ಮೂರನೇ ಅಲೆ ತಡೆಗೆ ಜಾಗೃತಿ ವಹಿಸಿ: ಶಾಬಾದಿ

ಮೇಲಿಂದ ಮೇಲೆ ಸ್ಯಾನಿಟೈಸರ್‌ ಅಥವಾ ಸಾಬೂನ ಮೂಲಕ ಕೈ ತೊಳೆದುಕೊಳ್ಳಬೇಕು

Team Udayavani, Jul 1, 2021, 7:51 PM IST

Covid

ಸಿಂದಗಿ: ಕೋವಿಡ್ ಎರಡನೇ ಅಲೆಯಲ್ಲಿ ಮನುಕುಲ ಅತ್ಯಂತ ಸಂಕಷ್ಟ ಅನುಭವಿಸಿತು. ಕೋವಿಡ್ ಅಲೆ ಕಡಿಮೆಯಾಗಿದೆ ಎಂದು ನಿರ್ಲಕ್ಷಿಸುವಂತಿಲ್ಲ. ಮೂರನೇ ಅಲೆ ಬರುವ ಬಗ್ಗೆ ವಿಜ್ಞಾನಿಗಳು ಸಾಕಷ್ಟು ಎಚ್ಚರಿಕೆ ನೀಡಿದ್ದಾರೆ. ಆದ್ದರಿಂದ ನಾವು ಜಾಗೃತರಾಗಿರಬೇಕು ಎಂದು ಬಿಜೆಪಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಪ್ರಕೋಷ್ಠಕ ಸಂಚಾಲಕ ಮುತ್ತು ಶಾಬಾದಿ ಹೇಳಿದರು.

ತಾಲೂಕಿನ ಯರಗಲ್‌ ಬಿ.ಕೆ. ಗ್ರಾಮದಲ್ಲಿ ಆರೆಸ್ಸೆಸ್‌ ಶಾಖಾ ಮಂಡಲದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸಿ ಅವರು ಮಾತನಾಡಿದರು. ಮಾರಣಾಂತಿಕ ಕೋವಿಡ್‌-19 ಸೋಂಕಿನ ವಿರುದ್ಧ ಮೇಡ್‌ ಇನ್‌ ಇಂಡಿಯಾ ಲಸಿಕೆಯನ್ನು ಅಭಿವೃದ್ಧಿಪಡಿಸಿದ ಹಾಗೂ ಸೋಂಕು ಹರಡಿದ ಒಂದು ವರ್ಷದೊಳಗೆ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇತರ ಕ್ರಮಗಳನ್ನು ಹೆಚ್ಚಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಾರ್ಯ ಶ್ಲಾಘನೀಯ. ಕೋವಿಡ್‌-19 ವೈರಸ್‌ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಉತ್ತಮ ಕಾರ್ಯ ಮಾಡಿದೆ.

ಮಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ದಿಟ್ಟ ಕ್ರಮ ಕೈಗೊಂಡು ಯಶಸ್ವಿಯಾಗಿದೆ ಎಂದರು. ನಮ್ಮ ಸುತ್ತಲಿನ ಪರಿಸರ ಸ್ವತ್ಛತೆಯಿಟ್ಟುಕೊಳ್ಳುವ ಜೊತೆಗೆ ಗಿಡಗಳನ್ನು ಬೆಳೆಸಬೇಕು. ಪರಿಸರ ಬೆಳೆಸಬೇಕು. ವಾತಾವರಣದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಿಸಬೇಕು. ಜೀವನದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಬ್ಬರ ಮಾಸ್ಕ್ ಇನ್ನೊಬ್ಬರು ಬಲಾಯಿಸಿಕೊಳ್ಳಬಾರದು. ಮೇಲಿಂದ ಮೇಲೆ ಸ್ಯಾನಿಟೈಸರ್‌ ಅಥವಾ ಸಾಬೂನ ಮೂಲಕ ಕೈ ತೊಳೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಮೂರನೇ ಅಲೆ ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸನ್ನದ್ಧರಾಗಿ ನಿಂತಿವೆ. ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊರೊನಾ ಕುರಿತು ವಿಧಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಕೊರೊನಾ ಮುಕ್ತ ದೇಶವನ್ನಾಗಿ ಮಾಡಲು ಸಹಕಾರ ನೀಡೋಣ ಎಂದರು. ಕೊರೊನಾ ವೇಳೆ ಪ್ರಧಾನಿ ಮೋದಿ ಗಟ್ಟಿ ತೀರ್ಮಾನ ಮತ್ತು ಸರಿಯಾದ ಸಮಯದಲ್ಲಿ ಲಾಕ್‌ಡೌನ್‌ ಮಾಡಿದರು. ಭಾರತದಲ್ಲಿ ಪ್ರತಿ ದಿನ ಆರು ಲಕ್ಷ ಪಿಪಿಇ ಕಿಟ್‌ ತಯಾರಾಗುತ್ತಿದೆ. ಈಗ ಜಗತ್ತಿನ ಮುಂದೆ ಭಾರತದ ಶಕ್ತಿ ಅನಾವರಣಗೊಂಡಿದೆ. ಏಳು ವರ್ಷದ ಆಡಳಿತ ಭಾರತವನ್ನು ಸಶಕ್ತಗೊಳಿಸಿದೆ. ಕೊರೊನಾದಿಂದ ದೇಶವನ್ನು ಕಾಪಾಡಲು ನಾವು ಸಮರ್ಥರಾಗಿದ್ದೇವೆ ಎಂದರು. ಕರೆಪ್ಪ ಪೂಜಾರಿ ಇದ್ದರು. ಆರೆಸ್ಸೆಸ್‌ ಮಂಡಲದ 87 ಸ್ವಯಂ ಸೇವಕರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.