ರಾಹುಲ್-ಡಿಕೆಶಿ ಭೇಟಿ : ಬ್ಲಾಕ್ ಮರು ವಿಂಗಡಣೆ, ಪಕ್ಷ ಸಂಘಟನೆ ಚರ್ಚೆ
Team Udayavani, Jun 23, 2021, 9:00 AM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಬಣ ರಾಜಕೀಯ ತೀವ್ರ ಗೊಳ್ಳುತ್ತಿರುವ ನಡುವೆಯೇ ಮಂಗಳ ವಾರ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ಗಾಂಧಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ತಮ್ಮ ಬೆಂಬಲಿಗ ಕಾರ್ಯಕರ್ತರಿಗೆ ಹೊಸ ಸಂದೇಶ ನೀಡಿದ್ದಾರೆ.
ಪಕ್ಷದ ತಳಮಟ್ಟದ ಸಂಘಟನೆ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಡಿಕೆಶಿ ತಿಳಿಸಿದ್ದು, ಬ್ಲಾಕ್ ಮರು ವಿಂಗಡಣೆ ಮಾಡಲಾಗುವುದು. ಜಿಲ್ಲಾ ಧ್ಯಕ್ಷರು ಮತ್ತು ಪದಾಧಿ ಕಾರಿ ಗಳ ಬದಲಾವಣೆ ಬಗ್ಗೆ ಚರ್ಚಿಸ ಲಾಗಿದೆ. ಒಂದು ವಾರದಲ್ಲಿ ಆಂತರಿಕ ವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳ ಲಾಗು ವುದು ಎಂದು ಹೇಳಿದರು.
ಪ್ರದೇಶ ಕಾಂಗ್ರೆಸ್ ಸಮಿತಿ ಪದಾಧಿ ಕಾರಿಗಳ ನೇಮಕ, ಕೆಲವು ಜಿಲ್ಲಾಧ್ಯಕ್ಷರ ಬದಲಾವಣೆ ಸಹಿತ ಕೆಲವು ವಿಚಾರಗಳ ಕುರಿತು ರಾಹುಲ್ ಜತೆ ಚರ್ಚೆ ನಡೆಸಲಾಗಿದೆ. ಕೆಲವರು ಮುಂದಿನ ಸಿಎಂ ವಿಚಾರದಲ್ಲಿ ನೀಡುತ್ತಿರುವ ಹೇಳಿಕೆಗಳ ಬಗ್ಗೆಯೂ ರಾಹುಲ್ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನ, ಪೆಟ್ರೋಲ್ ದರ ಏರಿಕೆ ಖಂಡಿಸಿ ಸರಣಿ ಪ್ರತಿಭಟನೆ, ಕೊರೊನಾ ಸಂಕಷ್ಟ ಕಾಲದಲ್ಲಿ ಕಾಂಗ್ರೆಸ್ ಕೇರ್ ಮತ್ತು ಶಾಸಕರಿಂದ ನೀಡಿದ ನೆರವು ಕುರಿತು ಮಾಹಿತಿ ನೀಡಿದ್ದಾರೆ. ಇದಕ್ಕೆ ಮುನ್ನ ರಾಜ್ಯ ಉಸ್ತುವಾರಿ ರಣದೀಪ್ಸಿಂಗ್ ಸುರ್ಜೆವಾಲಾ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಮನೆ ಮನೆ ಭೇಟಿ
ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸ ಕಾಣಿಸುತ್ತಿದೆ. ಮನೆ ಮನೆಗೆ ಹೋಗಿ ಮಾಹಿತಿ ಸಂಗ್ರಹ ಮಾಡುತ್ತೇವೆ. ಸರಕಾರ ನೀಡಿರುವ ಪ್ಯಾಕೇಜ್ ತಲುಪಿದೆಯೇ ಇಲ್ಲವೇ ಎಂಬುದರ ಬಗ್ಗೆಯೂ ರೈತರೊಂದಿಗೆ ನೇರ ಸಂಪರ್ಕ ಮಾಡಿ ಮಾಹಿತಿ ಪಡೆಯುತ್ತೇವೆ ಎಂದರು.
ಮುಂದಿನ ಸಿಎಂ ಹೇಳಿಕೆ ವಿಚಾರವೆಲ್ಲ ಹೈಕಮಾಂಡ್ ಗಮನಕ್ಕೆ ಬಂದಿದೆ. ಅದನ್ನು ಪಕ್ಷ ನೋಡಿಕೊಳ್ಳುತ್ತದೆ. ಹೈಕಮಾಂಡ್ ಬಳಿ ನಾಯಕತ್ವ ಕುರಿತು ಚರ್ಚಿಸುವುದು ನನ್ನ ಅಜೆಂಡಾ ಅಲ್ಲ. ನಮ್ಮ ಹೋರಾಟ ಏನಿದ್ದರೂ ಬಿಜೆಪಿ ವಿರುದ್ಧ.
– ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ