ಆರು ತಿಂಗಳು ಯಾವುದೇ ಚುನಾವಣೆ ನಡೆಸಲ್ಲ

Team Udayavani, Jun 24, 2021, 4:17 PM IST

04

ಹುಬ್ಬಳ್ಳಿ: ಕೋವಿಡ್‌ ಹಿನ್ನೆಲೆಯಲ್ಲಿ ಜಿಪಂ, ತಾಪಂ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ಇತರೆ ಸಂಘ ಸಂಸ್ಥೆಗಳ ಚುನಾವಣೆ ಮಾಡುವುದು ಬೇಡ ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ನಿರ್ಧಾರವನ್ನು ಚುನಾವಣಾ ಆಯೋಗಕ್ಕೆ ಕಳುಹಿಸಿದ್ದೇವೆಂದು ಕೈಗಾಗರಿಕೆ ಸಚಿವ ಜಗದೀಶ ಶೆಟ್ಟರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಚುನಾವಣೆ ನಡೆಸುವುದು ಸೂಕ್ತವಲ್ಲ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸರಕಾರ ಈ ನಿರ್ಧಾರ ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರವನ್ನು ಚುನಾವಣೆ ಆಯೋಗಕ್ಕೆ ಕಳುಹಿಸಲಾಗಿದೆ. ಹೀಗಾಗಿ ಮುಂದಿನ ಆರು ತಿಂಗಳವರೆಗೆ ಯಾವುದೇ ಚುನಾವಣೆ ನಡೆಯುವುದಿಲ್ಲ ಎನ್ನುವ ನಿರೀಕ್ಷೆಯಿದೆ. ಚುನಾವಣೆ ಕುರಿತು ಹೈಕೋರ್ಟ್‌ ಮಧ್ಯಪ್ರವೇಶ ಮಾಡಿದೆ. ಆದರೆ ಸದ್ಯದ ಪರಿಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತಂದರೆ ಅದನ್ನು ಪರಿಗಣಿಸುವ ಸಾಧ್ಯತೆಗಳಿವೆ ಎಂದರು.

ನಗರದಲ್ಲಿ ಇನ್ಫೋಸಿಸ್‌ ಕಂಪನಿ ತನ್ನ ಕಾರ್ಯಾರಂಭ ಮಾಡುವಂತೆ ಈಗಾಗಲೇ ಕಂಪನಿಯ ನಿರ್ದೇಶಕರನ್ನು ಕರೆದು ಮಾತನಾಡಿದ್ದೇನೆ. ಇಲ್ಲಿ ಉದ್ಯೋಗ ಸೃಷ್ಟಿಸಲು ಅವರು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಸುಮಾರು 5 ಸಾವಿರ ಜನರಿಗೆ ಉದ್ಯೋಗ ನೀಡುವ ಚಿಂತನೆಯಲ್ಲಿ ಇದ್ದಾರೆ. ಆದರೆ ಅವರ ಗ್ರಾಹಕರು ಬೆಂಗಳೂರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಿರುವುದರಿಂದ ಇಲ್ಲಿ ಆರಂಭವಾಗುವುದಕ್ಕೆ ವಿಳಂಬವಾಗುತ್ತಿದೆ. ಒಂದಿಷ್ಟು ವ್ಯವಹಾರ ವೃದ್ಧಿಸಿದರೆ ನಗರದಲ್ಲಿ ಆರಂಭಿಸುವ ಭರವಸೆ ನೀಡಿದ್ದಾರೆ. ಇನ್ಫೋಸಿಸ್‌ ಆರಂಭವಾದರೆ ಇನ್ನಷ್ಟು ಐಟಿ ಕಂಪನಿಗಳು ಪ್ರಾರಂಭವಾಗುವ ನಿರೀಕ್ಷೆಯಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೋವಿಡ್‌ ನಿಯಂತ್ರಣಕ್ಕೆ ಸಾಕಷ್ಟು ಬಿಗಿ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಸೋಂಕು ಸಂಪೂರ್ಣ ಹೋಗಿಲ್ಲ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಕೋವಿಡ್‌ ನಿಯಮಗಳಾದ ಸಾಮಾಜಿಕ ಅಂತರ ಕಾಪಾಡುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ಜನರು ಮರೆಯಬಾರದು. ಜನರು ಜಾಗರೂಕತೆಯಿಂದ ಇದ್ದಷ್ಟು ಆರೋಗ್ಯದಿಂದ ಇರಲು ಸಾಧ್ಯ. ಈ ನಿಯಮಗಳನ್ನು ಪಾಲಿಸಿದರೆ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಬೇಕಾಗಿದೆ ಎಂದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.