ಶಾಲಾರಂಭಕ್ಕೆ ದಿನಗಣನೆ: ಪಠ್ಯ ಪುಸ್ತಕ ಮುದ್ರಣಕ್ಕೇ ಹೋಗಿಲ್ಲ!

Team Udayavani, Jun 24, 2021, 8:00 AM IST

ಶಾಲಾರಂಭಕ್ಕೆ ದಿನಗಣನೆ: ಪಠ್ಯ ಪುಸ್ತಕ ಮುದ್ರಣಕ್ಕೇ ಹೋಗಿಲ್ಲ!

ಮಂಗಳೂರು: ರಾಜ್ಯಾದ್ಯಂತ ಜು. 1ರಿಂದ ಶಾಲಾರಂಭಕ್ಕೆ ಸಿದ್ಧತೆ ನಡೆಯು ತ್ತಿದ್ದರೂ ಪಠ್ಯಪುಸ್ತಕಗಳು ಮಾತ್ರ ಮುದ್ರಣಕ್ಕೇ ಹೋಗಿಲ್ಲ. ಈ ಬಾರಿ ಪುಸ್ತಕಗಳ ಸರಬರಾಜು ವಿಳಂಬ ಬಹುತೇಕ ಖಚಿತ.

ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಒಟ್ಟು 77,738 ಶಾಲೆಗಳ 54,17,409 ಬಾಲಕರು ಮತ್ತು 50,39,241 ಬಾಲಕಿಯರು ಸೇರಿ 1.04 ಕೋಟಿ ಮಕ್ಕಳಿಗೆ ಪಠ್ಯಪುಸ್ತಕ ಕೈ ಸೇರಬೇಕಿದೆ.

ಲಾಕ್‌ಡೌನ್‌ ಹಿನ್ನೆಲೆ ಯಲ್ಲಿ ಬಹುತೇಕ ಮುದ್ರಣಾ ಲಯ ಗಳಿಗೆ ಬೀಗ ಬಿದ್ದಿರುವುದೇ ವಿಳಂಬವಾಗಲು ಕಾರಣ ಎನ್ನುವುದು ಶಿಕ್ಷಣ ಇಲಾಖೆಯ ಸಮ ಜಾಯಿಷಿ.

ಹೊಸತು ಬರುವ ತನಕ ಹಳೆ ಪುಸ್ತಕ! :

ಈ ಬಾರಿ ಪಠ್ಯಪುಸ್ತಕ ವಿಳಂಬವಾಗುವ ಬಗ್ಗೆ ಮೊದಲೇ ಮಾಹಿತಿ ತಿಳಿದ ಶಿಕ್ಷಣ ಇಲಾಖೆ ಕಳೆದ ಬಾರಿಯಂತೆ ಈ ಹಿಂದಿನ ಸಾಲಿನ ಪಠ್ಯಪುಸ್ತಕಗಳ ಬಳಕೆಗೆ ನಿರ್ಧರಿಸಿದೆ. 2020-21ನೇ ಸಾಲಿನಲ್ಲಿ ಸರಕಾರಿ/ಅನುದಾನಿತ ಶಾಲಾ

ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾದ ಪಠ್ಯಪುಸ್ತಕ ಗಳಲ್ಲಿ ಸುಸ್ಥಿತಿಯಲ್ಲಿರುವ ಪುಸ್ತಕಗಳನ್ನು ಆಯಾ ಶಾಲೆಗಳ “ಬುಕ್‌ ಬ್ಯಾಂಕ್‌’ನಲ್ಲಿ ಸಂಗ್ರಹಿಸುವಂತೆ ಮತ್ತು ಅಗತ್ಯಾ ನುಸಾರ ಬಳಸುವಂತೆ ಬಿಇಒಗಳಿಗೆ ಸೂಚಿಸಿದೆ.

ಆದರೆ ಸದ್ಯ ಆನ್‌ಲೈನ್‌ನಲ್ಲಿ ತರಗತಿ ನಡೆಯುವುದರಿಂದ ಪಠ್ಯಪುಸ್ತಕ ಸಕಾಲಕ್ಕೆ ದೊರೆಯದಿದ್ದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಮಸ್ಯೆಯಾಗಲಿದೆ ಎಂಬುದು ಪೋಷಕರ ಆತಂಕ.

ಸಾಮಾನ್ಯವಾಗಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಬೇಕಾಗುವ ಪಠ್ಯಪುಸ್ತಕಗಳಿಗೆ ಸಂಬಂಧಿಸಿದ ಕಾರ್ಯ ವಿಧಾನಗಳನ್ನು ಹಿಂದಿನ ಆರ್ಥಿಕ ವರ್ಷದಿಂದಲೇ ಪ್ರಾರಂಭಿಸಲಾಗುತ್ತದೆ. ಮೊದಲಿಗೆ 1ರಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬೇಕಾಗುವ ಪಠ್ಯಪುಸ್ತಕಗಳ ಅಂಕಿ-ಅಂಶಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪಡೆಯಲಾಗುತ್ತದೆ. ಅದರಂತೆ ಮುದ್ರಿಸಿ ಬಿಇಒ ಕಚೇರಿಗೆ ತಲುಪಿಸಲಾಗುತ್ತದೆ. ಈ ಮಧ್ಯೆ ಕೇಂದ್ರ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿ ಜೂ. 15ರಿಂದ ಆರಂಭವಾಗಿದ್ದು, ಕೆಲವರಿಗೆ ಪಠ್ಯಪುಸ್ತಕ ದೊರೆತಿದೆ. ಉಳಿದವರಿಗೆ ವಾರದೊಳಗೆ ದೊರೆಯುವ ನಿರೀಕ್ಷೆಯಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪುಸ್ತಕಗಳ ಮುದ್ರಣ, ಸರಬರಾಜು ಕೊಂಚ ವಿಳಂಬವಾಗಿರುವುದು ಹೌದು. ಇದೀಗ ಟೆಂಡರ್‌ ಅಂತಿಮಗೊಳಿಸಿದ್ದು ಆದಷ್ಟು ಬೇಗ ವಿದ್ಯಾರ್ಥಿಗಳಿಗೆ ದೊರೆಯುವಂತೆ ಮಾಡುತ್ತೇವೆ.  ಎಂ.ಪಿ. ಮಾದೇಗೌಡ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಪಠ್ಯಪುಸ್ತಕ ಸಂಘ-ಬೆಂಗಳೂರು

ಟಾಪ್ ನ್ಯೂಸ್

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.