ಇಂದು ಸಂಜೆ ಕೇಂದ್ರದ ಮೋದಿ ಸಚಿವ ಸಂಪುಟ ಪುನಾರಚನೆ : ಯಾರಿಗೆ ಒಲಿದೀತು ಅದೃಷ್ಟ?

Team Udayavani, Jul 7, 2021, 7:30 AM IST

ಇಂದು ಸಂಜೆ ಕೇಂದ್ರದ ಮೋದಿ ಸಚಿವ ಸಂಪುಟ ಪುನಾರಚನೆ : ಯಾರಿಗೆ ಒಲಿದೀತು ಅದೃಷ್ಟ?

ಹೊಸದಿಲ್ಲಿ/ ಬೆಂಗಳೂರು: ಪ್ರಧಾನಿ ಮೋದಿ ಬುಧವಾರ ಸಚಿವ ಸಂಪುಟವನ್ನು ಪುನಾರಚಿಸಲಿದ್ದು, ರಾಜ್ಯದಿಂದ ಇಬ್ಬರಿಗೆ ಸ್ಥಾನ ಸಿಗುವ ಸಾಧ್ಯತೆಗಳಿವೆ. ಹಿಂದುಳಿದ ವರ್ಗದವರು, ಯುವ ತಂತ್ರಜ್ಞರು, ಮಹಿಳೆಯರಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಾಜ್ಯದಿಂದ ಸಚಿವರಾಗಿದ್ದ ಸುರೇಶ್‌ ಅಂಗಡಿ ನಿಧನ ಹೊಂದಿ ತೆರವಾಗಿದ್ದ ಸ್ಥಾನದ ಜತೆಗೆ ಇನ್ನೊಂದು ಸ್ಥಾನ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.

ಸದ್ಯ 28 ಸಚಿವ ಸ್ಥಾನಗಳು ಖಾಲಿ ಇದ್ದು, ಇದರಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ತುಂಬುವ ಸಾಧ್ಯತೆ ಇದೆ. ಸಚಿವ ತಾವರ್‌ಚಂದ್‌ ಗೆಹಲೋಟ್ ಅವರನ್ನು ರಾಜ್ಯಪಾಲರನ್ನಾಗಿ ಕರ್ನಾಟಕಕ್ಕೆ ಕಳುಹಿಸಲಾಗಿದ್ದು, ಈ ಸ್ಥಾನವೂ ಖಾಲಿಯಾಗಿದೆ.
ಮುಂದಿನ ವರ್ಷ ಉತ್ತರ ಪ್ರದೇಶ, ಉತ್ತರಾಖಂಡ, ಗುಜರಾತ್‌, ಗೋವಾ, ಮಣಿಪುರ, ಪಂಜಾಬ್‌ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ರಾಜ್ಯಗಳಿಗೆ ಆದ್ಯತೆ ನೀಡುವ ಸಾಧ್ಯತೆಗಳಿವೆ. ಸರಿಯಾಗಿ ನಿರ್ವಹಣೆ ತೋರದ 6ರಿಂದ 7 ಸಚಿವರನ್ನು ಕೈಬಿಡುವ ಸಾಧ್ಯತೆಯೂ ಇದೆ.

ಇಂದು ಸಂಜೆ ಪ್ರಮಾಣ ವಚನ?
ಬುಧವಾರ ಸಂಜೆ 5.30ರಿಂದ 6ರ ನಡುವೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ. ಪ್ರಮುಖವಾಗಿ ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ, ಅಸ್ಸಾಂನ ಮಾಜಿ ಸಿಎಂ ಸರ್ಬಾನಂದ ಸೋನಾವಾಲ್‌, ಬಿಹಾರದ ಮಾಜಿ ಡಿಸಿಎಂ ಸುಶೀಲ್‌ ಮೋದಿ, ಮಹಾರಾಷ್ಟ್ರದ ನಾರಾಯಣ ರಾಣೆ, ಉತ್ತರ ಪ್ರದೇಶದ ಅನುಪ್ರಿಯಾ ಪಟೇಲ್‌ ಸಹಿತ 20ಕ್ಕೂ ಹೆಚ್ಚು ಮಂದಿಗೆ ಮೋದಿಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆಗಳಿವೆ.

ರಾಜ್ಯಕ್ಕೆ ಎರಡು ಸ್ಥಾನ?
ಕರ್ನಾಟಕದ 25 ಸಂಸದರಿದ್ದು, ಪ್ರಹ್ಲಾದ್‌ ಜೋಷಿ ಮತ್ತು ಸದಾನಂದ ಗೌಡ ಸಚಿವರಾಗಿದ್ದಾರೆ. ಸುರೇಶ್‌ ಅಂಗಡಿ ನಿಧನದಿಂದ ಖಾಲಿಯಾಗಿರುವ ಸ್ಥಾನವನ್ನು ರಾಜ್ಯದ ಸಂಸದರಿಗೆ ನೀಡುತ್ತಾರೆ ಎಂಬ ವಿಶ್ವಾಸವಿದೆ. ಇನ್ನೂ 2 ಸ್ಥಾನ ರಾಜ್ಯಕ್ಕೆ ದೊರೆಯಬಹುದು ಎಂಬ ಮಾತು ಕೇಳಿ ಬರುತ್ತಿದೆ. ಮೂವರಿಗೆ ಅವಕಾಶ ಕಲ್ಪಿಸಿದರೆ ಹಾಲಿ ಇರುವ ಹಿರಿಯ ಸಚಿವರಲ್ಲಿ ಯಾರನ್ನಾದರೂ ಕೈಬಿಡುವ ಸಾಧ್ಯತೆಯಿದೆ.

ಇವರು ಸಂಭಾವ್ಯರು
ಬಿ.ವೈ. ರಾಘವೇಂದ್ರ, ಶಿವಕುಮಾರ ಉದಾಸಿ, ಭಗವಂತ ಖೂಬಾ, ಎ. ನಾರಾಯಣಸ್ವಾಮಿ, ರಮೇಶ್‌ ಜಿಗಜಿಣಗಿ , ಉಮೇಶ್‌ ಜಾಧವ್‌ , ಶೋಭಾ ಕರಂದ್ಲಾಜೆ, ಪ್ರತಾಪ್‌ಸಿಂಹ, ಪಿ.ಸಿ.ಮೋಹನ್‌.

ದಿಲ್ಲಿಗೆ ಬರುವಂತೆ ನನಗೆ ಬುಲಾವ್‌ ಬಂದಿದೆ. ಆದರೆ ಸಂಪುಟ ವಿಸ್ತರಣೆ, ಸಚಿವ ಸ್ಥಾನದ ಯಾವ ಮಾಹಿತಿಯನ್ನೂ ನೀಡಿಲ್ಲ.
-ರಮೇಶ್‌ ಜಿಗಜಿಣಗಿ, ಸಂಸದ

ಕೇಂದ್ರ ಸಂಪುಟ ಸೇರುವ ಬಗ್ಗೆ ಅಧಿಕೃತ ಮಾಹಿತಿ ಇಲ್ಲ. ಪಕ್ಷದ ಸೂಚನೆ ಮೇರೆಗೆ ದಿಲ್ಲಿಗೆ ತೆರಳುತ್ತಿದ್ದೇನೆ.
-ಎ. ನಾರಾಯಣಸ್ವಾಮಿ, ಸಂಸದ

ಟಾಪ್ ನ್ಯೂಸ್

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.