ಕಡಿಮೆಯಾಗುತ್ತಿರುವ ಕೋವಿಡ್ ಸೋಂಕು; ಹೆಚ್ಚಿದ ಸಾವಿನ ಆತಂಕ

Team Udayavani, Jun 26, 2021, 12:37 PM IST

ಕಡಿಮೆಯಾಗುತ್ತಿರುವ ಕೋವಿಡ್ ಸೋಂಕು; ಹೆಚ್ಚಿದ ಸಾವಿನ ಆತಂಕ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದ್ದು ರಾಜ್ಯದಲ್ಲೇ ಪಾಸಿಟಿವಿಟಿ ರೇಟ್‌ನಲ್ಲಿ ಮೊದಲ ಸ್ಥಾನದಲ್ಲಿದ್ದ ಜಿಲ್ಲೆಯಲ್ಲಿ ಸೋಂಕು ಕ್ರಮೇಣವಾಗಿ ಕಡಿಮೆಯಾಗುತ್ತಿದೆ. ಆದರೆ, ಸಾವಿನ ಪ್ರಮಾಣ ಏರಿಕೆಯಾಗುತ್ತಿರುವುದು ಆತಂಕ ಮೂಡಿಸಿದೆ.

ಸದ್ಯ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.2.60ಕ್ಕೆ ಇಳಿದಿದ್ದು, ಜಿಲ್ಲೆ ಅನ್‌ಲಾಕ್‌ನತ್ತ ಮುಖ ಮಾಡುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಜಿಲ್ಲಾದ್ಯಂತ ಜೂ.19ರಂದು 3,874 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದ್ದು 177 ಮಂದಿಯಲ್ಲಿ ಸೋಂಕುದೃಢಪಡುವ ಮೂಲಕ ಶೇ.4.56 ಸೋಂಕು ಇಳಿಕೆಯಾಗಿತ್ತು. 7 ಮಂದಿ ಮೃತಪಟ್ಟಿದ್ದರು. ಜೂ.20ರಂದು 986 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 197 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. 3 ಮಂದಿ ಮೃತಪಟ್ಟಿದ್ದರು.

ಜೂ.21ರಂದು 3,460 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 152 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಶೇ.4.39ಕ್ಕೆ ಇಳಿಕೆಯಾದರೂ 3 ಮಂದಿ ಮೃತಪಟ್ಟಿದ್ದರು. ಜೂ.22ರಂದು 3,178 ಮಂದಿಯನ್ನು ಪರೀಕ್ಷೆಗೆಒಳಪಡಿಸಿದ್ದು 183 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿನ ಪ್ರಮಾಣ 5.75ಕ್ಕೆ ಏರಿಕೆಯಾಗಿತ್ತು. 3 ಮಂದಿ ಸಾವನ್ನಪ್ಪಿದ್ದರು. ಜೂ.23ರಂದು 3,393 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 163 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪಾಸಿಟಿವಿಟಿ ರೇಟ್‌ 4.80ಕ್ಕೆ ಇಳಿಕೆಯಾಗಿತ್ತು. ಇಬ್ಬರು ಮೃತಪಟ್ಟಿದ್ದರು. ಜೂ.24 ರಂದು 4,224 ಜನರು ಪರೀಕ್ಷೆ ಮಾಡಿಸಿಕೊಂಡಾಗ ಅದರಲ್ಲಿ 110 ಜನರಲ್ಲಿ ಸೋಂಕುಕಾಣಿಸಿಕೊಂಡು ಸೋಂಕಿನ ಪ್ರಮಾಣ ಶೇ.2.60 ಕನಿಷ್ಟ ಮಟ್ಟ ತಲುಪಿದೆ. ಆದರೆ ಸೋಂಕಿಗೆ 6 ಮಂದಿ ಬಲಿಯಾಗಿದ್ದಾರೆ. ಒಂದು ವಾರದ ಅಂಕಿ-ಅಂಶಗಳನ್ನು ಗಮನಿಸಿದರೆ ಗಣನೀಯವಾಗಿ ಸೋಂಕಿನ ಪ್ರಮಾಣ ಕಡಿಮೆಯಾಗಿರುವುದು ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತೆ ಮಾಡಿದೆ. ಆದರೆ, ಸಾವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ಆತಂಕವನ್ನು ಮೂಡಿಸಿದೆ.

ಕೊರೊನಾ ಸೋಂಕಿನ ಮೊದಲ ಅಲೆಯಲ್ಲಿ 139 ಮಂದಿ ಮೃತಪಟ್ಟಿದ್ದರು. ಎರಡನೇ ಅಲೆಯಲ್ಲಿ 197 (ಗುರುವಾರಕ್ಕೆ) ಮೃತರ ಸಂಖ್ಯೆ ತಲುಪಿದ್ದು ಚಿಂತೆಗೀಡು ಮಾಡಿದೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.