ಟಿಕೆಟ್‌ ಮಾಯೆಯೋಳ್‌ ಅದಲು-ಬದಲಿನ ಆಟ

ಕಲಘಟಗಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಕಥೆ­ಗೊಂದಲ, ಅಸಮಾಧಾನ, ಗುಂಪುಗಾರಿಕೆಯ ವ್ಯಥೆ

Team Udayavani, Jun 27, 2021, 3:29 PM IST

036

ಹುಬ್ಬಳ್ಳಿ: ರಾಜಕೀಯ ಅಂದರೇನೇ ಹಾಗೆ. ಒಂದೇ ಪಕ್ಷದಲ್ಲಿರುತ್ತಾರೆ, ಇಬ್ಬರೂ ಸ್ನೇಹಿತರಂತೆಯೇ ಗೋಚರಿಸುತ್ತಾರೆ. ಆದರೆ, ಯಾರು, ಯಾವಾಗ, ಎಲ್ಲಿ ತಿವಿಯುತ್ತಾರೆ ಎಂಬುದೇ ಗೊತ್ತಾಗುವುದಿಲ್ಲ. ವಿಧಾನಸಭೆ ಚುನಾವಣೆ ಇನ್ನೂ ಎರಡು ವರ್ಷ ಇರುವಾಗಲೇ ಇಂತಹ ವಿದ್ಯಮಾನಕ್ಕೆ ಕಲಘಟಗಿ ಕ್ಷೇತ್ರ ಸಾಕ್ಷಿಯಾಗತೊಡಗಿದೆ. ಕಾಂಗ್ರೆಸ್‌ನಲ್ಲಿನ ಟಿಕೆಟ್‌ ಮಾಯೆ ಹಲವು ಆಯಾಮಗಳನ್ನು ಸೃಷ್ಟಿಸತೊಡಗಿದೆ.

ಕಲಘಟಗಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಿಬ್ಬರ ನಡುವಿನ ತಿಕ್ಕಾಟ ವಿವಿಧ ಮಗ್ಗಲುಗಳು ಗೋಚರಿಸುವಂತೆ ಮಾಡತೊಡಗಿದೆ. ಏನೇ ಆಗಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್‌ ನನ್ನದೇ ಎಂದು ಎರಡೂ ಕಡೆಯವರು ಹೇಳಿಕೊಳ್ಳುತ್ತಿದ್ದಾರೆ. ಮುಂದಿನ ಡಿಸಿಎಂ ಇವರೇ ಎಂದು ಜಾನುವಾರುಗಳ ಮೇಲೆ ಬರೆಯುವಂತಹ ಯತ್ನಗಳು ನಡೆಯತೊಡಗಿವೆ. ರಾಜ್ಯಮಟ್ಟದಲ್ಲಿ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ತಿಕ್ಕಾಟ ನಡೆದಿದ್ದರೆ, ಕಲಘಟಗಿಯಲ್ಲಿ ಶಾಸಕ ಸ್ಥಾನದ ಟಿಕೆಟ್‌ ಕಾದಾಟ ಶುರುವಿಟ್ಟುಕೊಂಡಿದೆ.

ಒಬ್ಬರು ಒಂದು ದಾಳ ಉರುಳಿಸಿದರೆ ಇನ್ನೊಬ್ಬರು ಮತ್ತೂಂದು ದಾಳದ ಮೂಲಕ ಎದುರು ಮೋಡಿ ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್‌ನ ಸ್ಥಿತಿ ನೋಡಿದರೆ ಮುಂದಿನ ಚುನಾವಣೆಯಲ್ಲಿ ರಾಜಕೀಯ ಎದುರಾಳಿಗಳ ಹೊಡೆತಕ್ಕಿಂತ, ಸ್ವಪಕ್ಷೀಯರ ಹೊಡೆತ-ಒಳ ಹೊಡೆತವೇ ದೊಡ್ಡ ಪೆಟ್ಟು ಕೊಡಲಿದೆಯೇ ಎಂಬ ಅನುಮಾನ ಮೂಡಿಸಿವಂತೆ ಮಾಡಿದೆ.

ಕಲಘಟಗಿ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಎರಡು ಬಾರಿ ಕ್ಷೇತ್ರ ಪ್ರತಿನಿಧಿಸಿರುವ ಮಾಜಿ ಸಚಿವ ಸಂತೋಷ ಲಾಡ್‌ ಹಾಗೂ ಕ್ಷೇತ್ರದ ಜತೆ ನಂಟು ಹೊಂದಿರುವ ವಿಧಾನಪರಿಷತ್ತು ಮಾಜಿ ಸದಸ್ಯ ನಾಗರಾಜ ಛಬ್ಬಿ ಅವರ ನಡುವೆ ಟಿಕೆಟ್‌ ಸಮರ ಶುರುವಾಗಿದೆ. ನಾನಾ ನೀನಾ ಎಂಬಷ್ಟರ ಮಟ್ಟಿಗೆ ಪೈಪೋಟಿ ಹೆಚ್ಚತೊಡಗಿದೆ.

ಪಕ್ಷ ಸಂಘಟನೆ ಜತೆಗೆ ಕಳೆದುಕೊಂಡಿರುವ ಕ್ಷೇತ್ರ ಮರು ವಶಕ್ಕೆ ಶ್ರಮಿಸಬೇಕಾದ ಮುಖಂಡರೇ ರಾಜಕೀಯ ವಿರೋಧಿಗಳ ರೀತಿಯಲ್ಲಿ ಸಮರಕ್ಕಿಳಿದಿರುವುದು, ಏಟಿಗೆ ಎದುರೇಟು ನೀಡಲು ಮುಂದಾಗಿರುವುದು ಸಹಜವಾಗಿಯೇ ಕಾರ್ಯಕರ್ತರಲ್ಲಿ ಗೊಂದಲ ತರಿಸಿದೆ. ಯಾರ ಕಡೆ ಮಾತನಾಡಿದರೂ, ಮುಂದೆ ಯಾರಿಗೆ ಟಿಕೆಟ್‌ ಸಿಗುತ್ತದೆಯೋ ಯಾರಿಗೆ ಗೊತ್ತು, ಮಾತನಾಡಿ ಯಾಕೆ ನಿಷ್ಠುರವಾಗುವುದೆಂದು ಅನೇಕರು ಮೌನದಿಂದಲೇ ನಾಟಕ ನೋಡತೊಡಗಿದ್ದಾರೆ.

ಟಾಪ್ ನ್ಯೂಸ್

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

D.K ತಾಪಮಾನದಲ್ಲಿ ಏರಿಕೆ; ಮುಂಜಾಗ್ರತಾ ಕ್ರಮವಾಗಿ ವೆನ್ಲಾಕ್‌ ನಲ್ಲಿ 6 ಬೆಡ್‌ ಮೀಸಲು

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್‌ ಯಾತ್ರೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.