.